ಪಾಕ್ ನಲ್ಲಿ ಉಗ್ರರ ಅಟ್ಟಹಾಸ: ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 46 ಮಂದಿ ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!
ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಇಂದು ನಡೆದ ಪ್ರಬಲ ಆತ್ಮಹತ್ಯಾ ಸ್ಫೋಟದಲ್ಲಿ 46 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಮತ್ತು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
Published: 30th January 2023 03:05 PM | Last Updated: 30th January 2023 09:25 PM | A+A A-

ಆತ್ಮಾಹುತಿ ಬಾಂಬ್ ದಾಳಿ ನಡೆದ ಮಸೀದಿ ಚಿತ್ರ
ಪೇಶಾವರ: ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಇಂದು ನಡೆದ ಪ್ರಬಲ ಆತ್ಮಹತ್ಯಾ ಸ್ಫೋಟದಲ್ಲಿ 46 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಮತ್ತು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಅಧಿಕಾರಿಗಳ ಪ್ರಕಾರ, ಆತ್ಮಹತ್ಯಾ ದಾಳಿಕೋರನು ಪ್ರಾರ್ಥನೆಯ ಸಮಯದಲ್ಲಿ ಮುಂದಿನ ಸಾಲಿನಲ್ಲಿದ್ದು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಪರಿಣಾಮ ಜೊಹ್ರ್ ಪ್ರಾರ್ಥನೆ ಸಲ್ಲಿಸುತ್ತಿದ್ದ 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ.
ಸ್ಫೋಟದಲ್ಲಿ ಗಾಯಗೊಂಡಿರುವವರ ಪೈಕಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇವೆ. ಸದ್ಯ ಗಾಯಾಳುಗಳನ್ನು ಪೇಶಾವರ ಲೇಡಿ ರೀಡಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ, ಕ್ರೈಸ್ತರ ಮನೆಗಳು ಧ್ವಂಸ
ಸ್ಫೋಟದಲ್ಲಿ 46 ಮಂದಿ ಮೃತಪಟ್ಟಿದ್ದಾರೆ. ಇನ್ನು 100 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ.
ಆತ್ಮಾಹುತಿ ಬಾಂಬ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ಶಹಬಾಜ್ ಷರೀಫ್ ಅವರು, ಸಂತ್ರಸ್ತರಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ ದಾಳಿಯ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಭರವಸೆ ನೀಡಿದ್ದಾರೆ.