ಪಾಕ್ ಸಂಸತ್ ಚುನಾವಣೆ: ಎಲ್ಲ 33 ಕ್ಷೇತ್ರಗಳಲ್ಲಿ ಇಮ್ರಾನ್ ಖಾನ್ ಒಬ್ಬರೇ ಅಭ್ಯರ್ಥಿಯಾಗಿ ಸ್ಪರ್ಧೆ!

ಮಾರ್ಚ್‌ನಲ್ಲಿ ನಡೆಯಲಿರುವ ಪಾಕಿಸ್ತಾನದ ಸಂಸತ್ತಿನ ಎಲ್ಲ 33 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಒಬ್ಬರೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅವರ ಪಕ್ಷ ಘೋಷಿಸಿದೆ.
ಇಮ್ರಾನ್ ಖಾನ್
ಇಮ್ರಾನ್ ಖಾನ್
Updated on

ಲಾಹೋರ್: ಮಾರ್ಚ್‌ನಲ್ಲಿ ನಡೆಯಲಿರುವ ಪಾಕಿಸ್ತಾನದ ಸಂಸತ್ತಿನ ಎಲ್ಲ 33 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಒಬ್ಬರೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅವರ ಪಕ್ಷ ಘೋಷಿಸಿದೆ.

ಭಾನುವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಪಾಕಿಸ್ತಾನ್ ತೆಹ್ರೀಕ್ ಇ ಇನ್‌ಸಾಫ್(ಪಿಟಿಐ) ಪಕ್ಷದ ಉಪಾಧ್ಯಕ್ಷ ಹಾಗೂ ಮಾಜಿ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ, ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಎಲ್ಲ 33 ಕ್ಷೇತ್ರಗಳಲ್ಲಿ ಇಮ್ರಾನ್ ಖಾನ್ ಪಕ್ಷದ ಏಕೈಕ ಅಭ್ಯರ್ಥಿಯಾಗಲಿದ್ದಾರೆ. ಭಾನುವಾರ ಲಾಹೋರ್‌ನ ಜಮಾನ್ ಪಾರ್ಕ್‌ನಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರ ಪಾಕಿಸ್ತಾನದ ಚುನಾವಣಾ ಆಯೋಗವು ರಾಷ್ಟ್ರೀಯ ಸಂಸತ್ತಿನ 33 ಕ್ಷೇತ್ರಗಳ ಉಪಚುನಾವಣಾ ದಿನಾಂಕವನ್ನು ಘೋಷಿಸಿತ್ತು. ಕಳೆದ ವರ್ಷ ಏಪ್ರಿಲ್‌ನಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಸೋತು ಇಮ್ರಾನ್ ಖಾನ್ ಅಧಿಕಾರ ಕಳೆದುಕೊಂಡಿದ್ದರು. ಬಳಿಕ ಅವರ ಪಕ್ಷದ ಎಲ್ಲ ಸಂಸದರು ರಾಜೀನಾಮೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com