ಪೂರ್ವ ಪಾಕಿಸ್ತಾನ: ವ್ಯಾನ್‌ನಲ್ಲಿ ಗ್ಯಾಸ್ ಸ್ಫೋಟ; ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಾವು
ಲಾಹೋರ್: ಶನಿವಾರ ಪೂರ್ವ ಪಾಕಿಸ್ತಾನದಲ್ಲಿ ಪ್ರಯಾಣಿಕರ ವ್ಯಾನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದ್ದಾರೆ. ಒಬ್ಬ ಮಹಿಳೆ, ಆಕೆಯ ಮಗಳು ಮತ್ತು ಆಕೆಯ ಇಬ್ಬರು ಮೊಮ್ಮಗಳು ಮೃತಪಟ್ಟಿದ್ದಾರೆ. ಎಂಟು ಪ್ರಯಾಣಿಕರಿಗೆ ವಿವಿಧ ಹಂತದ ಸುಟ್ಟ ಗಾಯಗಳಾಗಿವೆ.
ಪಂಜಾಬ್ ಪ್ರಾಂತ್ಯದ ಸರ್ಗೋಧಾ ಜಿಲ್ಲೆಯಲ್ಲಿ ವಾಹನದಲ್ಲಿ ಅಳವಡಿಸಲಾಗಿದ್ದ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡ ನಂತರ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿ ನಬೀಲ್ ಭಟ್ಟಿ ತಿಳಿಸಿದ್ದಾರೆ.
ತಕ್ಷಣವೇ ವ್ಯಾನ್ ಬೆಂಕಿಗೆ ಆಹುತಿಯಾಗಿದೆ. ಯಿತು. ಐವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಪ್ರಯಾಣಿಕರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಮೂವರ ದೇಹಗಳು ಗುರುತು ಹಿಡಿಯಲಾಗದಷ್ಟು ಸುಟ್ಟು ಕರಕಲಾಗಿವೆ.
ಪಂಜಾಬ್ ಹಂಗಾಮಿ ಮುಖ್ಯಮಂತ್ರಿ ಮೊಹ್ಸಿನ್ ನಖ್ವಿ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ