
ಸೀತಾ ದಹಾಲ್
ಕಠ್ಮಂಡು: ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅವರ ಪತ್ನಿ ಸೀತಾ ದಹಾಲ್ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.
ವರದಿಗಳ ಪ್ರಕಾರ, ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಸೀತಾ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಕಠ್ಮಂಡುವಿನಲ್ಲಿ ನಾರ್ವಿಕ್ ಇಂಟರ್ನ್ಯಾಷನಲ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯ ಮೂಲಗಳು ತಿಳಿಸಿವೆ.
Sita Dahal, wife of Nepal PM Pushpa Kamal Dahal 'Prachanda', passed away today after suffering a cardiac arrest following prolonged illness. pic.twitter.com/zqLL9FJTlN
— ANI (@ANI) July 12, 2023