ವಾಷಿಂಗ್ಟನ್ ನ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್-ಅಮೆರಿಕ ಪ್ರಥಮ ಮಹಿಳೆ ಜಿಲ್ ಬೈಡನ್ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ
ವಾಷಿಂಗ್ಟನ್ ನ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್-ಅಮೆರಿಕ ಪ್ರಥಮ ಮಹಿಳೆ ಜಿಲ್ ಬೈಡನ್ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಬೆಂಗಳೂರು, ಅಹಮದಾಬಾದ್‌ನಲ್ಲಿ ಅಮೆರಿಕ ಕಾನ್ಸುಲೇಟ್‌ ಕಚೇರಿ ಆರಂಭ: ಶ್ವೇತಭವನ

ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಅಮೆರಿಕದ ಎರಡು ಹೊಸ ಕಾನ್ಸುಲೇಟ್‌ ಕಚೇರಿಗಳನ್ನು ತೆರೆಯಲು ಉದ್ದೇಶಿಸಿದ್ದು, ಅದೇ ರೀತಿ ಭಾರತ ಸಹ ಸಿಯಾಟಲ್‌ನಲ್ಲಿ ತನ್ನ ರಾಜತಾಂತ್ರಿಕ ಕಚೇರಿ ಆರಂಭಿಸಲಿದೆ ಎಂದು ಶ್ವೇತಭವನದ...

ವಾಷಿಂಗ್ಟನ್: ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಅಮೆರಿಕದ ಎರಡು ಹೊಸ ಕಾನ್ಸುಲೇಟ್‌ ಕಚೇರಿಗಳನ್ನು ತೆರೆಯಲು ಉದ್ದೇಶಿಸಿದ್ದು, ಅದೇ ರೀತಿ ಭಾರತ ಸಹ ಸಿಯಾಟಲ್‌ನಲ್ಲಿ ತನ್ನ ರಾಜತಾಂತ್ರಿಕ ಕಚೇರಿ ಆರಂಭಿಸಲಿದೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಅಮೆರಿಕ ಮತ್ತು ಭಾರತದ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಬೇಕು ಎಂಬ ದೃಷ್ಟಿಯಿಂದ ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಮೆರಿಕದ ಇನ್ನೂ ಕೆಲವು ನಗರಗಳಲ್ಲಿ ಭಾರತ ತನ್ನ ಕಾನ್ಸುಲೇಟ್‌ ಕಚೇರಿ ಆರಂಭಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಅಮೆರಿಕವು ಭಾರತೀಯ ವಿದ್ಯಾರ್ಥಿಗಳಿಗೆ ದಾಖಲೆಯ 125,000 ವೀಸಾಗಳನ್ನು ನೀಡಿದೆ ಎಂದು ಶ್ವೇತಭವನದ ಅಧಿಕಾರಿ ತಿಳಿಸಿದ್ದಾರೆ. 

ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷ ಶೇಕಡಾ 20 ರಷ್ಟು ಹೆಚ್ಚಳದೊಂದಿಗೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಅತಿದೊಡ್ಡ ವಿದೇಶಿ ವಿದ್ಯಾರ್ಥಿ ಸಮುದಾಯವಾಗಿದ್ದಾರೆ ಎಂದು ಅಮೆರಿಕದ ಹಿರಿಯ ಆಡಳಿತ ಅಧಿಕಾರಿ ಹೇಳಿದ್ದಾರೆ.

ದೆಹಲಿಯಲ್ಲಿ ಅಮೆರಿಕದ ರಾಯಭಾರ ಕಚೇರಿ ಇದ್ದು, ಮುಂಬೈ, ಕೋಲ್ಕತ್ತಾ, ಚೆನ್ನೈ ಮತ್ತು ಹೈದರಾಬಾದ್ ನಲ್ಲಿರುವ ಕಾನ್ಸುಲೇಟ್‌ಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ. ಅದೇ ರೀತಿ ಭಾರತ ಸಹ ಅಮೆರಿಕದ ವಾಷಿಂಗ್ಟನ್ ನಲ್ಲಿ ರಾಯಭಾರ ಕಚೇರಿ ಹೊಂದಿದ್ದು, ನ್ಯೂಯಾರ್ಕ್, ಸ್ಯಾನ್ ಫ್ರಾನ್ಸಿಸ್ಕೋ, ಚಿಕಾಗೋ, ಹೂಸ್ಟನ್ ಮತ್ತು ಅಟ್ಲಾಂಟಾ ಸೇರಿದಂತೆ ಐದು ಕಾನ್ಸುಲೇಟ್‌ಗಳನ್ನು ಹೊಂದಿದೆ.

Related Stories

No stories found.

Advertisement

X
Kannada Prabha
www.kannadaprabha.com