ಕಾಂಗೋದಲ್ಲಿ ಎದುರಾಗಿರುವ ಪ್ರವಾಹ.
ಕಾಂಗೋದಲ್ಲಿ ಎದುರಾಗಿರುವ ಪ್ರವಾಹ.

ಕಾಂಗೋದಲ್ಲಿ ಭಾರೀ ಪ್ರವಾಹ: 178ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

ಕಾಂಗೊ ಪ್ರಜಾತಾಂತ್ರಿಕ ಗಣರಾಜ್ಯದ ದಕ್ಷಿಣ ಕಿವು ಪ್ರಾಂತದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಹಾಗೂ ಪ್ರವಾಹ ಉಂಟಾಗಿದ್ದು, ಪ್ರವಾಹದ ಪರಿಣಾಮ 178ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬುಕಾವು: ಕಾಂಗೊ ಪ್ರಜಾತಾಂತ್ರಿಕ ಗಣರಾಜ್ಯದ ದಕ್ಷಿಣ ಕಿವು ಪ್ರಾಂತದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಹಾಗೂ ಪ್ರವಾಹ ಉಂಟಾಗಿದ್ದು, ಪ್ರವಾಹದ ಪರಿಣಾಮ 178ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನೆರೆಯ ರಾಷ್ಟ್ರವಾದ ರ್ವಾಂಡಾದಲ್ಲಿಯೂ ಸತತವಾಗಿ ಭಾರೀ ಮಳೆಯಾಗುತ್ತಿದ್ದು, ಹಲವಾರು ಮಂದಿ ಸಾವನ್ನಪ್ಪಿದ್ದಾರೆಂದು ಹೇಳಿದ್ದಾರೆ.

ಭೀಕರವಾದ ಪ್ರವಾಹದಿಂದಾಗಿ ನೂರಾರು ಮನೆಗಳು ಕೊಚ್ಚಿಹೋಗಿದ್ದು, ಕಾಲೆಹೆ, ಕೀವು ನದಿ ಪಶ್ಚಿಮ ಪ್ರದೇಶ ಹಾಗೂ ರ್ವಾಂಡಜಾ ಗಡಿ ಪ್ರದೇಶದಲ್ಲಿ 50ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆಂದು ಕ್ಷಿಣ ಕಿವು ಪ್ರಾಂತದ ಗವರ್ನರ್ ಥಿಯೊ ನಗ್ವಾಭಿಜೆ ಮಾಹಿತಿ ನೀಡಿದ್ದಾರೆ.

ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಹಾಗೂ ಪ್ರವಾಹದಿಂದಾಗಿ 176 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವುದಾಗಿ ಹೇಳಿದರು.

ಮಳೆ ಸಂಬಂಧಿ ದುರಂತಗಳಲ್ಲಿ ಸಾವನ್ನಪ್ಪಿದವರ ಸ್ಮರಣಾರ್ಥವಾಗಿ ಸೋಮವಾರ ರಾಷ್ಟ್ರೀಯ ಶೋಕಾಚಾರಣೆಗೆ ಕಾಂಗೊ ಪ್ರಜಾತಾಂತ್ರಿಕ ಗಣರಾಜ್ಯ ಸರ್ಕಾರ ಕರೆ ನೀಡಿದೆ.

ಶೋಕಾಚರಣೆಗೆ ದಿನ ಎಲ್ಲಾ ಸರಕಾರಿ ಕಚೇರಿಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸುವಂತೆ ಸೂಚಿಸಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com