ಇಮ್ರಾನ್ ಖಾನ್ ಬೆನ್ನಲ್ಲೇ ಪಾಕ್ ವಿದೇಶಾಂಗ ಮಾಜಿ ಸಚಿವ ಖುರೇಷಿ ಬಂಧನ: ವರದಿ
ಇಸ್ಲಾಮಾಬಾದ್: ಪಾಕ್ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಬಂಧನ ಬೆನ್ನಲ್ಲೇ, ಅವರ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿದ್ದ ಶಾ ಮೆಹಮೂದ್ ಖುರೇಷಿ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಉಪಾಧ್ಯಕ್ಷರೂ ಆಗಿರುವ ಖುರೇಷಿ ಅವರನ್ನು ಇಸ್ಲಾಮಾಬಾದ್ ಪೊಲೀಸರು ಗುರುವಾರ ಬಂಧಿಸಿ ಅಜ್ಞಾತ ಸ್ಥಳದಲ್ಲಿ ಇರಿಸಿದ್ದಾರೆಂದು ಹೇಳಲಾಗುತ್ತಿದೆ.
ಪಂಜಾಬ್ ಮತ್ತು ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಗಲಭೆ ಮತ್ತು ಬೆಂಕಿ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಖುರೇಷಿ ಅವರನ್ನು ಇಸ್ಲಾಮಾಬಾದ್‌ನ ಗಿಲ್ಗಿಟ್-ಬಾಲ್ಟಿಸ್ತಾನ್ ಹೌಸ್‌ನಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಬಂಧನಕ್ಕೂ ಮುನ್ನ ಪಕ್ಷದ ಕಾರ್ಯಕರಿಗೆ ಕರೆ ನೀಡಿರುವ ಖುರೇಶಿ, ದೇಶದಲ್ಲಿ ನಿಜವಾದ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಮುಂದುವರಿಸುವಂತೆ ತಿಳಿಸಿದ್ದಾರೆಂದು ತಿಳಿದುಬಂದಿದೆ.
“ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಪಶ್ಚಾತ್ತಾಪ ಪಡುವ ಅಗತ್ಯವೂ ಇಲ್ಲ” ಎಂಬ ಹೇಳಿದ್ದಾರೆಂದು ವರದಿಗಳು ತಿಳಿಸಿವೆ.
ಇಮ್ರಾನ್ ಖಾನ್ ಅವರ ಬಂಧನದ ನಂತರ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಅಪಾರ ಸಾವುನೋವುಗಳಾಗಿದ್ದು, ಈ ಬಗ್ಗೆ ಖುರೇಷಿ ಆಘಾತ ವ್ಯಕ್ತಪಡಿಸಿದ್ದರು.
ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿತ್ತು.
ಪಾಕಿಸ್ತಾನ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯವು ಖಾನ್ ಅವರನ್ನು 8 ದಿನಗಳ ಕಾಲ ಎನ್‌ಎಬಿ ವಶಕ್ಕೆ ನೀಡಿ ಆದೇಶಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ