ಎಲ್ ಸಾಲ್ವಡೋರ್‌: ಫುಟ್'ಬಾಲ್ ಕ್ರೀಡಾಂಗಣದಲ್ಲಿ ಕಾಲ್ತುಳಿತ, 9 ಮಂದಿ ಸಾವು

ರಿಪಬ್ಲಿಕ್ ಆಫ್ ಎಲ್ ಸಾಲ್ವಡೋರ್‌ನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸ್ಥಳೀಯ ಫುಟ್‌ಬಾಲ್ ಪಂದ್ಯಾವಳಿ ವೇಳೆ ಕಾಲ್ತುಳಿತ ಸಂಭವಿಸಿದ್ದು, ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗಾಯಾಳುವನ್ನು ರಕ್ಷಣೆ ಮಾಡುತ್ತಿರುವುದು.
ಗಾಯಾಳುವನ್ನು ರಕ್ಷಣೆ ಮಾಡುತ್ತಿರುವುದು.

ಸ್ಯಾನ್ ಸಾಲ್ವಡೋರ್: ರಿಪಬ್ಲಿಕ್ ಆಫ್ ಎಲ್ ಸಾಲ್ವಡೋರ್‌ನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸ್ಥಳೀಯ ಫುಟ್‌ಬಾಲ್ ಪಂದ್ಯಾವಳಿ ವೇಳೆ ಕಾಲ್ತುಳಿತ ಸಂಭವಿಸಿದ್ದು, ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

‘ಕಸಕಾಟ್ಲನ್ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 9 ಮಂದಿ ಮೃತಪಟ್ಟಿದ್ಧಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಹಲವು ಗಾಯಗೊಂಡಿದ್ದು, ಈ ಪೈಕಿ ಹಲವ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಲಿಯಾಂಜಾ ಮತ್ತು ಎಫ್‌ಎಎಸ್ ತಂಡಗಳ ನಡುವಿನ ಪಂದ್ಯವನ್ನು ವೀಕ್ಷಿಸಲು ರಾಜಧಾನಿ ಸ್ಯಾನ್ ಸಾಲ್ವಡಾರ್‌ನ ಕ್ರೀಡಾಂಗಣದ ಬಳಿ ಸಾಕಷ್ಟು ಜನರು ಸೇರಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com