ವಿದೇಶ

"ನಾನು ನಿಮ್ಮ ಆಟೋಗ್ರಾಫ್ ಪಡೆಯಬೇಕು...": ಮೋದಿಗೆ ಬೈಡನ್

ಜಗತ್ತಿನ ದೊಡ್ಡಣ್ಣ ಎಂದೇ ಕರೆಸಿಕೊಳ್ಳುತ್ತಿದ್ದ ಅಮೇರಿಕ ಅಧ್ಯಕ್ಷ ಜೋ ಬೈಡನ್ ಮೋದಿ ಅವರ ಬಳಿ "ನನಗೆ ನಿಮ್ಮ ಆಟೋಗ್ರಾಫ್ ಬೇಕು" ಎಂದು ಕೇಳಿದ್ದಾರೆ.

"ನಾನು ನಿಮ್ಮ ಆಟೋಗ್ರಾಫ್ ಪಡೆಯಬೇಕು...": ಮೋದಿಗೆ ಬೈಡನ್
ಅಮೇರಿಕಾ ಅಧ್ಯಕ್ಷ ಜೋ ಬೈಡನ್- ಪ್ರಧಾನಿ ಮೋದಿ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ಅಮೇರಿಕಾ ಅಧ್ಯಕ್ಷರನ್ನೂ ಮೀರಿದ ಜನಪ್ರಿಯತೆ ಹೊಂದಿದ್ದಾರೆಂಬುದು ಹೊಸ ಸುದ್ದಿಯೇನಲ್ಲ. ಈಗ ಇದನ್ನು ಮತ್ತೊಮ್ಮೆ ಸಾಬೀತುಪಡಿಸುವ ಬೆಳವಣಿಗೆ ನಡೆದಿದ್ದು, ಜಗತ್ತಿನ ದೊಡ್ಡಣ್ಣ ಎಂದೇ ಕರೆಸಿಕೊಳ್ಳುತ್ತಿದ್ದ ಅಮೇರಿಕ ಅಧ್ಯಕ್ಷ ಜೋ ಬೈಡನ್ ಮೋದಿ ಅವರ ಬಳಿ "ನಾನು  ನಿಮ್ಮ ಆಟೋಗ್ರಾಫ್ ಪಡೆಯಬೇಕು" ಎಂದು ಕೇಳಿದ್ದಾರೆ. 
 
ಮುಂದಿನ ತಿಂಗಳು ಪ್ರಧಾನಿ ಮೋದಿ ವಾಷಿಂಗ್ ಟನ್ ಡಿಸಿಗೆ ಭೇಟಿ ನೀಡಲಿದ್ದು, ಪ್ರಧಾನಿ ಮೋದಿ ಭಾಗಿಯಾಗುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅಲ್ಲಿನ ಪ್ರಮುಖ ನಾಗರಿಕರಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬೇಡಿಕೆಗಳು ಬರುತ್ತಿದೆ ಎಂಬುದನ್ನು ಅಮೇರಿಕಾ ಅಧ್ಯಕ್ಷರು ಹೇಳಿದ್ದಾರೆ. 

ಇದೇ ರೀತಿಯ ಹೇಳಿಕೆ ನೀಡಿರುವ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್, ಪ್ರಧಾನಿ ಮೋದಿ ಭಾಗವಹಿಸಿ ಮಾತನಾಡಲಿರುವ ಸಮುದಾಯದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ಬರುತ್ತಿರುವ ಬೇಡಿಕೆಗಳನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಮಂಗಳವಾರ ಪ್ರಧಾನಿ ಮೋದಿ ಆಸ್ಟ್ರೇಲಿಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಲಿದ್ದು, ಆ ಸ್ಥಳದಲ್ಲಿ 20,000 ಮಂದಿಗೆ ಆಸನ ವ್ಯವಸ್ಥೆಯ ಸಾಮರ್ಥ್ಯ ಇದೆ ಆದರೆ ಅದಕ್ಕಿಂತಲೂ ಹೆಚ್ಚಿನ ಬೇಡಿಕೆ ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.