ಹೌತಿ ಬಂಡುಕೋರರಿಂದ ಭಾರತ ಮೂಲದ ಹಡಗಿನ ಅಪಹರಣ: ಇಸ್ರೇಲ್
ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ (India bound Ship) ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು (Yemen Houthi Rebels) ಕೆಂಪು ಸಮುದ್ರದಲ್ಲಿ ಅಪಹರಿಸಿದ್ದಾರೆ(Ship Hijack) ಎಂದು ಇಸ್ರೇಲ್ ಹೇಳಿದೆ.
Published: 20th November 2023 12:21 AM | Last Updated: 20th November 2023 12:21 AM | A+A A-

ಹೌತಿ ಬಂಡುಕೋರರಿಂದ ಭಾರತ ಮೂಲದ ಹಡಗಿನ ಅಪಹರಣ
ನವದೆಹಲಿ: ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ (India bound Ship) ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು (Yemen Houthi Rebels) ಕೆಂಪು ಸಮುದ್ರದಲ್ಲಿ ಅಪಹರಿಸಿದ್ದಾರೆ(Ship Hijack) ಎಂದು ಇಸ್ರೇಲ್ ಹೇಳಿದೆ.
ಹೌದು.. ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ (India bound Ship) ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು (Yemen Houthi Rebels) ಕೆಂಪು ಸಮುದ್ರದಲ್ಲಿ ಅಪಹರಿಸಿದ್ದು, ಹಡಗಿನಲ್ಲಿ ವಿವಿಧ ರಾಷ್ಟ್ರಗಳಿಗೆ ಸೇರಿದ ಸುಮಾರು 25 ಸಿಬ್ಬಂದಿ ಇದ್ದಾರೆ. ಇಸ್ರೇಲ್ ಹಡಗನ್ನು ಹೈಜಾಕ್ ಮಾಡಿರುವುದಾಗಿ ಹೌತಿಗಳು ಹೇಳಿದ್ದರು. ಆದರೆ ಹೌತಿಗಳ ಹೇಳಿಕೆಯನ್ನು ನಿರಾಕರಿಸಿರುವ ಇಸ್ರೇಲ್ ಸರ್ಕಾರ (Israel Government), ಅಪಹರಣಕ್ಕೊಳಗಾದ ಗ್ಯಾಲಕ್ಸಿ ಲೀಡರ್ (Galaxy Leader) ಹಡಗಿನಲ್ಲಿ ಯಾವುದೇ ಭಾರತೀಯರು(Indians) ಇಲ್ಲ.. ಅಲ್ಲದೆ ಅದು ಇಸ್ರೇಲ್ ನ ಹಡಗಲ್ಲ ಎಂದು ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ಬಂಡುಕೋರರ ತೀವ್ರ ಗುಂಡಿನ ದಾಳಿ; ಭಾರತಕ್ಕೆ ಪಲಾಯನ ಮಾಡಿದ್ದ 29 ಮ್ಯಾನ್ಮಾರ್ ಯೋಧರ ಹಸ್ತಾಂತರ!
ಅಪಹರಣವನ್ನು ದೃಢೀಕರಿಸಿದ ಇಸ್ರೇಲಿ ರಕ್ಷಣಾ ಪಡೆಗಳು ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ದಕ್ಷಿಣ ಕೆಂಪು ಸಮುದ್ರದಲ್ಲಿ ಯೆಮೆನ್ ಬಳಿ ಹೌತಿಗಳು ಸರಕು ಹಡಗನ್ನು ಅಪಹರಿಸಿದ್ದಾರೆ. ಜಾಗತಿಕ ಪರಿಣಾಮದ ಅತ್ಯಂತ ಗಂಭೀರ ಘಟನೆಯಾಗಿದೆ. ಹಡಗು ಭಾರತಕ್ಕೆ ಟರ್ಕಿಯಿಂದ ಹೊರಟಿತ್ತು. ಹಡಗಿನಲ್ಲಿ ಇಸ್ರೇಲಿಗಳನ್ನು ಒಳಗೊಂಡಂತೆ ವಿವಿಧ ರಾಷ್ಟ್ರಗಳ ನಾಗರಿಕ ಸಿಬ್ಬಂದಿ ಇದ್ದಾರೆ. ಆದರೆ ಈ ಹಡುಗು ಇಸ್ರೇಲ್‌ಗೆ ಸೇರಿದ್ದಲ್ಲ ಎಂದು ಹೇಳಿದೆ.
ಹೌತಿಗಳು ಅಪಹರಿಸಿರುವ ಹಡಗು ಇಸ್ರೇಲ್‌ಗೆ ಸೇರಿದ್ದಲ್ಲ. ಬ್ರಿಟಿಷ್ ಕಂಪನಿಯ ಒಡೆತನದ ಮತ್ತು ಜಪಾನ್ ಸಂಸ್ಥೆಯ ನಿರ್ವಹಣೆ ಮಾಡುತ್ತಿರುವ ಹಡಗನ್ನು ಯೆಮೆನ್ ಹೌತಿ ಬಂಡುಕೋರರು ಇರಾನ್ ಮಾರ್ಗದರ್ಶನದಲ್ಲಿ ಅಪಹರಿಸಿದ್ದಾರೆ. ಇರಾನ್ ಮುಂದೆ ನಿಂತು ಅಂತಾರಾಷ್ಟ್ರೀಯ ಹಡಗು ಅಪರಹರಣಕ್ಕೆ ಸಹಕರಿಸಿರುವುದು ಖಂಡನಾರ್ಹವಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಾರ್ಯಾಲಯವು ಟ್ವೀಟ್ ಮಾಡಿದೆ.