8 ಉಗ್ರರ ಹತ್ಯೆಗೈದ ಪಾಕಿಸ್ತಾನ ಸೇನೆ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ದಕ್ಷಿಣ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 8 ಉಗ್ರರನ್ನು ಹತ್ಯೆ ಮಾಡಿದೆ ಎಂದು ಪಾಕಿಸ್ತಾನದ ಸೇನೆಯ ಮಾಧ್ಯಮ ವಿಭಾಗ ಸೋಮವಾರ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ದಕ್ಷಿಣ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 8 ಉಗ್ರರನ್ನು ಹತ್ಯೆ ಮಾಡಿದೆ ಎಂದು ಪಾಕಿಸ್ತಾನದ ಸೇನೆಯ ಮಾಧ್ಯಮ ವಿಭಾಗ ಸೋಮವಾರ ಮಾಹಿತಿ ನೀಡಿದೆ.

‘ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಸರೋಘ ಪ್ರದೇಶದಲ್ಲಿ ಗುಪ್ತಚರ ಮಾಹಿತಿ ಆಧಾರಿತ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಸೈನಿಕರು ಮತ್ತು ಉಗ್ರರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು, 8 ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಿದೆ.

ಹತ್ಯೆಯಾದ ಉಗ್ರರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ' ಎಂದು ತಿಳಿಸಿದೆ. ಹತ್ಯೆಯಾದ ಭಯೋತ್ಪಾದಕರು ಯಾವ ಸಂಘಟನೆಗೆ ಸೇರಿದವರು ಎಂದು ತಿಳಿದು ಬಂದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com