ನಿಜ್ಜರ್ ಹತ್ಯೆ ಬಳಿಕ ಹಳಸಿದ ಸಂಬಂಧ: ನಿಮ್ಮ ರಾಜತಾಂತ್ರಿಕ ಅಧಿಕಾರಿಗಳ ವಾಪಸ್​​ ಕರೆಸಿಕೊಳ್ಳಿ; ಕೆನಡಾಗೆ ಭಾರತ ಕಟ್ಟಾಜ್ಞೆ

ಸಿಖ್‌ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಬಳಿಕ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧ ದಿನಕಳೆದಂತೆ ಹದಗೆಡುತ್ತಿದ್ದು, ಇದರ ನಡುವಲ್ಲೇ ನಿಮ್ಮ 40 ಮಂದಿ ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಕೆನಡಾಗೆ ಭಾರತದ ಸೂಚಿಸಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಸಿಖ್‌ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಬಳಿಕ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧ ದಿನಕಳೆದಂತೆ ಹದಗೆಡುತ್ತಿದ್ದು, ಇದರ ನಡುವಲ್ಲೇ ನಿಮ್ಮ 40 ಮಂದಿ ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಕೆನಡಾಗೆ ಭಾರತದ ಸೂಚಿಸಿದೆ ಎಂದು ತಿಳಿದುಬಂದಿದೆ.

ಈ ಕುರಿತು ಫೈನಾನ್ಷಿಯಲ್ ಟೈಮ್ಸ್‌ನ ವರದಿ ಮಾಡಿದ್ದು, ವರದಿ ಪ್ರಕಾರ, ಅಕ್ಟೋಬರ್ 10 ರೊಳಗೆ ನಿಮ್ಮ 40 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ತಿಳಿಸಿದೆ ಎಂದು ತಿಳಿದುಬಂದಿದೆ.

ನಿಗದಿತ ದಿನಾಂಕದ ನಂತರವೂ ಇಲ್ಲಿಯೇ ಉಳಿಯುವ ಅಧಿಕಾರಿಗಳಿಗೆ ಎಲ್ಲಾ ವಿನಾಯಿತಿಗಳನ್ನು ರದ್ದುಪಡಿಸುವುದಾಗಿ ತಿಳಿಸಿದೆ ಎಂದೂ ವರದಿಯಲ್ಲಿ ತಿಳಿದುಬಂದಿದೆ.

ಒಟ್ಟಾವಾದಲ್ಲಿನ ಭಾರತದ ಉಪಸ್ಥಿತಿಗೆ ಹೋಲಿಸಿದರೆ ಕೆನಡಾವು ಹೊಸ ದೆಹಲಿಯಲ್ಲಿನ ತನ್ನ ಹೈ ಕಮಿಷನ್‌ನಲ್ಲಿ ಹೆಚ್ಚಿನ ರಾಜತಾಂತ್ರಿಕ ಉಪಸ್ಥಿತಿಯನ್ನು ಹೊಂದಿದೆ.

ಈ ಬಗ್ಗೆ ಅಂದಹಾಗೆ ಭಾರತ ಮತ್ತು ಕೆನಡಾದ ವಿದೇಶಾಂಗ ಸಚಿವಾಲಯಗಳು ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ಭಾರತ ಸರ್ಕಾರಕ್ಕೆ ಬೇಕಾಗಿದ್ದ ಹರ್ದೀಪ್ ಸಿಂಗ್ ನಿಜ್ಜರ್​ನನ್ನು ಈ ವರ್ಷ ಜೂನ್ 18ರಂದು ಗುಂಡಿನ ದಾಳಿಯಲ್ಲಿ ಹತ್ಯೆ ಮಾಡಲಾಗಿತ್ತು. ಸರ್ರೆಯ ಗುರುದ್ವಾರದ ಹೊರಗೆ ನಿಜ್ಜರ್‌ನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

ಒಟ್ಟಾವಾದಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತನಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು, ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯ ಹಿಂದೆ ಭಾರತ ಸರ್ಕಾರದ ಏಜೆಂಟ್​ಗಳ ಕೈವಾಡವಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದರು. ಆರೋಪವನ್ನು ತಳ್ಳಿಹಾಕಿದ್ದ ಭಾರತ, ಕೆನಡಾ ವಿರುದ್ಧ ತೀವ್ರವಾಗಿ ಕಿಡಿಕಾರಿತ್ತು. ಅಲ್ಲದೆ, ಹಲವು ಕ್ರಮಗಳ ಮೂಲಕ ತಿರುಗೇಟು ನೀಡಿತ್ತು.

ಭಾರತದಲ್ಲಿರುವ ಕೆನಡಾ ರಾಯಭಾರಿಯನ್ನು ಉಚ್ಚಾಟನೆ ಮಾಡುವ ಜೊತೆಗೆ ಕೆನಡಾ ನಾಗರಿಕರಿಗೆ ವೀಸಾ ನೀಡುವನ್ನೂ ಭಾರತ ಸ್ಥಗಿತಗೊಳಿಸಿತ್ತು.

ಈ ನಡುವೆ ಹರ್ದೀಪ್ ಸಿಂಗ್‌ ನಿಜ್ಜರ್‌ ಹತ್ಯೆಯ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕ ಮಧ್ಯಪ್ರವೇಶಿಸಿದ್ದು, ತನಿಖೆಗೆ ಭಾರತ ಸಹಕರಿಸಲಿ ಎಂದು ಹೇಳಿದೆ. ಮತ್ತೊಂದೆಡೆ, ಕೆನಡಾ ಆರೋಪ ಮಾಡುವ ಬದಲು ಸಾಕ್ಷ್ಯ ಒದಗಿಸಲಿ ಎಂದು ಭಾರತ ಪ್ರತ್ಯುತ್ತರ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com