ಹಮಾಸ್ ಉಗ್ರರ ನಿರ್ನಾಮದ ಹೊರತು ಕದನ ವಿರಾಮ ಅಸಾಧ್ಯ ಎಂದ ಇಸ್ರೇಲ್;‌ ಗಾಜಾದಲ್ಲಿ 2ನೇ ಹಂತದ ದಾಳಿ ಆರಂಭ

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕದನ ವಿರಾಮ ಘೋಷಣೆ ಕುರಿತು ವಿಶ್ವಸಂಸ್ಥೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ, ಇದಾವುದನ್ನೂ ಲೆಕ್ಕಿಸದ ಇಸ್ರೇಲ್, ಹಮಾಸ್ ಉಗ್ರರ ನಿರ್ನಾಮ ನಿರ್ಧಾರದಿಂದ ಹಿಂದೆ ಸರಿಯದೆ, 2ನೇ ಹಂತ ದಾಳಿಗೆ ಮುಂದಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಜೆರುಸಲೇಂ: ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕದನ ವಿರಾಮ ಘೋಷಣೆ ಕುರಿತು ವಿಶ್ವಸಂಸ್ಥೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ, ಇದಾವುದನ್ನೂ ಲೆಕ್ಕಿಸದ ಇಸ್ರೇಲ್, ಹಮಾಸ್ ಉಗ್ರರ ನಿರ್ನಾಮ ನಿರ್ಧಾರದಿಂದ ಹಿಂದೆ ಸರಿಯದೆ, 2ನೇ ಹಂತ ದಾಳಿಗೆ ಮುಂದಾಗಿದೆ.

ಟಿವಿ ಸಂದರ್ಶನದ ವೇಳೆ ಮಾತನಾಡಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು, ಕದನ ವಿರಾಮದ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಹಮಾಸ್‌ ಉಗ್ರರನ್ನು ನಿರ್ನಾಮ ಮಾಡದ ಹೊರತು ನಾವು ವಿಶ್ರಮಿಸುವುದಿಲ್ಲ. ಈಗಾಗಲೇ ಇಸ್ರೇಲ್‌ ಸೈನಿಕರು ಹಮಾಸ್‌ ಉಗ್ರರ ವಿರುದ್ಧ ಎರಡನೇ ಹಂತದ ಸಮರ ಶುರು ಮಾಡಿದ್ದಾರೆ. ಸೈನಿಕರು ಗಾಜಾ ನಗರದ ಮೇಲೆ ದಾಳಿ ನಡೆಸುತ್ತಿದ್ದಾರೆ. ನಮ್ಮ ದೇಶದ ಒತ್ತೆಯಾಳುಗಳನ್ನು ಬಿಡಿಸಿಕೊಂಡು ಬರುವ ಜೊತೆಗೆ ಹಮಾಸ್‌ ಉಗ್ರರನ್ನು ಸದೆಬಡಿಯಲಾಗುತ್ತದೆ. ಅಲ್ಲಿಯವರೆಗೆ ಕದನ ವಿರಾಮ ಇಲ್ಲ” ಎಂದು ಹೇಳಿದ್ದಾರೆ.

ಗಾಜಾ ನಗರದಲ್ಲಿ ಮಾನವೀಯತೆ ಆಧಾರದ ಮೇಲೆ ಕದನ ವಿರಾಮ ಘೋಷಣೆಯಾಗಬೇಕು ಎಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

120 ರಾಷ್ಟ್ರಗಳು ನಿರ್ಣಯದ ಪರವಾಗಿ, 14 ವಿರುದ್ಧವಾಗಿ ಮತ ಚಲಾಯಿಸಿವೆ. ಆದರೆ, ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್, ಬ್ರಿಟನ್ ಸೇರಿ 45 ದೇಶಗಳು ಮತದಾನದಿಂದ ದೂರ ಉಳಿದವು. ನಿರ್ಣಯದಲ್ಲಿ ಹಮಾಸ್‌ ಉಗ್ರರ ದಾಳಿಯ ಪ್ರಸ್ತಾಪ ಇರದ ಕಾರಣ ಭಾರತವು ಮತದಾನದಿಂದ ಹಿಂದೆ ಸರಿದಿದೆ.

ಹಮಾಸ್‌ ಉಗ್ರರು ಮೊದಲು ಇಸ್ರೇಲ್‌ ಮೇಲೆ ದಾಳಿ ಶುರು ಮಾಡಿದ ಬಳಿಕ ಇಸ್ರೇಲ್‌ ತಿರುಗೇಟು ನೀಡುತ್ತಿದೆ. ಅದರಲ್ಲೂ, ಹಮಾಸ್‌ ಉಗ್ರರ ತಾಣವಾದ ಗಾಜಾ ನಗರದ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿದ್ದು, ನಗರದಲ್ಲಿ ಇದುವರೆಗೆ 7,700 ಜನ ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯವೇ ಮಾಹಿತಿ ನೀಡಿದೆ.

ಇನ್ನೂ 1,700 ಜನ ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು, ಅವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದಾಗಿ ಮಾಹಿತಿ ನೀಡಿದೆ. ಇನ್ನು ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ನಲ್ಲಿ 1,400 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇಸ್ರೇಲ್- ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಸುಮಾರು ನೂರು ವರ್ಷಗಳಿಂದ ನಡೆಯುತ್ತಿದೆ. ವೆಸ್ಟ್ ಬ್ಯಾಂಕ್, ಗಾಜಾ ಪಟ್ಟಿ ಮತ್ತು ಗೋಲನ್ ಹೈಟ್ಸ್ ಇನ್ನಿತರ ಪ್ರದೇಶಗಳ ಮೇಲಿನ ಹಕ್ಕಿನ ಬಗ್ಗೆ ಎರಡೂ ರಾಷ್ಟ್ರಗಳ ನಡುವೆ ವಿವಾದ ಇದೆ. ಪೂರ್ವ ಜೆರುಸಲೆಮ್ ಸೇರಿ ಈ ಪ್ರದೇಶಗಳನ್ನು ಪ್ಯಾಲೆಸ್ತೀನ್ ತನ್ನದು ಎಂದು ಹೇಳಿಕೊಳ್ಳುತ್ತಿದೆ. ಆದರೆ ಇಸ್ರೇಲ್ ಜೆರುಸಲೆಮ್ ಮೇಲಿನ ಹಕ್ಕನ್ನು ಸಾಧಿಸುತ್ತಿದೆ.

ಗಾಜಾ ಪಟ್ಟಿ ಇಸ್ರೇಲ್ ಮತ್ತು ಈಜಿಪ್ಟ್ ನಡುವೆ ಇದೆ. ಈ ಸ್ಥಳವು ಪ್ರಸ್ತುತ ಹಮಾಸ್ ಉಗ್ರರ ನಿಯಂತ್ರಣದಲ್ಲಿದೆ. ಹಮಾಸ್ ಎಂಬುದು ಇದು ಇಸ್ರೇಲ್ ವಿರೋಧಿ ಗುಂಪು. ಸೆಪ್ಟೆಂಬರ್ 2005 ರಲ್ಲಿ ಇಸ್ರೇಲ್, ಗಾಜಾ ಪಟ್ಟಿಯಿಂದ ತನ್ನ ಪಡೆಗಳನ್ನು ಹಿಂತೆಗೆದುಕೊಂಡಿತು. ನಂತರ ಈ ಪ್ರದೇಶದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿತು. ವೆಸ್ಟ್ ಬ್ಯಾಂಕ್ ಮತ್ತು ಗಾಜಾ ಪಟ್ಟಿಯಲ್ಲಿ ಸ್ವತಂತ್ರ ಪ್ಯಾಲೆಸ್ಟೈನ್ ರಾಜ್ಯವನ್ನು ಸ್ಥಾಪಿಸಬೇಕು ಎಂದು ಪ್ಯಾಲೆಸ್ತೀನ್ ಹೋರಾಟ ನಡೆಸುತ್ತಿದೆ.

ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿ, 1,200 ಮಂದಿಯನ್ನು ಹತ್ಯೆ ಮಾಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಹಮಾಸ್‌ ಅನ್ನು ನಾಶಗೈಯ್ಯುವುದಾಗಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com