ಬಲೂಚಿಸ್ತಾನದಲ್ಲಿ ಪಾಕ್ ನೌಕಾಪಡೆ ಹೆಲಿಕಾಪ್ಟರ್ ಪತನ; ಇಬ್ಬರು ಅಧಿಕಾರಿಗಳು ಸೇರಿ ಮೂವರು ಸಾವು

ಪಾಕಿಸ್ತಾನ ನೌಕಾಪಡೆಯ ಹೆಲಿಕಾಪ್ಟರ್ ಸೋಮವಾರ ತರಬೇತಿ ಹಾರಾಟದ ವೇಳೆ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪತನಗೊಂಡಿದ್ದು, ಇಬ್ಬರು ಅಧಿಕಾರಿಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಲೂಚಿಸ್ತಾನ: ಪಾಕಿಸ್ತಾನ ನೌಕಾಪಡೆಯ ಹೆಲಿಕಾಪ್ಟರ್ ಸೋಮವಾರ ತರಬೇತಿ ಹಾರಾಟದ ವೇಳೆ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪತನಗೊಂಡಿದ್ದು, ಇಬ್ಬರು ಅಧಿಕಾರಿಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

ಪ್ರಾಂತ್ಯದ ಬಂದರು ನಗರವಾದ ಗ್ವಾದಾರ್‌ನಲ್ಲಿ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಪತನವಾಗಿದ್ದು, ಇಬ್ಬರು ನೌಕಾಪಡೆಯ ಅಧಿಕಾರಿಗಳು ಮತ್ತು ಓರ್ವ ನಾವಿಕ ಸಾವನ್ನಪ್ಪಿದ್ದಾರೆ ಎಂದು ದಿ ನ್ಯೂಸ್ ಇಂಟರ್‌ನ್ಯಾಶನಲ್ ಪತ್ರಿಕೆ ವರದಿ ಮಾಡಿದೆ.

"ಸಂಭವನೀಯ ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ತರಬೇತಿ ಹಾರಾಟದ ಸಮಯದಲ್ಲಿ ಅಪಘಾತಕ್ಕೀಡಾಗಿದೆ. ನೌಕಾಪಡೆಯ  ಮೂವರು - ಇಬ್ಬರು ಅಧಿಕಾರಿಗಳು ಮತ್ತು ಒಬ್ಬ ನಾವಿಕ - ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ" ಎಂದು ವಕ್ತಾರರು ಹೇಳಿರುವುದಾಗಿ ವರದಿ ಮಾಡಿದೆ.

ಅಪಘಾತದ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಹೆಲಿಕಾಪ್ಟರ್ ಪತನಗೊಂಡು, ಇಬ್ಬರು ಮೇಜರ್‌ಗಳು ಸೇರಿದಂತೆ ಆರು ಪಾಕಿಸ್ತಾನಿ ಸೇನಾ ಅಧಿಕಾರಿಗಳು ಸಾವನ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com