2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆ: ಸಮೀಕ್ಷೆಯಲ್ಲಿ ಬೈಡನ್ ಗಿಂತ ಟ್ರಂಪ್ ಮುಂದೆ

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರಿಗಿಂತ ಹಾಲಿ ಅಧ್ಯಕ್ಷ ಜೋ ಬೈಡನ್ ಹಿಂದಿರುವುದಾಗಿ ವಾಷಿಂಗ್ಟನ್ ಪೋಸ್ಟ್ ಮತ್ತು ಎಬಿಸಿ ನ್ಯೂಸ್ ಚಾನೆಲ್ ನಡೆಸಿದ ಸಮೀಕ್ಷೆ ಹೇಳಿದೆ.
ಜೋ ಬೈಡನ್, ಡೊನಾಲ್ಡ್ ಟ್ರಂಪ್
ಜೋ ಬೈಡನ್, ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರಿಗಿಂತ ಹಾಲಿ ಅಧ್ಯಕ್ಷ ಜೋ ಬೈಡನ್ ಹಿಂದಿರುವುದಾಗಿ ವಾಷಿಂಗ್ಟನ್ ಪೋಸ್ಟ್ ಮತ್ತು ಎಬಿಸಿ ನ್ಯೂಸ್ ಚಾನೆಲ್ ನಡೆಸಿದ ಸಮೀಕ್ಷೆ ಹೇಳಿದೆ.

ಇವರಿಬ್ಬರ ನಡುವಿನ ನೇರಾ ಹಣಾಹಣಿಯಲ್ಲಿ ಟ್ರಂಪ್ ಹಾಗೂ ಬೈಡನ್ ಕ್ರಮವಾಗಿ 51-42 ಅಂಕ ಗಳಿಸಿದ್ದಾರೆ. ಜೊತೆಗೆ ಇತರೆ ರಿಪಬ್ಲಿಕನ್ ಸ್ಪರ್ಧಿಗಳಿಗಿಂತಲೂ ಟ್ರಂಪ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಭಾನುವಾರ ಈ ಸಮೀಕ್ಷೆ ಬಿಡುಗಡೆಗೊಂಡಿದೆ.

ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷೀಯ ಚುನಾವಣೆಗೆ ಆಕಾಂಕ್ಷಿಗಳಾಗಿರುವ ಭಾರತೀಯ ಮೂಲದ ದಕ್ಷಿಣ ಕರೊಲಿನಾದ ಮಾಜಿ ಗೌವರ್ನರ್ ನಿಕ್ಕಿ ಹ್ಯಾಲೆ ಹಾಗೂ ಉದ್ಯಮಿ ವಿವೇಕ್ ರಾಮಸ್ವಾಮಿ ಈಗ ಮುನ್ನಡೆ ಪಡೆಯುತ್ತಿದ್ದಾರೆ. ಟ್ರಂಪ್ ಅವರು ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷೀಯ ಅಭ್ಯರ್ಥಿಯಾಗುವುದು ಬಹುತೇಕವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com