ಸಿರಿಯಾ ದಾಳಿಗೆ ಪ್ರತೀಕಾರ: ಇಸ್ರೇಲ್​ ಮೇಲೆ ಡ್ರೋಣ್​, ಕ್ಷಿಪಣಿ ಮಳೆಗೆರೆದ ಇರಾನ್; ದೂರ ಇರುವಂತೆ ಅಮೆರಿಕಾಗೆ ಎಚ್ಚರಿಕೆ!

ನಿರೀಕ್ಷೆಯಂತಯೇ ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸಿದೆ. ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಕ್ರೂಸ್​ ಕ್ಷಿಪಣಿಗಳು ಸೇರಿದಂತೆ 200ಕ್ಕೂ ಹೆಚ್ಚು ಬಗೆಯ ಡ್ರೋನ್​ ಹಾಗೂ ಕ್ಷಿಪಣಿಗಳ ದಾಳಿಗಳನ್ನು ನಡೆಸಿದೆ.
ಇಸ್ರೇಲ್ ಮೇಲೆ ಡ್ರೋಣ್, ಕ್ಷಿಪಣಿ ದಾಳಿ.
ಇಸ್ರೇಲ್ ಮೇಲೆ ಡ್ರೋಣ್, ಕ್ಷಿಪಣಿ ದಾಳಿ.
Updated on

ಜೆರುಸಲೇಂ: ನಿರೀಕ್ಷೆಯಂತೆಯೇ ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸಿದೆ. ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಕ್ರೂಸ್​ ಕ್ಷಿಪಣಿಗಳು ಸೇರಿದಂತೆ 200ಕ್ಕೂ ಹೆಚ್ಚು ಬಗೆಯ ಡ್ರೋನ್​ ಹಾಗೂ ಕ್ಷಿಪಣಿಗಳ ದಾಳಿಗಳನ್ನು ನಡೆಸಿದೆ.

ಸಿರಿಯಾದ ರಾಜಧಾನಿ ಡಮಾಸ್ಕಸ್​ನಲ್ಲಿರುವ ತನ್ನ ರಾಯಭಾರ ಕಚೇರಿ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ಪ್ರತಿಯಾಗಿ ಇರಾನ್ ಈ ಕ್ರಮ ಕೈಗೊಂಡಿದೆ.

ಇಸ್ರೇಲಿ ಮಿಲಿಟರಿಯ ವಕ್ತಾರ, ರಿಯರ್ ಅಡ್ಮ್. ಡೇನಿಯಲ್ ಹಗರಿ ಮಾತನಾಡಿ, ಇರಾನ್ ಹಲವಾರು ಡ್ರೋನ್‌ಗಳು, ಕ್ರೂಸ್ ಕ್ಷಿಪಣಿಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದ್ದು, ಬಹುಪಾಲು ಕ್ಷಿಪಣಿ ಹಾಗೂ ಡ್ರೋಣ್ ಗಳನ್ನು ಇಸ್ರೇಲ್‌ನ ಗಡಿಯ ಹೊರಗೆ ತಡೆಹಿಡಿಯಲಾಗಿದೆ ಎಂದು ಹೇಳಿದ್ದಾರೆ.

ಡ್ರೋನ್​ಗಳು ಹಾಗೂ ಕ್ಷಿಪಣಿಗಳನ್ನು ಗಾಳಿಯಲ್ಲಿ ಹೊಡೆದುರುಳಿಸುವಲ್ಲಿ ಅಮೆರಿಕ ಹಾಗೂ ಬ್ರಿಟಿಷ್ ವಾಯುಪಡೆಗಳು ಇಸ್ರೇಲ್​ಗೆ ಸಹಾಯ ಮಾಡಿವೆ. ಇಸ್ರೇಲ್ ದಕ್ಷಿಣ ಭಾಗದಲ್ಲಿರುವ ಸೇನಾ ನೆಲೆಯಲ್ಲಿ ಸಣ್ಣಪುಟ್ಟ ಹಾನಿಗಳಾಗಿವೆ. ಈ ದಾಳಿಯಿಂದ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ಇಸ್ರೇಲ್ ಮೇಲೆ ಡ್ರೋಣ್, ಕ್ಷಿಪಣಿ ದಾಳಿ.
ಇಸ್ರೇಲ್ vs ಇರಾನ್: ಉದ್ವಿಗ್ನತೆಗಳ ನಡುವೆಯೇ ವಾಗ್ಯುದ್ಧ

ಇದೇ ವೇಳೆ ದಾಳಿಗೆ ಇಸ್ರೇಲ್ ಪ್ರತಿಕ್ರಿಯೆ ನೀಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ದೇಶದ ಭದ್ರತೆ ರಕ್ಷಣೆಗೆ ಸೇನೆ ಏನನ್ನೂ ಬೇಕಾದರೂ ಮಾಡುತ್ತದೆ ಎಂದಿದ್ದಾರೆ.

ಇನ್ನು ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿಕೆ ನೀಡಿ, ಇರಾನ್‌ನ ಹಿತಾಸಕ್ತಿಗಳಿಗೆ ಹಾನಿ ಮಾಡುವ ಯಾವುದೇ ಬೆಂಬಲ ಅಥವಾ ಭಾಗವಹಿಸುವಿಕೆಗೆ ಇರಾನ್‌ನ ಸಶಸ್ತ್ರ ಪಡೆಗಳು ತಕ್ಕ ಉತ್ತರ ನೀಡಲಿದೆ ಎಂದು ಅಮೆರಿಕಾಗೆ ಎಚ್ಚರಿಕೆ ನೀಡಿದೆ.

ಇಸ್ರೇಲ್ ಬೆಂಬಲಕ್ಕೆ ನಿಂತಿರುವ ಅಮೆರಿಕಾ, ದಾಳಿಯನ್ನು ಖಂಡಿಸಿದೆ. ಮಿತ್ರ ರಾಷ್ಟ್ರ ಇಸ್ರೇಲ್‌ ಪರ ನಿಲ್ಲುವುದಾಗಿ ಹೇಳಿದ್ದ ಬೈಡನ್‌ ಅವರು, ಇಸ್ರೇಲ್‌ಗೆ ಸೇನಾ ನೆರವನ್ನು ಒದಗಿಸಿದ್ದಾರೆ.

ಈ ನಡುವೆ ಇಸ್ರೇಲ್​ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳು ಮತ್ತು ಯುಎಸ್​ ಸೆಕ್ರೆಟರಿ ಜನರಲ್ ಆಂಟೊನಿಯೊ ಗುಟೆರಸ್ ಇರಾನ್ ದಾಳಿಯನ್ನು ಖಂಡಿಸಿದ್ದಾರೆ. ಇರಾನ್ ದಾಳಿಯ ಕುರಿತು ಇಸ್ರೇಲ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯನ್ನು ಕರೆದಿದೆ.

ಇಸ್ರೇಲ್ ಮೇಲೆ ಡ್ರೋಣ್, ಕ್ಷಿಪಣಿ ದಾಳಿ.
ಇಸ್ರೇಲ್, ಇರಾನ್ ಗೆ ಪ್ರಯಾಣಿಸದಂತೆ ಭಾರತೀಯರಿಗೆ MEA ಸಲಹೆ

ಇರಾನ್ ಸೇನೆ ಕೊತ ಕೊತ ಕುದಿಯುತ್ತಿದ್ದು, ಅಮೆರಿಕಾದ ಹೆಸರು ಕೇಳಿದರೆ ಸಾಕು ಬೆಂಕಿಯ ಕಿಡಿಯನ್ನೇ ಉಗುಳುತ್ತದೆ. ಹೀಗಿದ್ದಾಗ ಇತ್ತೀಚೆಗಷ್ಟೇ ಇರಾನ್ ರಾಯಭಾರ ಕಚೇರಿಯ ಮೇಲೆ ದಾಳಿ ಮಾಡಿತ್ತು ಇಸ್ರೇಲ್ ಎಂಬ ಆರೋಪ ಕೇಳಿಬಂದಿತ್ತು. ಹತ್ತಾರು ಜನ ಇರಾನ್ ಸೇನಾ ಅಧಿಕಾರಿಗಳು ಈ ದಾಳಿಗೆ ಬಲಿಯಾಗಿದ್ದರು. ಇದೀಗ ದಿಢೀರ್ ಇರಾನ್ ಇಸ್ರೇಲ್ ಮೇಲೆ ದಿಢೀರ್ ದಾಳಿ ಮಾಡಿದೆ. ಈ ಮೂಲಕ ಇಬ್ಬರ ಎರಡು ರಾಷ್ಟ್ರಗಳ ನಡುವೆ ದೊಡ್ಡ ಯುದ್ಧವೇ ಶುರುವಾಗುವಂತಿದೆ.

ಡಮಾಸ್ಕಸ್‌ನಲ್ಲಿರುವ, ಇರಾನ್ ರಾಯಭಾರ ಕಚೇರಿ ಮೇಲೆ ಏಪ್ರಿಲ್ 1 ರಂದು ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್ ಅಟ್ಟಹಾಸ ಮೆರೆದಿದೆ ಎಂದು ಇರಾನ್ ಆರೋಪಿಸಿತ್ತು. ಡಮಾಸ್ಕಸ್ ಮೇಲೆ ಇಸ್ರೇಲ್ ದಾಳಿ ಮಾಡಿದಾಗ, ಇರಾನ್ ಸೇನಾಧಿಕಾರಿಗಳು ಸೇರಿ ಹಲವು ಇರಾನ್ ಅಧಿಕಾರಿಗಳು ಜೀವ ಬಿಟ್ಟಿದ್ದಾರೆ ಎಂದು ಮಾಹಿತಿ ನೀಡಿ ಆಕ್ರೋಶ ಹೊರಹಾಕಿತ್ತು ಇರಾನ್. ಹೀಗೆ ಡಮಾಸ್ಕಸ್ ದಾಳಿಗೆ, ಇರಾನ್ ಪ್ರತಿದಾಳಿ ಆರಂಭಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com