ದುಬೈನಲ್ಲಿ ಪ್ರವಾಹ: ಪ್ರಯಾಣ ಮುಂದೂಡುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ

ದುಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಾರದ ದಾಖಲೆಯ ಮಳೆಯಿಂದ ಚೇತರಿಸಿಕೊಳ್ಳಲು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಯತ್ನಿಸುತ್ತಿದೆ.
ದುಬೈನಲ್ಲಿ ಪ್ರವಾಹ
ದುಬೈನಲ್ಲಿ ಪ್ರವಾಹ

ಅಬುಧಾಬಿ: ದುಬೈನಲ್ಲಿ ಈ ವಾರ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಅನಿವಾರ್ಯವಲ್ಲದ ಪ್ರಯಾಣವನ್ನು ಮುಂದೂಡುವಂತೆ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಅಥವಾ ಅದರ ಮೂಲಕ ಹಾದು ಹೋಗುವ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯರಿಗೆ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ಸಲಹೆ ನೀಡಿದೆ.

ದುಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಾರದ ದಾಖಲೆಯ ಮಳೆಯಿಂದ ಚೇತರಿಸಿಕೊಳ್ಳಲು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಯತ್ನಿಸುತ್ತಿದೆ.

ಯುಎಇ ಅಧಿಕಾರಿಗಳು ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸಾಮಾನ್ಯ ಸ್ಥಿತಿಗೆ ತರಲು ಹಗಲಿರುಳು ಶ್ರಮಿಸುತ್ತಿದ್ದಾರೆ. ನಿಮಾನಗಳ ನಿರ್ಗಮನ ದಿನಾಂಕ ಮತ್ತು ಸಮಯದ ಕುರಿತು ಆಯಾ ವಿಮಾನಯಾನ ಸಂಸ್ಥೆಗಳಿಂದ ಅಂತಿಮ ದೃಢೀಕರಣದ ನಂತರವೇ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸಬೇಕು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ದುಬೈನಲ್ಲಿ ಪ್ರವಾಹ
ದುಬೈ ಪ್ರವಾಹ: ವಿಮಾನ ನಿಲ್ದಾಣ ಸೇವೆ ಸ್ಥಗಿತ, ಒಮನ್‌ನಲ್ಲಿ ಸಾವಿನ ಸಂಖ್ಯೆ 18 ಕ್ಕೆ ಏರಿಕೆ

ಈ ವಾರದ ಆರಂಭದಲ್ಲಿ ಸುರಿದ ಭಾರೀ ಮಳೆಯಿಂದಾಗಿ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಒಳಬರುವ ವಿಮಾನಗಳ ಸಂಖ್ಯೆಯನ್ನು ತಾತ್ಕಾಲಿಕವಾಗಿ ಸೀಮಿತಗೊಳಿಸಿದೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

"ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಅಥವಾ ಆ ಮಾರ್ಗದಲ್ಲಿ ಹಾದು ಹೋಗುವ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯ ಪ್ರಯಾಣಿಕರು ವಿಮಾನಗಳ ಕಾರ್ಯಾಚರಣೆ ಸಹಜ ಸ್ಥಿತಿಗೆ ಮರಳುವವರೆಗೆ ಅನಿವಾರ್ಯವಲ್ಲದ ಪ್ರಯಾಣವನ್ನು ಮರುಹೊಂದಿಸಲು ಸೂಚಿಸಲಾಗಿದೆ" ಎಂದು ರಾಯಭಾರ ಕಚೇರಿ ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com