Bangladesh: ಭಾರತಕ್ಕೆ Sheikh Hasina ಪರಾರಿ; ಪ್ರಧಾನಿ ಪ್ಯಾಲೆಸ್ ಗೆ ನುಗ್ಗಿ ಪ್ರತಿಭಟನಾಕಾರರಿಂದ ಲೂಟಿ!

ಸರ್ಕಾರಿ ಉದ್ಯೋಗಕ್ಕೆ ಮೀಸಲಾತಿ ವಿರುದ್ಧ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ತಾರಕಕ್ಕೇರಿದ್ದು, ಪ್ರತಿಭಟನಾ ನಿರತರು ನೇರವಾಗಿ ಬಾಂಗ್ಲಾದೇಶ ಪ್ರಧಾನಿಗಳ ಪ್ಯಾಲೆಸ್ ಗೇ ನುಗ್ಗಿದ್ದಾರೆ.
Bangladesh Prime Minister Sheikh Hasina
ಭಾರತಕ್ಕೆ ಶೇಖ್ ಹಸೀನಾ ಪರಾರಿ
Updated on

ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ಸಂಘರ್ಷ ತಾರಕಕ್ಕೇರಿದ್ದು, ಪ್ರಧಾನಿ ಶೇಖ್ ಹಸೀನಾ ದೇಶ ತೊರೆದು ಸುರಕ್ಷಿತ ಪ್ರದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಬಾಂಗ್ಲಾದೇಶದಲ್ಲಿ ಸರ್ಕಾರ ವಿರೋಧಿ ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದು, ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಶೇಖ್‌ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಏತನ್ಮಧ್ಯೆ ದೇಶದಲ್ಲಿ ಪ್ರತಿಭಟನೆ ಹಿಂಸಾರೂಪ ಪಡೆದಿರುವಂತೆಯೇ ಪರಿಸ್ಥಿತಿ ಕೈ ಮೀರುವ ಮುನ್ಸೂಚನೆ ಪಡೆದ ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಶೇಖ್‌ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೆಲಿಕಾಪ್ಟರ್‌ನಲ್ಲಿ ತಮ್ಮ ಸಹೋದರಿಯೊಂದಿಗೆ ಭಾರತಕ್ಕೆ ಪರಾರಿಯಾಗಿದ್ದು, ಸೇನಾ ವಿಮಾನ ಹಾರಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಶೇಖ್ ಹಸೀನಾ ಪ್ಯಾಲೆಸ್ ಗೆ ನುಗ್ಗಿದ ಪ್ರತಿಭಟನಾಕಾರರು

ಸರ್ಕಾರಿ ಉದ್ಯೋಗಕ್ಕೆ ಮೀಸಲಾತಿ ವಿರುದ್ಧ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ತಾರಕಕ್ಕೇರಿದ್ದು, ಪ್ರತಿಭಟನಾ ನಿರತರು ನೇರವಾಗಿ ಬಾಂಗ್ಲಾದೇಶ ಪ್ರಧಾನಿಗಳ ಪ್ಯಾಲೆಸ್ ಗೇ ನುಗ್ಗಿದ್ದಾರೆ. ಮತ್ತೊಂದೆಡೆ ಪ್ರತಿಭಟನಾಕಾರರು ನುಗ್ಗುವ ಮುನ್ನವೇ ಅಪಾಯದ ಮುನ್ಸೂಚನೆ ಪಡೆದ ಶೇಖ್ ಹಸೀನಾ ಸೇನಾ ವಿಮಾನದಲ್ಲಿ ದೇಶ ತೊರೆದಿದ್ದಾರೆ.

ಭಾರತದಲ್ಲಿ ಶೇಖ್ ಹಸೀನಾ

ಮೂಲಗಳ ಪ್ರಕಾರ ಬಾಂಗ್ಲಾದೇಶ ತೊರೆದಿದ್ದ ಶೇಖ್ ಹಸೀನಾ ಇದೀಗ ತ್ರಿಪುರಾದ ಅಗರ್ತಲಾದಲ್ಲಿ ಇಳಿದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹೆಲಿಕಾಪ್ಟರ್ ಇಳಿದ ವಿಡಿಯೋವೊಂದು ಕೂಡ ವೈರಲ್ ಆಗುತ್ತಿದೆ. ಘರ್ಷಣೆಯ ತೀವ್ರವಾದ ಬೆನ್ನಲ್ಲಿಯೇ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಕಡಿತ ಮಾಡಲಾಗಿದೆ.

Bangladesh Prime Minister Sheikh Hasina
ಬಾಂಗ್ಲಾದೇಶ: ಪ್ರಧಾನಿ ಹಸೀನಾ ರಾಜೀನಾಮೆ; 'ಸುರಕ್ಷಿತ ಸ್ಥಳ'ಕ್ಕೆ ಪ್ರಯಾಣ; ದೇಶ ಸೇನೆ ವಶಕ್ಕೆ!

ಅನಿರ್ದಿಷ್ಟ ಅವಧಿಗೆ ರಾಷ್ಟ್ರವ್ಯಾಪಿ ಕರ್ಫ್ಯೂ ಹೇರುವುದು ಸೇರಿದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬಾಂಗ್ಲಾದೇಶ ರೈಲ್ವೆ ಎಲ್ಲಾ ಸೇವೆಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದೆ. ದೇಶದಲ್ಲಿ ಗಾರ್ಮೆಂಟ್ಸ್ ಕಾರ್ಖಾನೆಗಳನ್ನು ಅನಿರ್ದಿಷ್ಟಾವಧಿಗೆ ಮುಚ್ಚಲಾಗಿದೆ. ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಬಾಂಗ್ಲಾದೇಶ ಆಡಳಿತವು ಇಂದಿನಿಂದ ಮೂರು ದಿನಗಳ ಸಾರ್ವಜನಿಕ ರಜೆಯನ್ನು ಘೋಷಿಸಿದೆ.

ಇನ್ನು ಪ್ರತಿಭಟನೆ ಮತ್ತು ಹಿಂಸಾಚಾರದಲ್ಲಿ ಈ ವರೆಗೂ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಘರ್ಷಣೆಯ ಸಮಯದಲ್ಲಿ ದೇಶಾದ್ಯಂತ ಒಟ್ಟು 14 ಪೊಲೀಸರು ಸಾವು ಕಂಡಿದ್ದಾರೆ. ಅವರಲ್ಲಿ, ಸಿರಾಜ್‌ಗಂಜ್‌ನ ಎನಾಯೆತ್‌ಪುರ್ ಪೊಲೀಸ್ ಠಾಣೆಯಲ್ಲಿ 13 ಜನರು ಮತ್ತು ಕೊಮಿಲ್ಲಾದ ಎಲಿಯಟ್‌ಗಂಜ್‌ನಲ್ಲಿ ಒಬ್ಬ ಸಾವು ಕಂಡಿದ್ದಾನೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇದೇ ವೇಳೆ 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ಜನರ ಪರ ನಿಲ್ಲುತ್ತೇವೆ: ಬಾಂಗ್ಲಾದೇಶ ಸೇನೆ

ಬಾಂಗ್ಲಾದೇಶ ಸೇನೆ ಪ್ರತಿಭಟನಾಕಾರರಿಗೆ ಬೆಂಬಲ ನೀಡಿದೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಜನರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಸೇನೆ ಹೇಳಿದೆ. ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಅವರು ಅಧಿಕಾರಿಗಳಿಗೆ "ಬಾಂಗ್ಲಾದೇಶದ ಸೇನೆಯು ಜನರ ನಂಬಿಕೆಯ ಸಂಕೇತವಾಗಿದೆ" ಮತ್ತು "ಇದು ಯಾವಾಗಲೂ ಜನರ ಪರವಾಗಿ ನಿಂತಿದೆ ಮತ್ತು ಜನರು ಮತ್ತು ದೇಶದ ಸಲುವಾಗಿ ಸೇವೆ ಸಲ್ಲಿಸೋದನ್ನು ಮುಂದುವರಿಸುತ್ತದೆ' ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com