
ಬ್ರೆಜಿಲ್‌ನಲ್ಲಿ ಭಾರೀ ವಿಮಾನ ಅಪಘಾತ ಸಂಭವಿಸಿದ್ದು 62 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ 62 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
62 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಶುಕ್ರವಾರ ಬ್ರೆಜಿಲ್‌ನ ಸಾವೊ ಪಾಲೊ ಬಳಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಏರ್‌ಲೈನ್ ವೊಪಾಸ್ ಲಿನ್ಹಾಸ್ ಏರಿಯಾಸ್ ನಿರ್ವಹಿಸುತ್ತಿದ್ದ ATR-72 ವಿಮಾನವು ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೊ ಪಾಲೊದಲ್ಲಿನ ಗೌರುಲ್ಹೋಸ್‌ಗೆ ತೆರಳುತ್ತಿತ್ತು. ಸಾವೊ ಪಾಲೊದ ರಾಜ್ಯ ಅಗ್ನಿಶಾಮಕ ದಳವು ವಿನ್ಹೆಡಾವೊದಲ್ಲಿ ವಿಮಾನವು ಅಪಘಾತಕ್ಕೀಡಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ದೃಢಪಡಿಸಿದ್ದು ಏಳು ಸಿಬ್ಬಂದಿಗಳನ್ನು ಅಪಘಾತದ ಪ್ರದೇಶಕ್ಕೆ ಕಳುಹಿಸಿದೆ.
58 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ದು ಸಾವೊ ಪಾಲೊದ ಗೌರುಲ್ಹೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವಿಮಾನ ಅಪಘಾತಕ್ಕೀಡಾಗಿದೆ ಎಂದು ಏರ್‌ಲೈನ್ ವೊಪಾಸ್ ಹೇಳಿಕೆಯಲ್ಲಿ ದೃಢಪಡಿಸಿದೆ. ಅಪಘಾತಕ್ಕೆ ಕಾರಣವೇನೆಂದು ಹೇಳಿಕೆ ನೀಡಿಲ್ಲ.
Advertisement