ಬಾಂಗ್ಲಾದಲ್ಲಿ ಶೇಖ್ ಹಸೀನಾ ಸರ್ಕಾರ ಪತನ ನಂತರ ಅಲ್ಪಸಂಖ್ಯಾತರ ಮೇಲೆ 205 ದಾಳಿಗಳು: ಅಂಕಿಅಂಶ ಸಲ್ಲಿಕೆ

ಬಾಂಗ್ಲಾದೇಶ ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ಮತ್ತು ಬಾಂಗ್ಲಾದೇಶ ಪೂಜಾ ಉದ್ಜಪನ್ ಪರಿಷತ್ ನಿನ್ನೆ ದೇಶದ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 84 ವರ್ಷದ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಅವರಿಗೆ ಬಹಿರಂಗ ಪತ್ರದಲ್ಲಿ ಈ ವಿಷಯವನ್ನು ಪ್ರಸ್ತುತಪಡಿಸಿದೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳಿಂದ ಪ್ರತಿಭಟನೆ
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳಿಂದ ಪ್ರತಿಭಟನೆ
Updated on

ನವದೆಹಲಿ: ಶೇಖ್ ಹಸೀನಾ ನೇತೃತ್ವದ ಸರ್ಕಾರ ಆಗಸ್ಟ್ 5 ರಂದು ಪತನವಾದ ನಂತರ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು 52 ಜಿಲ್ಲೆಗಳಲ್ಲಿ ಕನಿಷ್ಠ 205 ದಾಳಿಯ ಘಟನೆಗಳನ್ನು ಎದುರಿಸಿದ್ದಾರೆ ಎಂದು ಹಿಂಸಾಚಾರ ಪೀಡಿತ ರಾಷ್ಟ್ರದ ಎರಡು ಹಿಂದೂ ಸಂಘಟನೆಗಳು ತಿಳಿಸಿವೆ.

ಬಾಂಗ್ಲಾದೇಶ ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ಮತ್ತು ಬಾಂಗ್ಲಾದೇಶ ಪೂಜಾ ಉದ್ಜಪನ್ ಪರಿಷತ್ ನಿನ್ನೆ ದೇಶದ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 84 ವರ್ಷದ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಅವರಿಗೆ ಬಹಿರಂಗ ಪತ್ರದಲ್ಲಿ ಈ ವಿಷಯವನ್ನು ಪ್ರಸ್ತುತಪಡಿಸಿದೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ. .

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳಿಂದ ಪ್ರತಿಭಟನೆ
ಬಾಂಗ್ಲಾದೇಶದಲ್ಲಿ ಮಿತಿ ಮೀರಿದ ಅರಾಜಕತೆ: ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ಸುಪ್ರೀಂಕೋರ್ಟ್‌ ಸಿಜೆಐ-ನ್ಯಾಯಾಧೀಶರು ರಾಜೀನಾಮೆಗೆ ಮುಂದು!

ಅಂಕಿಅಂಶಗಳ ಪ್ರಕಾರ, ಸೋಮವಾರದಿಂದ 52 ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರ ಮೇಲೆ ಕನಿಷ್ಠ 205 ದಾಳಿಗಳು ನಡೆದಿವೆ. ಶೇಖ್ ಹಸೀನಾ ಅವರು ಅವರ ಸರ್ಕಾರ ವಿರುದ್ಧ ಉದ್ಯೋಗಗಳಲ್ಲಿ ವಿವಾದಾತ್ಮಕ ಕೋಟಾ ವ್ಯವಸ್ಥೆಯ ವಿರುದ್ಧ ವ್ಯಾಪಕ ಪ್ರತಿಭಟನೆಯ ನಂತರ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದರು.

ನಮ್ಮ ಜೀವನವು ದುರಂತದ ಸ್ಥಿತಿಯಲ್ಲಿರುವುದರಿಂದ ನಾವು ರಕ್ಷಣೆಯನ್ನು ಬಯಸುತ್ತೇವೆ. ರಾತ್ರಿಯಿಡೀ ನಮ್ಮ ಮನೆ ಮತ್ತು ದೇವಾಲಯಗಳನ್ನು ಕಾವಲು ಕಾಯುತ್ತಿದ್ದೇವೆ. ನಾನು ನನ್ನ ಜೀವನದಲ್ಲಿ ಈ ರೀತಿಯದ್ದನ್ನು ನೋಡಿಲ್ಲ. ಸರ್ಕಾರವು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಮರುಸ್ಥಾಪಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಏಕತಾ ಪರಿಷತ್ತಿನ ಮೂವರು ಅಧ್ಯಕ್ಷರಲ್ಲಿ ಒಬ್ಬರಾದ ನಿರ್ಮಲ್ ರೊಸಾರಿಯೊ ಹೇಳಿದರು.

ಪರಿಸ್ಥಿತಿ ಹದಗೆಡುತ್ತಿದೆ ಎಂದು ಪ್ರತಿಪಾದಿಸಿದ ರೊಸಾರಿಯೊ, ಮುಹಮ್ಮದ್ ಯೂನಸ್ ಅವರಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮತ್ತು ಹಿಂಸಾಚಾರವನ್ನು ಕೊನೆಗೊಳಿಸುವ ಮೂಲಕ ಬಿಕ್ಕಟ್ಟನ್ನು ಪರಿಹರಿಸಲು ಒತ್ತಾಯಿಸಿದರು.

ದೇಶದಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರವು ಬಾಂಗ್ಲಾದೇಶದ ಅಲ್ಪಸಂಖ್ಯಾತರಲ್ಲಿ ವ್ಯಾಪಕ ಭಯ, ಆತಂಕ ಮತ್ತು ಅನಿಶ್ಚಿತತೆಯನ್ನು ಉಂಟುಮಾಡಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖಂಡನೆಗೆ ಕಾರಣವಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com