ನವದೆಹಲಿ: ಲಂಡನ್ ಹೊಟೆಲ್ ನಲ್ಲಿ Air India ಮಹಿಳಾ ಸಿಬ್ಬಂದಿಗೆ ದುಷ್ಕರ್ಮಿಯೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ವಾರದ ಆರಂಭದಲ್ಲಿ ಏರ್ ಇಂಡಿಯಾದ ಮಹಿಳಾ ಕ್ಯಾಬಿನ್ ಸಿಬ್ಬಂದಿಯೊಬ್ಬರ ಮೇಲೆ ಲಂಡನ್ ಹೋಟೆಲ್‌ನಲ್ಲಿ ಲೈಂಗಿಕ ಹಲ್ಲೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ವಿಚಾರ ತಿಳಿಯುತ್ತಲೇ ಎಚ್ಚೆತ್ತುಕೊಂಡಿರುವ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಸ್ಥಳೀಯ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಮಾಲೋಚನೆ ನಡೆಸುತ್ತಿದೆ.
ಈ ಬಗ್ಗೆ ಹೇಳಿಕೆ ಕೂಡ ಬಿಡುಗಡೆ ಮಾಡಿರುವ ಏರ್ ಇಂಡಿಯಾ ವಕ್ತಾರರು, 'ಪ್ರಮುಖ ಅಂತಾರಾಷ್ಟ್ರೀಯ ಸರಪಳಿಯಿಂದ ನಿರ್ವಹಿಸಲ್ಪಡುವ ಹೋಟೆಲ್‌ನಲ್ಲಿನ ಅಕ್ರಮ ನುಸುಳುಕೋರ ಮಹಿಳಾ ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಘಟನೆಯಿಂದ ತೀವ್ರ ದುಃಖವಾಗಿದೆ, ಇದು ನಮ್ಮ ಸಿಬ್ಬಂದಿಯೊಬ್ಬರ ಮೇಲೆ ಪರಿಣಾಮ ಬೀರಿದೆ" ಎಂದು ಹೇಳಿದ್ದಾರೆ.
ಮಹಿಳಾ ಕ್ಯಾಬಿನ್ ಸಿಬ್ಬಂದಿ ಉಳಿದುಕೊಂಡಿದ್ದ ಹೋಟೆಲ್‌ನ ಕೋಣೆಗೆ ನಿರಾಶ್ರಿತ ವ್ಯಕ್ತಿಯೊಬ್ಬ ನುಗ್ಗಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಆಕೆ ಕೂಗಿಕೊಂಡಿದ್ದು, ಈ ವೇಳೆ ಅಕ್ಕಪಕ್ಕದಲ್ಲಿದ್ದ ಇತರರು ಬಂದು ಆಕೆಯನ್ನು ರಕ್ಷಿಸಿದ್ದಾರೆ. ಅಲ್ಲದೆ ದಾಳಿಕೋರ ವ್ಯಕ್ತಿಯನ್ನು ಸೆರೆ ಹಿಡಿದಿದ್ದಾರೆ.
ಕೆಲ ಮೂಲಗಳು ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿದ್ದು, ಮತ್ತೆ ಕೆಲ ಮೂಲಗಳು ಕೇವಲ ದೈಹಿಕ ಹಲ್ಲೆ ಎಂದು ಉಲ್ಲೇಖಿಸಿವೆ. ಲಂಡನ್ ಹೀಥ್ರೂ ವಿಮಾನ ನಿಲ್ದಾಣದ ಸಮೀಪವಿರುವ ಸ್ಟಾರ್ ಹೋಟೆಲ್‌ನಲ್ಲೇ ಈ ಘಟನೆ ನಡೆದಿದೆ.
ಈ ವಾರದ ಆರಂಭದಲ್ಲಿ ಲಂಡನ್‌ನ ಹೋಟೆಲ್‌ವೊಂದರಲ್ಲಿ ನಮ್ಮ ಸಿಬ್ಬಂದಿ ಉಳಿದುಕೊಂಡಿದ್ದರು. ಹೋಟೆಲ್ ಭದ್ರತೆಯನ್ನು ಬೇಧಿಸಿ ವ್ಯಕ್ತಿಯೊಬ್ಬ ಒಳಗೆ ಪ್ರವೇಶ ಮಾಡಿ ನಮ್ಮ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗಿದ್ದಾನೆ. ಆ ವ್ಯಕ್ತಿ ನಮ್ಮ ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿದ್ದಂತೆ ಅವರು ಕೂಗಿಕೊಂಡಿದ್ದಾರೆ. ತಕ್ಷಣಕ್ಕೆ ಕೆಲವರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿಯನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ.
Advertisement