ಬಾಂಗ್ಲಾದೇಶದಲ್ಲಿ ಹಿಂದೂಗಳ ಆಸ್ತಿ ಧ್ವಂಸ: ನಾಲ್ವರ ಬಂಧನ

ಡಿಸೆಂಬರ್ 3 ರಂದು ಸುನಮ್‌ಗಂಜ್ ಜಿಲ್ಲೆಯ ನಿವಾಸಿ ಆಕಾಶ್ ದಾಸ್ ಎಂಬಾತ ಫೇಸ್‌ಬುಕ್ ನಲ್ಲಿ ಮಾಡಿದ್ದ ಪೋಸ್ಟ್ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟುಮಾಡಿತು.
Hindu Protest
ಹಿಂದೂಗಳ ಪ್ರತಿಭಟನೆ ಚಿತ್ರ
Updated on

ಢಾಕಾ: ಉತ್ತರ ಬಾಂಗ್ಲಾದೇಶದ ಸುನಾಮ್ ಗಂಜ್ ಜಿಲ್ಲೆಯಲ್ಲಿ ಹಿಂದೂಗಳ ಮನೆ, ಅಂಗಡಿ ಮತ್ತು ಸ್ಥಳೀಯ ಲೋಕನಾಥ್ ದೇವಾಲಯ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು,150 ರಿಂದ 170 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಈ ತಿಂಗಳ ಆರಂಭದಲ್ಲಿ ಸುನಮ್ ಗಂಜ್ ಜಿಲ್ಲೆಯ ದೋರಬಜಾರ್ ಪ್ರದೇಶದಲ್ಲಿ ಆಸ್ತಿ ಧ್ವಂಸ ಹಿನ್ನೆಲೆಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಢಾಕಾದ ಮುಖ್ಯ ಸಲಹೆಗಾರರ ಮಾಧ್ಯಮ ವಿಭಾಗದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡಿಸೆಂಬರ್ 3 ರಂದು ಸುನಮ್‌ಗಂಜ್ ಜಿಲ್ಲೆಯ ನಿವಾಸಿ ಆಕಾಶ್ ದಾಸ್ ಎಂಬಾತ ಫೇಸ್‌ಬುಕ್ ನಲ್ಲಿ ಮಾಡಿದ್ದ ಪೋಸ್ಟ್ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟುಮಾಡಿತು. ಆತ ಪೋಸ್ಟ್ ನ್ನು ಡಿಲೀಟ್ ಮಾಡಿದ್ದರೂ ಸ್ಕ್ರೀನ್‌ಶಾಟ್‌ಗಳು ವ್ಯಾಪಕವಾಗಿ ಹರಡಿ, ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಸರ್ಕಾರಿ ಸುದ್ದಿ ಸಂಸ್ಥೆ ಬಾಂಗ್ಲಾದೇಶ ಸಂಗ್‌ಬಾದ್ ಸಂಸ್ಥಾ (ಬಿಎಸ್‌ಎಸ್) ಹೇಳಿಕೆಯಲ್ಲಿ ತಿಳಿಸಿದೆ.

ಸ್ಥಳೀಯ ಪೊಲೀಸರು ದಾಸ್ ಅವರನ್ನು ತಕ್ಷಣವೇ ಬಂಧಿಸಿದ್ದಾರೆ. ಆದರೆ ಆತನ ಸುರಕ್ಷತೆಯ ಕಳವಳದ ನಡುವೆ ಆತನನ್ನು ಮತ್ತೊಂದು ಠಾಣೆಗೆ ವರ್ಗಾಯಿಸಲಾಗಿದೆ. ಅದೇ ದಿನ ಗುಂಪೊಂದು ಹಿಂದೂ ಸಮುದಾಯದ ಮನೆಗಳು, ಅಂಗಡಿಗಳು ಮತ್ತು ಸ್ಥಳೀಯ ಲೋಕನಾಥ ದೇವಸ್ಥಾನವನ್ನು ಧ್ವಂಸಗೊಳಿಸಿ, ಹಾನಿಯನ್ನುಂಟು ಮಾಡಿದೆ.

Hindu Protest
ಹಿಂದೂ ಸಂಸ್ಕೃತಿ ಪಾಲಿಸಿದ್ದಕ್ಕೆ ಬಾಂಗ್ಲಾದಲ್ಲಿ ಥಳಿತ: ಕೋಲ್ಕತ್ತಾ ಯುವಕ ಬಿಚ್ಚಿಟ್ಟ ಕಥೆ ಇದು...

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾಧಿಕಾರಿ (ಡಿಸಿ) ಮತ್ತು ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಪೊಲೀಸರು ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಗುರುತಿಸಿ 150-170 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಶನಿವಾರ 12 ಜನರ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು BSS ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com