
ಕುವೈತ್: ಪ್ರಧಾನಿ ನರೇಂದ್ರ ಮೋದಿ ಅವರು ಕುವೈತ್ ನ ಅತ್ಯುನ್ನತ ಗೌರವವಾದ ' ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಇದು ಮೋದಿ ಅವರಿಗೆ ದೊರೆತ 20 ನೇ ಅಂತಾರಾಷ್ಟ್ರೀಯ ಗೌರವವಾಗಿದೆ.
ಕುವೈತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುವೈತ್ ನ ರಾಜ ಶೇಕ್ ಮಿಶಾಲ್ ಅಲ್ ಅಹಮದ್ ಅಲ್ ಜಾಬೆರ್ ಸಬಾ ಅವರು ಪ್ರಧಾನಿ ಮೋದಿ ಅವರಿಗೆ 'ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್ ನೀಡಿ ಗೌರವಿಸಿದರು.
ವಿದೇಶಿ ಗಣ್ಯರು ಮತ್ತು ರಾಜಮನೆತದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ಈ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ ಎಂದು ಕುವೈತ್ ಅಧಿಕಾರಿಗಳು ತಿಳಿಸಿದ್ದಾರೆ.
ಎರಡು ದಿನಗಳ ಭೇಟಿಗಾಗಿ ಶನಿವಾರ ಕುವೈತ್ ಗೆ ತೆರಳಿದ ಪ್ರಧಾನಿ ಮೋದಿ ಭಾನುವಾರ ಕುವೈತ್ ರಾಜ ಶೇಕ್ ಮಿಶಾಲ್ ಅಲ್ ಅಹಮದ್ ಅಲ್ ಜಾಬೆರ್ ಅಲ್ ಸಾಬಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ರಕ್ಷಣಾ ವಲಯ, ವ್ಯಾಪಾರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿ ಕುರಿತು ಚರ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement