ಅಮೆರಿಕದಲ್ಲಿ ಭಾರತೀಯ ಮೂಲದ ಮತ್ತೊಬ್ಬ ವಿದ್ಯಾರ್ಥಿಯ ಶವ ಪತ್ತೆ, ವಾರದಲ್ಲಿ ಇದು ಮೂರನೇ ಪ್ರಕರಣ!

ಯುನೈಟೆಡ್ ಸ್ಟೇಟ್ಸ್ ನಲ್ಲಿ ಮತ್ತೊಬ್ಬ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಶ್ರೇಯಸ್ ರೆಡ್ಡಿ ಎಂಬ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಓಹಿಯೋದ ಸಿನ್ಸಿನಾಟಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಒಂದು ವಾರದೊಳಗೆ ಇದು ಮೂರನೇ ಪ್ರಕರಣವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನ್ಯೂಯಾರ್ಕ್: ಯುನೈಟೆಡ್ ಸ್ಟೇಟ್ಸ್ ನಲ್ಲಿ ಮತ್ತೊಬ್ಬ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಶ್ರೇಯಸ್ ರೆಡ್ಡಿ ಎಂಬ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಓಹಿಯೋದ ಸಿನ್ಸಿನಾಟಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಒಂದು ವಾರದೊಳಗೆ ಇದು ಮೂರನೇ ಪ್ರಕರಣವಾಗಿದೆ.

ಶ್ರೇಯಸ್ ರೆಡ್ಡಿ ಸಾವಿಗೆ ಕಾರಣ ಇನ್ನೂ ತಿಳಿದಿಲ್ಲ. ವರದಿಗಳ ಪ್ರಕಾರ, ರೆಡ್ಡಿ ಲಿಂಡರ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ವಿದ್ಯಾರ್ಥಿಯಾಗಿದ್ದರು. ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ. 

'ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಶ್ರೇಯಸ್ ರೆಡ್ಡಿ ಬೆನ್ನಿಗೇರಿ ಅವರ ದುರದೃಷ್ಟಕರ ನಿಧನದಿಂದ ತೀವ್ರ ದುಃಖವಾಗಿದೆ. ಪೊಲೀಸ್ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ, ಯಾವುದೇ ಅನುಮಾನವಿಲ್ಲ, ಕಾನ್ಸುಲೇಟ್ ಕುಟುಂಬದೊಂದಿಗೆ ಸಂಪರ್ಕವನ್ನು ಮುಂದುವರೆಸಿ ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ,' ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ದೂತಾವಾಸ ಕಚೇರಿ ತಿಳಿಸಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ವಿವೇಕ್ ಸೈನಿ ಮತ್ತು ನೀಲ್ ಆಚಾರ್ಯ ಎಂಬ ಭಾರತೀಯ ವಿದ್ಯಾರ್ಥಿಗಳ ಸಾವು ಪ್ರಕರಣ ಸಂಭವಿಸಿದ ವಾರದಲ್ಲಿಯೇ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಯೊಬ್ಬನ ಸಾವಾಗಿದ್ದು ದುರದೃಷ್ಟಕರವೆನ್ನಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com