
ನವದೆಹಲಿ: ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೂ ಒಂದು ದಿನ ಮುನ್ನ ಬಲೂಚಿಸ್ಥಾನದ ಪ್ರಾಂತ್ಯದಲ್ಲಿ ಎರಡು ಬಾಂಬ್ ಸ್ಫೋಟ ಸಂಭವಿಸಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ.
ಪಿಶಿನ್ ಜಿಲ್ಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಕಚೇರಿ ಎದುರು ಮೊದಲ ಸ್ಫೋಟ ಸಂಭವಿಸಿದ್ದು 17 ಮಂದಿ ಸಾವನ್ನಪ್ಪಿದ್ದರು.
ಇದಾದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಖಿಲ್ಲಾ ಸೈಫ್ ಉಲ್ಲಾಹ್ ಜಿಲ್ಲೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 2 ಸ್ಫೋಟಗಳಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿ ಅಬ್ದುಲ್ಲಾ ಝೆಹ್ರಿ ಮಾತನಾಡಿ, ಪಕ್ಷೇತರ ಅಭ್ಯರ್ಥಿ ಅಸ್ಫಂದ್ಯರ್ ಖಾನ್ ಕಾಕರ್ ನಿವಾಸದ ಎದುರು ಬ್ಯಾಗ್ ನಲ್ಲಿ ಬಾಂಬ್ ಇಟ್ಟು ಸ್ಫೋಟಿಸಲಾಗಿದೆ. 5 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
Advertisement