ಪಾಕಿಸ್ತಾನ ಚುನಾವಣೆ: ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಇಮ್ರಾನ್ ಖಾನ್ ಪಕ್ಷ ಕರೆ

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಅಲಿ ಖಾನ್ ಅವರು ಭಾನುವಾರ ಚುನಾವಣಾಧಿಕಾರಿಗಳ (ಆರ್‌ಒ) ವಿರುದ್ಧ ರಾಷ್ಟ್ರ ವ್ಯಾಪಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದಾರೆ ಎಂದು ಪಾಕಿಸ್ತಾನ ಮೂಲದ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.
ಇಮ್ರಾನ್ ಖಾನ್ ಬೆಂಬಲಿಗರ ಪ್ರತಿಭಟನೆ
ಇಮ್ರಾನ್ ಖಾನ್ ಬೆಂಬಲಿಗರ ಪ್ರತಿಭಟನೆ
Updated on

ಇಸ್ಲಾಮಾಬಾದ್: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ಫಲಿತಾಂಶ ಪ್ರಕಟವಾಗಿ ಮೂರು ದಿನ ಕಳೆದಿದ್ದರೂ ಸರ್ಕಾರ ರಚನೆ ಸಾಧ್ಯವಾಗಿಲ್ಲ. ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಅಲಿ ಖಾನ್ ಅವರು ಭಾನುವಾರ ಚುನಾವಣಾಧಿಕಾರಿಗಳ (ಆರ್‌ಒ) ವಿರುದ್ಧ ರಾಷ್ಟ್ರ ವ್ಯಾಪಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದಾರೆ ಎಂದು ಪಾಕಿಸ್ತಾನ ಮೂಲದ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಫೆಬ್ರವರಿ 8 ರ ಚುನಾವಣೆಯ ನಂತರ 'ಗುಲಾಮಗಿರಿ ಸ್ವೀಕಾರಾರ್ಹವಲ್ಲ' ಎಂಬ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ದೃಷ್ಟಿಯಲ್ಲಿ ಪಾಕಿಸ್ತಾನದ ಜನರು ಸಂಪೂರ್ಣ ವಿಶ್ವಾಸ ಹೊಂದಿದ್ದಾರೆ. ಮತ ಎಣಿಕೆ ದಿನದಂದು ಎದುರಿಸಿದ ಸವಾಲುಗಳ ಹೊರತಾಗಿಯೂ, ಜನರು ಪಿಟಿಐ ಪರವಾಗಿ ಸ್ಪಷ್ಟ ಮತ್ತು ಪಾರದರ್ಶಕ ಜನಾದೇಶವನ್ನು ಪ್ರದರ್ಶಿಸಿದ್ದಾರೆ ಎಂದು ಗೋಹರ್ ಅಲಿಖಾನ್ ಹೇಳಿದ್ದಾರೆ. 

ಆರ್‌ಒಗಳು ಮತ್ತೊಮ್ಮೆ ತಮ್ಮ ಅಧಿಕಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದು, ಚುನಾವಣಾ ಫಲಿತಾಂಶಗಳನ್ನು ತಿರುಚುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನಗಳನ್ನು ಖಂಡಿಸಿದರು. ಅಂತಹ ಯಾವುದೇ ಕ್ರಮವು ಪಾಕಿಸ್ತಾನಕ್ಕೆ ಹಾನಿಕರ ಮತ್ತು ಜನರಿಗೆ ಸ್ವೀಕಾರಾರ್ಹವಲ್ಲ, 'ತಮ್ಮ ಮತದಾನದ ಹಕ್ಕುಗಳ ಉಲ್ಲಂಘನೆಯನ್ನು ಯಾರು ಸಹಿಸುವುದಿಲ್ಲ' ಎಂದು ಅಲಿ ಖಾನ್ ಎಚ್ಚರಿಸಿದ್ದಾರೆ.

'ಜನಾದೇಶವನ್ನು ರಕ್ಷಿಸುವ ಮೂಲಭೂತ ಉದ್ದೇಶಕ್ಕಾಗಿ ಸಾಂವಿಧಾನಿಕ, ಪ್ರಜಾಪ್ರಭುತ್ವ ಮತ್ತು ರಾಜಕೀಯ ಹಕ್ಕುಗಳನ್ನು' ಬಳಸಿಕೊಳ್ಳುವ ಪ್ರಾಮುಖ್ಯತೆಯನ್ನು ಅವರು ಎತ್ತಿ ತೋರಿಸಿದರು ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಕೇಂದ್ರ, ಪಂಜಾಬ್ ಮತ್ತು ಖೈಬರ್ ಪಖ್ತುಂಖ್ವಾದಲ್ಲಿ ಸ್ಪಷ್ಟ ಬಹುಮತ ಗಳಿಸುವುದು 'ಪಿಟಿಐನ ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ಹಕ್ಕು' ಎಂದು ಪಿಟಿಐ ಅಧ್ಯಕ್ಷರು ಪ್ರತಿಪಾದಿಸಿದ್ದಾರೆ.'ಜನಾದೇಶದ ಸಂಪೂರ್ಣ ಗೌರವವನ್ನು ಕಾಪಾಡುವುದು ಪಾಕಿಸ್ತಾನದ ಹಿತದೃಷ್ಟಿಯಿಂದ ಮತ್ತು ಎಲ್ಲಾ ಸಂದರ್ಭಗಳಲ್ಲಿಯೂ ಅದನ್ನು ಕಾಪಾಡಿಕೊಳ್ಳಬೇಕು' ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com