ಲಂಡನ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿನ್ನೆ ಬುಧವಾರ ಲಂಡನ್ ನಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎರಡೂ ದೇಶಗಳ ನಡುವೆ ಮುನ್ನಡೆಯುತ್ತಿರುವ ಮುಕ್ತ ವ್ಯಾಪಾರ ಒಪ್ಪಂದ(FTA) ಸದ್ಯದಲ್ಲಿಯೇ ಯಶಸ್ವಿಯಾಗಿ ಮುಕ್ತಾಯವಾಗಲಿದೆ ಎಂದು ರಿಷಿ ಸುನಕ್ ಆಶಾವಾದ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಎರಡೂ ದೇಶಗಳು ಒಟ್ಟಾಗಿ ವ್ಯಾಪಾರ, ರಕ್ಷಣೆ ಮತ್ತು ತಂತ್ರಜ್ಞಾನ ವಲಯಗಳಲ್ಲಿ ಕೆಲಸ ಮಾಡುವ ಅಗತ್ಯವನ್ನು ಒಪ್ಪಿಕೊಂಡರು. ದ್ವಿಪಕ್ಷೀಯ ಸಹಭಾಗಿತ್ವದಲ್ಲಿ ರಕ್ಷಣೆ ಮತ್ತು ಭದ್ರತಾ ಸಂಬಂಧಗಳನ್ನು ಬಲಪಡಿಸುವ ಕುರಿತು ರಿಷಿ ಸುನಕ್ ಅವರು ಉತ್ಸಾಹ ತೋರಿಸಿದ್ದಾರೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.
ಭಾರತ ಮತ್ತು ಇಂಗ್ಲೆಂಡ್ ಮುಕ್ತ ವ್ಯಾಪಾರ ಒಪ್ಪಂದದಲ್ಲಿ ಸಹಿ ಹಾಕಿವೆ. ಈ ಕುರಿತ ಮಾತುಕತೆ 2022ರಲ್ಲಿ ಆರಂಭವಾಯಿತು. ಒಪ್ಪಂದದ 13ನೇ ಸುತ್ತು ಕಳೆದ ಡಿಸೆಂಬರ್ ನಲ್ಲಿ ಮುಕ್ತಾಯವಾಯಿತು. ರಿಷಿ ಸುನಕ್ ಅವರ ಭೇಟಿಯ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇತ್ತೀಚೆಗೆ ಉಭಯ ದೇಶಗಳು ಮಾಡಿಕೊಂಡಿರುವ ದ್ವಿಪಕ್ಷೀಯ ರಕ್ಷಣಾ ಒಪ್ಪಂದದ ವಿಸ್ತರಣೆ, ಜಂಟಿ ಕಾರ್ಯಾಚರಣೆ, ತರಬೇತಿ, ಸಾಮರ್ಥ್ಯ ವೃದ್ಧಿ, ಮಿಲಿಟರಿ ಬಾಂಧವ್ಯ, ನೌಕಾವಲಯ ಒಪ್ಪಂದಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.
Had a very warm meeting with the UK Prime Minister, Shri @rishisunak in London. I had the opportunity to discuss a wide range of issues with him.
We discussed issues pertaining to defence, economic cooperation and how
Advertisement