ಇರಾನ್ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 4 ಮಕ್ಕಳು, ಮೂವರು ಮಹಿಳೆಯರ ಸಾವು

ಇರಾನ್ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ವ ಪರಿಸ್ಥಿತಿವೇರ್ಪಟ್ಟಿದ್ದು,  ಗುರುವಾರ ಬೆಳಗ್ಗೆ ಇರಾನ್ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ನಾಲ್ವರು ಮಕ್ಕಳು, ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಲೂಚಿಸ್ತಾನ: ಇರಾನ್ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ವ ಪರಿಸ್ಥಿತಿವೇರ್ಪಟ್ಟಿದ್ದು, ಗುರುವಾರ ಬೆಳಗ್ಗೆ ಇರಾನ್ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ನಾಲ್ವರು ಮಕ್ಕಳು, ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಈ ಕುರಿತು 
ಸಿಸ್ತಾನ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯದ ಡೆಪ್ಯುಟಿ ಗವರ್ನರ್ ಅಲಿ ರೆಜಾ ಮರ್ಹಮತಿ ಅವರು ಸರ್ಕಾರಿ ಸ್ವಾಮ್ಯದ ಟಿವಿ  ಸಂದರ್ಶನದಲ್ಲಿ ಮಾಹಿತಿ ನೀಡಿದ್ದಾರೆ.

ಮಂಗಳವಾರ ರಾತ್ರಿ ಇರಾನ್, ಪಾಕಿಸ್ತಾನದ ಮೇಲೆ ದಾಳಿ ಪ್ರಾರಂಭಿಸಿದ ನಂತರ ಗುರುವಾರ ಮುಂಜಾನೆ ವೈಮಾನಿಕ ದಾಳಿ ನಡೆದಿದ್ದು, ಅಣ್ವಸ್ತ್ರ-ಸಜ್ಜಿತ ಇಸ್ಲಾಮಾಬಾದ್ ಮತ್ತು ಟೆಹ್ರಾನ್ ನಡುವೆ ಉದ್ವಿಗ್ನತೆಯನ್ನು ಹೆಚ್ಚಿಸಿವೆ. ಗಾಜಾ ಪಟ್ಟಿಯಲ್ಲಿ ಹಮಾಸ್‌ನ ಮೇಲೆ ಇಸ್ರೇಲ್‌ ಯುದ್ಧದ ನಡುವೆ ಮಧ್ಯಪ್ರಾಚ್ಯದಾದ್ಯಂತ ಉದ್ವಿಗ್ನತೆ ಹೆಚ್ಚಾಗಿರುವಂತೆಯೇ ಈಗ ಪಾಕಿಸ್ತಾನ ಹಾಗೂ ಇರಾನ್ ನಡುವಿನ ಯುದ್ಧದ ಭೀತಿ ಆವರಿಸಿದೆ. 

ಪಾಕಿಸ್ತಾನದ ವಾಯುಪಡೆಯು ಇರಾನ್‌ನೊಳಗಿನ ಬಂಡುಕೋರರ ಮೇಲೆ ಪ್ರತೀಕಾರದ ದಾಳಿ ನಡೆಸಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ. ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಇರಾನ್ ಮಂಗಳವಾರ ನಡೆಸಿದ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ತದನಂತರ ಪಾಕಿಸ್ತಾನ ಪ್ರತಿದಾಳಿ ನಡೆಸಿದೆ. ಇರಾನ್ ಮತ್ತು ಪಾಕಿಸ್ತಾನದ ಗಡಿಗೆ ಸಮೀಪವಿರುವ ಸರವನ್ ನಗರದ ಬಳಿ ಹಲವಾರು ಸ್ಫೋಟಗಳು ಕೇಳಿಬಂದಿವೆ ಎಂದು ಇರಾನ್‌ನ ರಾಜ್ಯ ಮಾಧ್ಯಮ ಗುರುವಾರ ಹೇಳಿದೆ.

ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಸಿಸ್ತಾನ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯದ ಡೆಪ್ಯುಟಿ ಗವರ್ನರ್ ಅಲಿ ರೆಜಾ ಮರ್ಹಮತಿ ಅವರನ್ನು ಉಲ್ಲೇಖಿಸಿ ಅಧಿಕೃತ IRNA ಸುದ್ದಿ ಸಂಸ್ಥೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com