ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ' ಪ್ರದಾನ

"ನನಗೆ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಾನು ಅದನ್ನು ಭಾರತದ ಜನರಿಗೆ ಅರ್ಪಿಸುತ್ತೇನೆ".
Prime Minister Narendra Modi being conferred the highest civilian award of Russian Federation, Order of St Andrew the Apostle, by Russian President Vladimir Putin
ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ' ಪ್ರದಾನ

ಮಾಸ್ಕೋ: ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯಲ್ಲಿ ಅಸಾಧಾರಣ ಸೇವೆಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್' ಪ್ರದಾನ ಮಾಡಿದರು.

"ನನಗೆ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಾನು ಅದನ್ನು ಭಾರತದ ಜನರಿಗೆ ಅರ್ಪಿಸುತ್ತೇನೆ" ಎಂದು ಪ್ರಧಾನಿ ಮೋದಿ ಇಂದು ಮಾಸ್ಕೋದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ನಂತರ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧ ವೃದ್ಧಿಗೆ ನೀಡಿದ ವಿಶಿಷ್ಟ ಕೊಡುಗೆಗಾಗಿ ಪ್ರಧಾನಿ ಮೋದಿಗೆ ಈ ಪ್ರಶಸ್ತಿ ನೀಡಲಾಗಿದೆ.

Prime Minister Narendra Modi being conferred the highest civilian award of Russian Federation, Order of St Andrew the Apostle, by Russian President Vladimir Putin
'ಮೇರಾ ಜೂತಾ ಹೈ ಜಪಾನಿ' ಹಾಡಿನಾಚೆಗಿನ ಸ್ನೇಹ: ಭಾರತ-ರಷ್ಯಾ ಬಾಂಧವ್ಯಕ್ಕೆ ಮೋದಿ ಸಾಂಸ್ಕೃತಿಕ ರಾಜತಾಂತ್ರಿಕತೆಯ ಬೆಸುಗೆ!

ಯೇಸುವಿನ ಮೊದಲ ಅಪೊಸ್ಟಲ್ ಮತ್ತು ರಷ್ಯಾದ ಪೋಷಕ ಸಂತ ಆಂಡ್ರ್ಯೂ ಅವರ ಗೌರವಾರ್ಥವಾಗಿ 1698 ರಲ್ಲಿ ಜಾರ್ ಪೀಟರ್ ದಿ ಗ್ರೇಟ್ ಈ ಪ್ರಶಸ್ತಿಯನ್ನು ಸ್ಥಾಪಿಸಿದರು. ಇದನ್ನು ರಷ್ಯಾದ ಅತ್ಯುನ್ನತ ನಾಗರಿಕ ಸೇವೆ ಅಥವಾ ಮಿಲಿಟರಿ ಸೇವೆಗೆ ಮಾತ್ರ ನೀಡಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com