ರಷ್ಯಾ ಸೈನ್ಯದಲ್ಲಿ ಕರ್ತವ್ಯದಲ್ಲಿರುವ ಭಾರತೀಯರ ಬಿಡುಗಡೆಗೆ ಸಹಾಯಕ್ಕೆ ಒಲವು: ಮೋದಿ-ಪುಟಿನ್ ಮಾತುಕತೆಯಲ್ಲಿ ಒತ್ತು

ರಷ್ಯಾದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ನಾಗರಿಕರ ವಿಷಯವನ್ನೂ ವಿರೋಧ ಪಕ್ಷದ ಸದಸ್ಯರು ಇತ್ತೀಚೆಗೆ ಸದನದಲ್ಲಿ ಪ್ರಸ್ತಾಪಿಸಿದ್ದರು. ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಈ ವಿಷಯದ ಬಗ್ಗೆ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದರು.
ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಷ್ಯಾದ ಮಾಸ್ಕೋದ ಹೊರಗಿನ ನೊವೊ-ಒಗರಿಯೋವೊ ನಿವಾಸದಲ್ಲಿ ಅನೌಪಚಾರಿಕ ಸಭೆ ನಡೆಸಿದರು.
ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಷ್ಯಾದ ಮಾಸ್ಕೋದ ಹೊರಗಿನ ನೊವೊ-ಒಗರಿಯೋವೊ ನಿವಾಸದಲ್ಲಿ ಅನೌಪಚಾರಿಕ ಸಭೆ ನಡೆಸಿದರು.
Updated on

ಮಾಸ್ಕೋ: ಮಹತ್ವದ ರಾಜತಾಂತ್ರಿಕ ಬೆಳವಣಿಗೆಯೊಂದರಲ್ಲಿ, ರಷ್ಯಾದ ಸೇನೆಯಲ್ಲಿ ಉದ್ಯೋಗದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಹಿಂದಿರುಗಿಸಲು ರಷ್ಯಾ ಸರ್ಕಾರ ಎಲ್ಲಾ ರೀತಿಯಲ್ಲಿ ಅನುಕೂಲ ಮಾಡಿಕೊಡಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಯಿತು ಎಂದು ತಿಳಿದುಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಮಾಸ್ಕೋದ ಅಧ್ಯಕ್ಷರ ಭವನದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದರು. ಉಭಯ ನಾಯಕರು ಆತ್ಮೀಯ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಖಾಸಗಿ ಸಭೆ ಮತ್ತು ಭೋಜನವನ್ನು ಒಳಗೊಂಡ ಚರ್ಚೆಯಲ್ಲಿ ತೊಡಗಿದರು.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಪ್ರಧಾನಿ ಮೋದಿ ಅವರು ಅಧ್ಯಕ್ಷ ಪುಟಿನ್ ಅವರಿಗೆ ನೊವೊ-ಒಗರಿಯೊವೊದಲ್ಲಿ ತಮಗೆ ಆತಿಥ್ಯ ನೀಡಿದ್ದಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಭಾರತ ಮತ್ತು ರಷ್ಯಾ ನಡುವಿನ ಬಾಂಧವ್ಯವನ್ನು ಬಲಪಡಿಸುವ ಫಲಪ್ರದ ಚರ್ಚೆಗಳನ್ನು ನಿರೀಕ್ಷಿಸುತ್ತಿದ್ದೇನೆ ಎಂದಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಷ್ಯಾದ ಮಾಸ್ಕೋದ ಹೊರಗಿನ ನೊವೊ-ಒಗರಿಯೋವೊ ನಿವಾಸದಲ್ಲಿ ಅನೌಪಚಾರಿಕ ಸಭೆ ನಡೆಸಿದರು.
ರಷ್ಯಾಗೆ ಸ್ವಾಗತ ಆತ್ಮೀಯ ಮಿತ್ರ: ಪ್ರಧಾನಿ ಮೋದಿಗೆ ಪುಟಿನ್

ರಷ್ಯಾದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ನಾಗರಿಕರ ವಿಷಯವನ್ನೂ ವಿರೋಧ ಪಕ್ಷದ ಸದಸ್ಯರು ಇತ್ತೀಚೆಗೆ ಸದನದಲ್ಲಿ ಪ್ರಸ್ತಾಪಿಸಿದ್ದರು. ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಈ ವಿಷಯದ ಬಗ್ಗೆ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದರು.

ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಅವರು ಪ್ರಧಾನಿಯವರನ್ನು ಉದ್ದೇಶಿಸಿ ಪ್ರಶ್ನೆಗಳ ಸರಣಿಯ ಮೂಲಕ ಈ ವಿಷಯವನ್ನು ಪ್ರಸ್ತಾಪಿಸಿದ್ದರು.

ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಪ್ರಕಾರ, ಕನಿಷ್ಠ 50 ಭಾರತೀಯರು ರಷ್ಯಾದ ಸೈನ್ಯಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರಲ್ಲಿ ಇಬ್ಬರು ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ತಮ್ಮ ಚರ್ಚೆಯ ಸಮಯದಲ್ಲಿ, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಅವರು ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ಉದ್ದೇಶಿಸಿ, ನಂತರದ ದಿನಗಳಲ್ಲಿ ಸಮಗ್ರ ಮಾತುಕತೆ ನಡೆಸಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಷ್ಯಾದ ಮಾಸ್ಕೋದ ಹೊರಗಿನ ನೊವೊ-ಒಗರಿಯೋವೊ ನಿವಾಸದಲ್ಲಿ ಅನೌಪಚಾರಿಕ ಸಭೆ ನಡೆಸಿದರು.
ಲೇಬರ್ ಪಕ್ಷ- ಭಾರತದ ನಡುವಿನ ಹಳೆಯ ಭಿನ್ನಾಭಿಪ್ರಾಯಗಳನ್ನು ಮೀರಿ ಸಹಕಾರದ ನವಯುಗ ಸ್ಥಾಪಿಸಬಲ್ಲರೇ ಮೋದಿ-ಸ್ಟಾರ್ಮರ್? (ಜಾಗತಿಕ ಜಗಲಿ)

ಭಾರತದ ನಿಲುವು ಮಿಲಿಟರಿ ವಿಧಾನಕ್ಕಿಂತ ಹೆಚ್ಚಾಗಿ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಉಕ್ರೇನ್ ಸಂಘರ್ಷಕ್ಕೆ ಪರಿಹಾರದ ಅಗತ್ಯವನ್ನು ಒತ್ತಿಹೇಳುತ್ತದೆ ಎಂದು ಸರ್ಕಾರದ ಮೂಲಗಳು ಸೂಚಿಸಿವೆ.

ಇಂದು ಪ್ರಧಾನಿ ಮೋದಿ ಅವರು ಟೋಂಬ್ ಆಫ್ ದಿ ಅನ್ ನೋನ್ ಸೈನಿಕರ ಸಮಾಧಿಗೆ ಗೌರವ ಸಲ್ಲಿಸಲು ಮತ್ತು ರೊಸಟಮ್ ಪೆವಿಲಿಯನ್‌ಗೆ ಭೇಟಿ ನೀಡಲಿದ್ದಾರೆ.

22 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಅಧ್ಯಕ್ಷ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿಯವರು ಮಾಸ್ಕೋಗೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com