ಬಾಂಗ್ಲಾದೇಶ: ಢಾಕಾದ ರೆಸ್ಟೋರೆಂಟ್‌ನಲ್ಲಿ ಭಾರಿ ಅಗ್ನಿ ಅವಘಡ, 44 ಮಂದಿ ಸಾವು

ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 44 ಮಂದಿ ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿರುವುದು
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿರುವುದು

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 44 ಮಂದಿ ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಢಾಕಾ ಬೈಲಿ ರಸ್ತೆಯಲ್ಲಿರುವ ಬಿರಿಯಾನಿ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿಯ ಕೆನ್ನಾಲಿಗೆ ಇತರ ಮಹಡಿಗಳಿಗೂ ವ್ಯಾಪಿಸಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

ಘಟನೆ ನಡೆದ ಪ್ರದೇಶದಲ್ಲಿ ಅನೇಕ ಹೋಟೆಲ್​ಗಳು, ಬಟ್ಟೆ ಅಂಗಡಿಗಳು ಮತ್ತು ಮೊಬೈಲ್ ಫೋನ್ ಮಾರಾಟ ಅಂಗಡಿಗಳಿವೆ.

ಸ್ಥಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 42 ಮಂದಿ ಸೇರಿದಂತೆ 75 ಮಂದಿಯನ್ನು 7 ಅಂತಸ್ತಿನ ಕಟ್ಟಡದಿಂದ ಹೊರ ತೆಗೆಯಲಾಗಿದ್ದು, ಕೆಲವ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವು ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅವಘಟ ಸಂಭವಿಸಿದೆ ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿರುವುದು
ಬಾಂಗ್ಲಾದೇಶ: ರೈಲು ಅಪಘಾತದಲ್ಲಿ 15 ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ

ಮೆಟ್ಟಿಲುಗಳ ಮೇಲೆ ಹೊಗೆ ಬರುತ್ತಿತ್ತು. ಸಾಕಷ್ಟು ಜನರು ಮೇಲೆ ಓಡಿ ಬರುತ್ತಿದ್ದರು, ಕೆಲವರು ಕಟ್ಟಡಿಂದ ಇಳಿಯರು ನೀರಿನ ಪೈಪ್ ಗಳನ್ನು ಬಳಸುತ್ತಿದ್ದರು. ಕೆಲವರು ಮಹಡಿಯಿಂದ ಕೆಳಗೆ ಜಿಗಿದು ಗಾಯಗೊಂಡಿದ್ದರು ಎಂದು ರೆಸ್ಟೋರೆಂಟ್ ಮ್ಯಾನೇಜರ್ ಹೇಳಿದ್ದಾರೆ.

ಜುಲೈ 2021 ರಲ್ಲಿ, ಆಹಾರ ಸಂಸ್ಕರಣಾ ಕಾರ್ಖಾನೆಯಲ್ಲಿ ಬೆಂಕಿ ಆವರಿಸಿದಾಗ ಅನೇಕ ಮಕ್ಕಳು ಸೇರಿದಂತೆ ಕನಿಷ್ಠ 52 ಜನರು ಸಾವನ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com