ಪ್ರಶಸ್ತಿ ಪಡೆಯುತ್ತಿರುವ ಪ್ರಧಾನಿ ಮೋದಿ
ಪ್ರಶಸ್ತಿ ಪಡೆಯುತ್ತಿರುವ ಪ್ರಧಾನಿ ಮೋದಿ

ಪ್ರಧಾನಿ ಮೋದಿಗೆ ಭೂತಾನ್ ನ ಅತ್ಯುನ್ನತ ನಾಗರಿಕ ಗೌರವ; 'ಆರ್ಡರ್ ಆಫ್ ದಿ ಡ್ರಕ್ ಗ್ಯಾಲ್ಪೊ' ಪ್ರಶಸ್ತಿ ಪ್ರದಾನ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭೂತಾನ್ ನ ಅತ್ಯುನ್ನತ ನಾಗರಿಕ ಗೌರವವಾದ 'ಆರ್ಡರ್ ಆಫ್ ದಿ ಡ್ರಕ್ ಗ್ಯಾಲ್ಪೊ' ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
Published on

ಥಿಂಪೊ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭೂತಾನ್ ನ ಅತ್ಯುನ್ನತ ನಾಗರಿಕ ಗೌರವವಾದ 'ಆರ್ಡರ್ ಆಫ್ ದಿ ಡ್ರಕ್ ಗ್ಯಾಲ್ಪೊ' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭೂತಾನ್ ದೊರೆ ಜಿಗ್ಮೆ ಖೇಸರ್ ನಾಂಗೇಲ್ ವಾಂಗ್ ಚುಕ್ ಅವರು ಈ ಪ್ರಶಸ್ತಿ ನೀಡಿ ಅಭಿನಂದಿಸಿದ್ದಾರೆ. ಪ್ರಧಾನಿ ಮೋದಿ ಈ ಪ್ರಶಸ್ತಿ ಪಡೆದುಕೊಂಡ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಭೂತಾನ್ ನ ಅತ್ಯುನ್ನತ ನಾಗರಿಕ ಗೌರವ ' ಆರ್ಡರ್ ಆಫ್ ದಿ ಗ್ಯಾಲ್ಪೊ' ಪ್ರಶಸ್ತಿ ಸ್ವೀಕರಿಸಲು ನನಗೆ ಸಂತಸವಾಗಿದೆ. ಈ ಪ್ರಶಸ್ತಿಯನ್ನು 140 ಕೋಟಿ ಭಾರತೀಯರಿಗೆ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

2021ರ ಡಿಸೆಂಬರ್ 17 ರಂದು ಭೂತಾನ್ ನ 114ನೇ ರಾಷ್ಟ್ರೀಯ ದಿನಾಚರಣೆ ಸಂದರ್ಭದಲ್ಲಿ ಈ ಪ್ರಶಸ್ತಿ ಘೋಷಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com