ಬ್ರಿಟನ್: ವೇಲ್ಸ್ ರಾಜಕುಮಾರಿ ಕೇಟ್ ಮಿಡ್ಲ್ ಟನ್ ಗೆ ಕ್ಯಾನ್ಸರ್

ಕೇಟ್ ಮಿಡ್ಲ್ ಟನ್ ಈ ವರ್ಷದ ಜನವರಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇದು ಅವರ ಆರೋಗ್ಯದ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿತ್ತು.
ಕೇಟ್ ಮಿಡ್ಲ್ ಟನ್(ಸಂಗ್ರಹ ಚಿತ್ರ)
ಕೇಟ್ ಮಿಡ್ಲ್ ಟನ್(ಸಂಗ್ರಹ ಚಿತ್ರ)
Updated on

ಬ್ರಿಟನ್: ವೇಲ್ಸ್ ರಾಜಕುಮಾರಿ ಕೇಟ್ ಮಿಡಲ್ಟನ್ (Kate Middleton) ಕ್ಯಾನ್ಸರ್‌ಗೆ (Cancer) ಕಿಮೋಥೆರಪಿಗೆ ಒಳಗಾಗುತ್ತಿರುವುದಾಗಿ ತಿಳಿಸಿದ್ದಾರೆ. ವೀಡಿಯೊ ಸಂದೇಶದಲ್ಲಿ ಈ ಆಘಾತಕಾರಿ ಮಾಹಿತಿ ಹೊರಹಾಕಿದ್ದಾರೆ.

ಕೇಟ್ ಮಿಡ್ಲ್ ಟನ್ ಈ ವರ್ಷದ ಜನವರಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇದು ಅವರ ಆರೋಗ್ಯದ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿತ್ತು. ಜನವರಿಯಲ್ಲಿ, ಕೇಟ್ ಮಿಡಲ್ಟನ್ ಲಂಡನ್‌ನಲ್ಲಿ ಹೊಟ್ಟೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದನ್ನು ಆರಂಭದಲ್ಲಿ ಕ್ಯಾನ್ಸರ್ ಅಲ್ಲ ಎಂದು ಭಾವಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿತ್ತು. ಆದರೆ ಶಸ್ತ್ರಚಿಕಿತ್ಸೆಯ ನಂತರದ ವೈದ್ಯಕೀಯ ಪರೀಕ್ಷೆಗಳು ಕೇಟ್ ಮಿಡಲ್ಟನ್ ಕ್ಯಾನ್ಸರ್​ನಿಂದ ಬಳಲುತ್ತಿರುವುದನ್ನು ದೃಢಪಡಿಸಿದ್ದವು.

ವೀಡಿಯೊ ಸಂದೇಶದಲ್ಲಿ ಕೇಟ್ ಮಿಡಲ್ಟನ್, ‘ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ ನಿಮ್ಮ ಬೆಂಬಲ ಮತ್ತು ಶುಭ ಹಾರೈಕೆಗಳಿಗಾಗಿ ನಾನು ವೈಯಕ್ತಿಕವಾಗಿ ಧನ್ಯವಾದ ಹೇಳಲು ಬಯಸುತ್ತೇನೆ. ನಮ್ಮ ಇಡೀ ಕುಟುಂಬಕ್ಕೆ ಕಳೆದ ಎರಡು ತಿಂಗಳು ಬಹಳಷ್ಟು ಕಷ್ಟಕರ ದಿನಗಳಾಗಿವೆ. ಆದರೆ ಅದ್ಭುತ ವೈದ್ಯಕೀಯ ತಂಡ ನನ್ನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ಅದಕ್ಕಾಗಿ ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ಹೊಟ್ಟೆಯ ಶಸ್ತ್ರ ಚಿಕಿತ್ಸೆ ಮಾಡಿದಾಗ ಕ್ಯಾನ್ಸರ್ ಪತ್ತೆಯಾಗಿರಲಿಲ್ಲ’ ಎಂದು ಹೇಳಿದ್ದಾರೆ

ಕೆನ್ಸಿಂಗ್ಟನ್ ಪ್ಯಾಲೇಸ್ ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ ವೇಲ್ಸ್ ರಾಜಕುಮಾರಿ ಬಗ್ಗೆ ಮಾಹಿತಿ ನೀಡಲಾಗಿದ್ದು, ಮಿಡಲ್ಟನ್​ಗೆ ಶಸ್ತ್ರಚಿಕಿತ್ಸೆಯ ನಂತರ ನಡೆಸಿದ ವೈದ್ಯಕೀಯ ಪರೀಕ್ಷೆಗಳಲ್ಲಿ ಕ್ಯಾನ್ಸರ್ ಪತ್ತೆಯಾಗಿದೆ. ಹಾಗಾಗಿ ವೈದ್ಯಕೀಯ ತಂಡವು ಕೀಮೋಥೆರಪಿಯ ಕೋರ್ಸ್ ನ್ನು ತೆಗೆದುಕೊಳ್ಳಬೇಕೆಂದು ಸಲಹೆ ನೀಡಿತ್ತು. ಈಗ ಆ ಚಿಕಿತ್ಸೆಯ ಆರಂಭಿಕ ಹಂತದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಿನ್ಸ್ ಹ್ಯಾರಿ ಮತ್ತು ಅವರ ಪತ್ನಿ ಮೇಗನ್ ಮಾರ್ಕೆಲ್ ಕೇಟ್‌ ಜತೆಗಿದ್ದು ಧೈರ್ಯ ತುಂಬಿದ್ದಾರೆ. ಕೇಟ್ ಅವರು ಆರೋಗ್ಯದ ಬಗ್ಗೆ ಮಾರ್ಚ್ 22 ರಂದು ವೀಡಿಯೊವನ್ನು ಹಂಚಿಕೊಂಡ ನಂತರ ಡ್ಯೂಕ್ ಮತ್ತು ಡಚೆಸ್ ಆಫ್ ಸಸೆಕ್ಸ್‌ನಿಂದ ಅಧಿಕೃತ ಹೇಳಿಕೆ ಬಂದಿದೆ.

ಪ್ರಸ್ತುತ ಕ್ಯಾನ್ಸರ್ ಆರಂಭಿಕ ಹಂತದಲ್ಲಿದ್ದೇನೆ ಎಂದಿರುವ ಕೇಟ್, ಇತರ ಕ್ಯಾನ್ಸರ್ ಪೀಡಿತರ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕ್ಯಾನ್ಸರ್ ಪೀಡಿತರು ಭರವಸೆಯನ್ನು ಕಳೆದುಕೊಳ್ಳದೆ ಸೂಕ್ತ ಚಿಕಿತ್ಸೆಯನ್ನು ಪಡೆಯುವಂತೆ ಸಲಹೆ ನೀಡಿದ್ದಾರೆ.

ಕೇಟ್ ಮಿಡಲ್ಟನ್ ಪ್ರಸ್ತುತ ಎಲ್ಲಿದ್ದಾರೆ ಎಂಬುದು ಸಾರ್ವಜನಿಕರಿಗೆ ತಿಳಿದಿರಲಿಲ್ಲ, ರಾಜಮನೆತನದಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com