
ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಾರಿ ಮಳೆಯಿಂದಾಗಿ ಮನೆಯ ಛಾವಣಿ ಕುಸಿದು ಕನಿಷ್ಠ ಐವರು ಗಣಿ ಕಾರ್ಮಿಕರು ಸಾವಿಗೀಡಾಗಿದ್ದಾರೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಸ್ಥಳೀಯ ಕಲ್ಲಿದ್ದಲು ಗಣಿ ಹೊರಗೆ ಕಾರ್ಮಿಕರ ವಸತಿಗಾಗಿ ಮನೆ ನಿರ್ಮಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಕಲ್ಲಿದ್ದಲು ಗಣಿ ಕುಸಿದು ಐವರು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಅವರು ಹೇಳಿದರು.
ಭಾರಿ ಮಳೆಯಿಂದಾಗಿ ಇದೇ ಪ್ರದೇಶದಲ್ಲಿ ಮನೆ ಕುಸಿದು ಏಳು ಮಂದಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರ ಶವಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಳಿಕ ಮುಂದಿನ ಕ್ರಮ ಕೈಗೊಳ್ಳಲು ಅಲ್ಲಿಂದ ಅವರ ಸ್ಥಳೀಯ ಪ್ರದೇಶಗಳಿಗೆ ಕಳುಹಿಸಲಾಗಿದೆ.
ಪ್ರಾಂತ್ಯದ ಹರ್ನೈನಲ್ಲಿ ಗಣಿಯೊಂದರೊಳಗೆ ಮೀಥೇನ್ ಅನಿಲ ಸ್ಫೋಟಗೊಂಡು 12 ಕಲ್ಲಿದ್ದಲು ಗಣಿ ಕಾರ್ಮಿಕರು ಸಾವಿಗೀಡಾಗಿದ್ದರು. ಅದಾದ ಕೆಲವೇ ದಿನಗಳಲ್ಲಿ ಈ ಘಟನೆ ಸಂಭವಿಸಿದೆ. ಇನ್ನೊಂದು ಘಟನೆಯಲ್ಲಿ ಮೂರು ಕಲ್ಲಿದ್ದಲು ಗಣಿಗಾರರನ್ನು ನಾಲ್ಕು ದಿನಗಳ ಹಿಂದೆ ಡುಕ್ಕಿಯ ಗಣಿಯಿಂದ ಶಸ್ತ್ರಸಜ್ಜಿತ ವ್ಯಕ್ತಿಗಳು ಅಪಹರಿಸಿದ್ದರು ಮತ್ತು ಅವರಿನ್ನೂ ಪತ್ತೆಯಾಗಿಲ್ಲ.
Advertisement