ಅಗತ್ಯ ವಸ್ತುಗಳ ಬೆಲೆ ಏರಿಕೆ, ತುತ್ತು ಅನ್ನಕ್ಕೂ ಪರದಾಟ; ಭಾರತಕ್ಕೆ ಸೇರಿಸುವಂತೆ ಆಗ್ರಹ: ಪಿಒಕೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಬೆಲೆಯರಿಕೆ. ವಿದ್ಯುತ್ ಹಾಗೂ ವಿವಿಧ ಸಮಸ್ಯೆಗಳ ವಿರುದ್ಧ ಸಿಡಿದೆದ್ದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಜನತೆ ನಡೆಸುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರ ರೂಪ ಪಡೆದುಕೊಂಡಿದೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ, ತುತ್ತು ಅನ್ನಕ್ಕೂ ಪರದಾಟ; ಭಾರತಕ್ಕೆ ಸೇರಿಸುವಂತೆ ಆಗ್ರಹ: ಪಿಒಕೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಇಸ್ಲಾಮಾಬಾದ್: ಬೆಲೆಯರಿಕೆ. ವಿದ್ಯುತ್ ಹಾಗೂ ವಿವಿಧ ಸಮಸ್ಯೆಗಳ ವಿರುದ್ಧ ಸಿಡಿದೆದ್ದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಜನತೆ ನಡೆಸುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರ ರೂಪ ಪಡೆದುಕೊಂಡಿದೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮುಜಾಫ್ಪರಾಬಾದ್, ರಾವಲ್ ಕೋಟ್ ನಲ್ಲಿ ಸ್ಥಳೀಯರು ಭದ್ರತಾಪಡೆಗಳ ನಡುವೆ ಘರ್ಷಣೆಗಿಳಿದಿದ್ದು, ಘರ್ಷಣೆ ವೇಳೆ ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸುತ್ತಿರುವ ಪೋಸ್ಟರ್ ಗಳು ಹಿಡಿದಿರುವುದು ಕಂಡು ಬಂದಿದೆ.

ಹಣದುಬ್ಬರದ ವಿರುದ್ಧ ಅವಾಮಿ ಆಕ್ಷನ್ ಕಮಿಟಿ (AAC) ಮೇ.10 ರಂದು ಪ್ರತಿಭಟನೆ ಪ್ರಾರಂಭಿಸಿತ್ತು. ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಮುಜಾಫರಾಬಾದ್‌ನಲ್ಲಿ ಬಂದ್ ಮತ್ತು ಜಾಮ್ ಮುಷ್ಕರದ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಈ ವೇಳೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಬಳಿಕ ಮಸೀದಿಗಳ ಮೇಲೂ ಕಲ್ಲು ತೂರಾಟ ನಡೆದಿದೆ. ಈ ಸಮಯದಲ್ಲಿ, ಪ್ರತಿಭಟನಾಕಾರರು ಪಿಒಕೆಯ ಸಂಹಾನಿ, ಸೆಹನ್ಸಾ, ಮೀರ್‌ಪುರ್, ರಾವಲ್‌ಕೋಟ್, ಖುಯಿರಟ್ಟಾ, ತಟ್ಟಪಾನಿ, ಹಟ್ಟಿಯಾನ್ ಬಾಲಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪಾಕ್ ಆಡಳಿತದ ಕಾಶ್ಮೀರ ಸರ್ಕಾರವು ಇಡೀ ಪಿಒಕೆಯಲ್ಲಿ ಸೆಕ್ಷನ್ 144 ಅನ್ನು ವಿಧಿಸಿತ್ತು. ಇದರೊಂದಿಗೆ ಮೇ 10 ಮತ್ತು 11 ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಆದಾಗ್ಯೂ, ಏರುತ್ತಿರುವ ವಿದ್ಯುತ್ ಮತ್ತು ಹಿಟ್ಟಿನ ಬೆಲೆಗಳ ವಿರುದ್ಧ ಪಿಒಕೆಯ ಎಲ್ಲಾ ಜಿಲ್ಲೆಗಳಲ್ಲಿ ಸಾವಿರಾರು ಜನರು ಬೀದಿಗಿಳಿದ್ದಾರೆ.

ಪ್ರತಿಭಟನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇದೇ ಮೊದಲ ಭಾರಿಗೆ ಭಾರತದ ದ್ವಜ ಹಾರಾಡಿದೆ. ಪಾಕಿಸ್ತಾನ ಸೇನೆ ಹಾಗೂ ಪಾಕಿಸ್ತಾನ ಪೊಲೀಸ್ ವಿರುದ್ಧ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಸ್ಥಳೀಯರು ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಇದೀಗ ಈ ವಿಡಿಯೋ ಹಾಗೂ ಫೋಟೋಗಳು ಭಾರಿ ವೈರಲ್ ಆಗಿದ್ದು, ಪಾಕಿಸ್ತಾನದ ಆತಂಕ ಹೆಚ್ಚಾಗಿದೆ.

ಓರ್ವ ಪೊಲೀಸ್ ಸಾವು: ಮೀರ್‌ಪುರದ ಇಸ್ಲಾಂಘರ್‌ ಎಂಬಲ್ಲಿ ಪ್ರತಿಭಟನಾಕಾರರು ಮುಜಫ್ಫರಾಬಾದ್‌ ಚಲೋ ನಡೆಸುತ್ತಿದ್ದ ವೇಳೆ ಅದನ್ನು ತಡೆಯಲು ಭದ್ರತಾ ಸಿಬ್ಬಂದಿ ಯತ್ನಿಸಿದ್ದಾರೆ. ಈ ವಳೆ ಎದೆಗೆ ತಾಗಿದ ಗುಂಡೇಟಿಗೆ ಸಬ್ ಇನ್ಸ್‌ಪೆಕ್ಟರ್ ಅದ್ನಾನ್ ಖುರೇಷಿ ಬಲಿಯಾಗಿದ್ದಾರೆ.

ಡಿಯಾಲ್‌ ಎಂಬಲ್ಲಿ ಶಾಂತಿಯುತ ಪ್ರತಿಭಟನಾಕಾರರ ಗುಂಪಿಗೆ ಅಶ್ರುವಾಯು ಶೆಲ್‌ಗಳು ಸಿಡಿಸಲಾಗಿದೆ. ಜಮ್ಮು-ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ ಕೋಟ್ಲಿ, ಪೂಂಛ್‌, ಮುಜಫ್ಫರಾಬಾದ್‌ ಸೇರಿ ಅನೇಕ ಕಡೆ ಪ್ರತಿಭಟನೆ ನಡೆಸಿದ್ದು ಭಾನುವಾರ ಕೂಡ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಅನೇಕ ಕಡೆ ಬಾಟಲಿ ಹಾಗೂ ಕಲ್ಲು ತೂರಾಟ ನಡೆದಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ, ತುತ್ತು ಅನ್ನಕ್ಕೂ ಪರದಾಟ; ಭಾರತಕ್ಕೆ ಸೇರಿಸುವಂತೆ ಆಗ್ರಹ: ಪಿಒಕೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ಪಿಒಕೆಯಲ್ಲಿ ಪ್ರತಿಭಟನೆ ವೇಳೆ ಘರ್ಷಣೆ: ಪೊಲೀಸ್ ಅಧಿಕಾರಿ ಸಾವು, ನೂರಾರು ಮಂದಿಗೆ ಗಾಯ

ಇಂಟರ್ನೆಟ್‌ ಬಂದ್, ಅರೆಸೇನೆ ನಿಯೋಜನೆ: ಬೃಹತ್ ಪ್ರತಿಭಟನೆಗಳನ್ನು ನಿಲ್ಲಿಸಲು ಪ್ರಾದೇಶಿಕ ಸರ್ಕಾರವು ಅರೆಸೇನಾ ಪಡೆ ಮತ್ತು ಪೊಲೀಸರ ಭಾರೀ ತುಕಡಿಗಳನ್ನು ನಿಯೋಜಿಸಿದೆ.

ಇದೇ ವೇಳೆ ಭಿಂಬರ್ ಮತ್ತು ಬಾಗ್ ಪಟ್ಟಣಗಳು ​​ಸೇರಿದಂತೆ ಪಿಒಕೆಯ ವಿವಿಧ ಭಾಗಗಳಲ್ಲಿ ಮೊಬೈಲ್ ಫೋನ್ ಮತ್ತು ಇಂಟರ್ನೆಟ್ ಸೇವೆಗಳನ್ನು ಭಾನುವಾರ ಸ್ಥಗಿತಗೊಳಿಸಲಾಗಿದೆ. ಮೀರ್‌ಪುರದಲ್ಲಿ, ಎಲ್ಲಾ ಮೊಬೈಲ್ ನೆಟ್‌ವರ್ಕ್‌ಗಳು ಮತ್ತು ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಏತನ್ಮಧ್ಯೆ ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಸೋಮವಾರ ಅಧ್ಯಕ್ಷರ ಭವನದಲ್ಲಿ ಪ್ರದೇಶದ ಪರಿಸ್ಥಿತಿ ಬಗ್ಗೆ ಚರ್ಚಿಸಲು ಸಂಬಂಧಿಸಿದಂತೆ ತುರ್ತು ಸಭೆಯನ್ನು ಕರೆದಿದ್ದು, ಸಮಸ್ಯೆಪರಿಹರಿಸಲು ಪ್ರಸ್ತಾವನೆಗಳನ್ನು ತರಲು ಮಧ್ಯಸ್ಥಗಾರರಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಮುಜಫರಾಬಾದ್ ಮತ್ತು ಮೀರ್ಪುರ್ ನಲ್ಲಿ ದಾಳಿ ನಡೆಸಿದ ಸುಮಾರು 70 ಜೆಎಎಸಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com