
ಮಿಸ್ಸಿಸೌಗಾ: ಇತ್ತೀಚಿನ ಹಿಂದೂ ದೇವಾಲಯಗಳ ಮೇಲಿನ ದಾಳಿಯ ನಂತರ ಖಲಿಸ್ತಾನಿ ಬೆದರಿಕೆ ಮತ್ತು ಹಿಂದೂ ವಿರೋಧಿ ದ್ವೇಷವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳ ಮೇಲೆ ಖಲಿಸ್ತಾನಿ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ.
ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಆವರಣದಲ್ಲಿ ಉತ್ತರ ಅಮೆರಿಕಾದ ಹಿಂದೂಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.
ಈ ವಿಡಿಯೋವನ್ನು ಹಂಚಿಕೊಂಡಿರುವ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ, ಇಂದು ಕೆನಡಿಯನ್ ಖಲಿಸ್ತಾನಿಗಳು ತಮ್ಮ ಎಲ್ಲೆ ಮೀರಿದ್ದಾರೆ. ಬ್ರಾಂಪ್ಟನ್‌ನಲ್ಲಿನ ಹಿಂದೂ ಸಭಾ ದೇವಸ್ಥಾನದ ಆವರಣದ ಒಳಗೆ ಹಿಂದೂ ಕೆನಡಿಯನ್ ಭಕ್ತರ ಮೇಲಿನ ಖಲಿಸ್ತಾನಿಗಳ ದಾಳಿಯು ಕೆನಡಾದಲ್ಲಿ ಖಲಿಸ್ತಾನಿ ಹಿಂಸಾ ಉಗ್ರವಾದವು ಎಷ್ಟು ಆಳವಾಗಿದೆ ಹಾಗೂ ಮಿತಿಮೀರಿದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ಮತ್ತೊಂದೆಡೆ ಪ್ರತಿಭಟನೆ ನಡೆಸಿದ ಮೂವರು ಖಲಿಸ್ತಾನಿ ವಿರೋಧಿಗಳನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ಕ್ರಿಮಿನಲ್ ಆರೋಪದಡಿ ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೀಲ್ ಪ್ರಾದೇಶಿಕ ಪೊಲೀಸರು ಸೋಮವಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಿಸಿಸೌಗಾ ನಗರದ ಎರಡು ಬೇರೆ ಬೇರೆ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಇದರ ಪರಿಣಾಮ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಮತ್ತು ಅವರ ವಿರುದ್ಧ ಕ್ರಿಮಿನಲ್ ಆರೋಪಗಳಿದ್ದು,ತನಿಖಾ ತಂಡಗಳು ತನಿಖೆ ನಡೆಸುತ್ತಿವೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Advertisement