ಕೇಂದ್ರ ಗಾಜಾದಲ್ಲಿ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 21 ಮಂದಿ ಸಾವು
ದೇರ್ ಅಲ್-ಬಾಲಾ: ಮಧ್ಯ ಗಾಜಾ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 21 ಜನರು ಮೃತಪಟ್ಟಿದ್ದಾರೆ ಎಂದು ಪ್ಯಾಲೇಸ್ತೀನ್ ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ.
ದೇರ್ ಅಲ್-ಬಲಾಹ್ ಪಟ್ಟಣದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಬಳಿ ಸ್ಥಳಾಂತರಗೊಂಡ ಜನರಿಗೆ ಆಶ್ರಯ ನೀಡುತ್ತಿರುವ ಮಸೀದಿ ಮೇಲೆ ದಾಳಿ ನಡೆಸಲಾಗಿದೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.
ಮಧ್ಯ ಗಾಜಾದ ದೇರ್ ಅಲ್-ಬಲಾಹ್‌ನಲ್ಲಿರುವ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಗೇಟ್‌ನ ಮುಂದೆ ಸ್ಥಳಾಂತರಗೊಂಡ ಜನರಿಗೆ ಆಶ್ರಯ ನೀಡುವ ಮಸೀದಿಯ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು, ಅದರ ಪರಿಣಾಮವಾಗಿ ಸಾವಿನ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಸಂಖ್ಯೆಯ ಗಾಯಾಳುಗಳು ಕೂಡ ಸೇರಿದ್ದಾರೆ ಎಂದು ಏಜೆನ್ಸಿಯ ವಕ್ತಾರ ಮಹ್ಮದ್ ಬಾಸ್ಸಲ್ ತಿಳಿಸಿದ್ದಾರೆ.
ಮಸೀದಿಯಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ ಭಯೋತ್ಪಾದಕರ ಮೇಲೆ ನಿಖರವಾದ ದಾಳಿ ನಡೆಸಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ.
ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಇತ್ತೀಚಿನ ದಾಳಿಗಳು ಗಾಜಾದಲ್ಲಿ ಹೆಚ್ಚುತ್ತಿರುವ ಪ್ಯಾಲೆಸ್ತೀನಿಯರ ಸಾವಿನ ಸಂಖ್ಯೆ 42 ಸಾವಿರಕ್ಕೆ ಸಮೀಪದಲ್ಲಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ.
ನಿನ್ನೆ ಮುಂಜಾನೆ ಇಸ್ರೇಲ್ ಲೆಬನಾನ್ ಮೇಲೆ ದಾಳಿ ಮಾಡಿದ ನಂತರ ಹಿಜ್ಬುಲ್ಲಾ ಮತ್ತು ಹಮಾಸ್ ಹೋರಾಟಗಾರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿತ್ತು.