ಮುಂಬೈ: ಖ್ಯಾತ ಬಾಲಿವುಡ್ ನಿರ್ಮಾಪಕ ಹಾಗೂ ಎನ್ ಸಿಪಿ ಶಾಸಕ ಬಾಬಾ ಸಿದ್ದಿಕಿ ಹತ್ಯೆ ವಿಚಾರ ಭಾರತದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಈ ಹತ್ಯೆಗೆ ಜವಾಬ್ದಾರಿ ಹೊತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಜೊತೆ ಭಾರತೀಯ ಏಜೆಂಟ್ ಗಳು ಸಂಬಂಧ ಹೊಂದಿದ್ದಾರೆ ಎಂದು ಕೆನಡಾ ಪೊಲೀಸರು ಗಂಭೀರ ಆರೋಪ ಮಾಡಿದ್ದಾರೆ.
ಇತ್ತೀಚೆಗಷ್ಟೇ ಸ್ವತಃ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಆ್ಯಂಟಿ ಖಲಿಸ್ತಾನಿ ಬಂಡುಕೋರರೊಂದಿಗೆ ಭಾರತೀಯ ಗೂಢಚಾರ ಅಧಿಕಾರಿಗಳು ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಕೆನಡಾ ಪೊಲೀಸರು ಭಾರತದ ವಿರುದ್ಧ ಇಂತಹುದೇ ಮತ್ತೊಂದು ಆರೋಪ ಮಾಡಿದ್ದಾರೆ.
ರಾಯಲ್ ಕೆನಡಿಯನ್ ಮೌಂಟೆಡ್ ಪೋಲೀಸ್ (ಕೆನಡಾ ಪೊಲೀಸ್) "ಭಾರತ ಸರ್ಕಾರದ ಏಜೆಂಟರು" ಅಪರಾಧಿಗಳನ್ನು ತಮ್ಮ ಕಾರ್ಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ನೇರವಾಗಿ ಬಿಷ್ಣೋಯ್ ಗ್ಯಾಂಗ್ ಅನ್ನು ಉಲ್ಲೇಖಿಸಿ ಆರೋಪಿಸಿದ್ದಾರೆ. "ದಕ್ಷಿಣ ಏಷ್ಯಾದ ಸಮುದಾಯವನ್ನು... ನಿರ್ದಿಷ್ಟವಾಗಿ ಖಲಿಸ್ತಾನಿ ಪರ ಅಂಶಗಳನ್ನು ಗುರಿಯಾಗಿಸಿಕೊಂಡು ಯೋಜನೆ ರೂಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕೆನಡಾ ಪೊಲೀಸ್ ಕಮಿಷನರ್ Mike Duhene ಹಾಗೂ ಸಹಾಯಕ ಪೊಲೀಸ್ ಆಯುಕ್ತ Brigitte Gauvin ಈ ಬಗ್ಗೆ ಮಾದ್ಯಮಗಳಲ್ಲಿ ಮಾತನಾಡಿದ್ದು, 'ಕೆನಡಾ ಪ್ರಜೆ ಹಾಗೂ ಖಲಿಸ್ತಾನಿ ಹೋರಾಟಗಾರ ಹರ್ದೀಪ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಏಜೆಂಟ್ ಗಳ ಕೈವಾಡವಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಕೈ ವಾಡ ಕೂಡ ತಳ್ಳಿ ಹಾಕುವಂತಿಲ್ಲ ಎಂದು ಹೇಳಿದ್ದಾರೆ.
'ಭಾರತ ಮತ್ತು ಅದರ ಏಜೆಂಟ್ ಗಳು ದಕ್ಷಿಣ ಏಷ್ಯಾದ ಸಮುದಾಯ ಮತ್ತು ಕೆನಡಾದಲ್ಲಿರುವ ಖಲಿಸ್ತಾನ ಸಮುದಾಯವನ್ನು ಗುರಿಯಾಗಿಸಿಕೊಂಡು ಸಂಘಟಿತ ಅಪರಾಧ ಕೃತ್ಯಗಳಲ್ಲಿ ತೊಡಗಿದೆ. ಇದಕ್ಕಾಗಿ ಬಿಷ್ಣೋಯ್ ಗ್ಯಾಂಗ್ ನಂತಹ ಗ್ಯಾಂಗ್ ನೊಂದಿಗೆ ಕೈ ಜೋಡಿಸಿದೆ. ಬಿಷ್ಣೋಯ್ ಗ್ಯಾಂಗ್ ಜೊತೆ ಭಾರತೀಯ ಅಧಿಕಾರಿಗಳು ನೇರ ಸಂಪರ್ಕದಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ.
Salman Khan ಭದ್ರತೆ ಹೆಚ್ಚಳ!
ಅತ್ತ ನಿರ್ಮಾಪಕ ಬಾಬಾ ಸಿದ್ದಿಕಿ ಕೊಲೆ ಬೆನ್ನಲ್ಲೇ ಇತ್ತ ಮುಂಬೈ ಪೊಲೀಸರು ಬಾಲಿವುಡ್ ನಟ ಸಲ್ಮಾನ್ ಖಾನ್ ಭದ್ರತೆ ಹೆಚ್ಚಿಸಿದ್ದಾರೆ. ಅಲ್ಲದೆ ಸಲ್ಮಾನ್ ಖಾನ್ ಗೆ ಅನಗತ್ಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಇನ್ನೂ ಕೆಲವು ದಿನಗಳ ಕಾಲ ಯಾವುದೇ ಸಂದರ್ಶಕರನ್ನು ಕಳುಹಿಸದಂತೆ ಸಲ್ಮಾನ್ ಖಾನ್ ತನ್ನ ಮ್ಯಾನೇಜರ್ ಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
Advertisement