BRICS ಶೃಂಗಸಭೆ ನಡುವೆ ಅ.23 ರಂದು ಪ್ರಧಾನಿ ಮೋದಿ- ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ದ್ವಿಪಕ್ಷೀಯ ಸಭೆ

"ನಾಳೆ (ಅ.23 ರಂದು) ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಡುವೆ ದ್ವಿಪಕ್ಷೀಯ ಸಭೆ ನಡೆಯಲಿದೆ ಎಂದು ನಾನು ಖಚಿತಪಡಿಸುತ್ತೇನೆ" ಎಂದು ಮಿಸ್ರಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
China President Xi jinping- PM Narendra Modi
ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್- ಪ್ರಧಾನಿ ನರೇಂದ್ರ ಮೋದಿonline desk
Updated on

ಕಜನ್: BRICS ಶೃಂಗಸಭೆಯಲ್ಲಿ ಭಾಗಿಯಾಗಲು ರಷ್ಯಾಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅ.23 ರಂದು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಜೊತೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.

ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಈ ಮಾಹಿತಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.

"ನಾಳೆ (ಅ.23 ರಂದು) ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಡುವೆ ದ್ವಿಪಕ್ಷೀಯ ಸಭೆ ನಡೆಯಲಿದೆ ಎಂದು ನಾನು ಖಚಿತಪಡಿಸುತ್ತೇನೆ" ಎಂದು ಮಿಸ್ರಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಪೂರ್ವ ಲಡಾಖ್‌ನಲ್ಲಿ ಉಭಯ ದೇಶಗಳು ತಮ್ಮ ಬಿಕ್ಕಟ್ಟನ್ನು ಪರಿಹರಿಸುವ ಕುರಿತು ಒಪ್ಪಂದಕ್ಕೆ ಬಂದಿವೆ ಎಂದು ಭಾರತ ಸೋಮವಾರ (ಅ.21 ರಂದು) ಪ್ರಕಟಿಸಿದ ನಂತರ ಸಭೆ ನಿಗದಿಯಾಗಿದೆ. "ಕಳೆದ ಹಲವಾರು ವಾರಗಳಲ್ಲಿ, ಭಾರತ ಮತ್ತು ಚೀನಾದ ರಾಜತಾಂತ್ರಿಕ ಮತ್ತು ಮಿಲಿಟರಿ ಸಮಾಲೋಚಕರು ವಿವಿಧ ವೇದಿಕೆಗಳಲ್ಲಿ ಪರಸ್ಪರ ನಿಕಟ ಸಂಪರ್ಕದಲ್ಲಿದ್ದಾರೆ. ಈ ಚರ್ಚೆಗಳ ಪರಿಣಾಮವಾಗಿ, LAC ಉದ್ದಕ್ಕೂ ಗಸ್ತು ವ್ಯವಸ್ಥೆಗಾಗಿ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ ಮತ್ತು ಇದು ಸೇನಾ ಹಿಂತೆಗೆತಕ್ಕೆ ಕಾರಣವಾಗುತ್ತದೆ ಮತ್ತು 2020 ರಲ್ಲಿ ಈ ಪ್ರದೇಶಗಳಲ್ಲಿ ಉದ್ಭವಿಸಿದ ಸಮಸ್ಯೆಗಳ ಪರಿಹಾರವಾಗಲಿದೆ. ನಾವು ಈ ಬಗ್ಗೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ" ಎಂದು ಸೋಮವಾರ ಪ್ರಧಾನಿ ಮೋದಿ ಕಜಾನ್‌ಗೆ ತೆರಳುವ ಮುನ್ನ ಮಿಸ್ರಿ ಹೇಳಿದ್ದರು.

China President Xi jinping- PM Narendra Modi
ರಷ್ಯಾ-ಯುಕ್ರೇನ್ ಸಂಘರ್ಷ ಅಂತ್ಯಕ್ಕೆ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ಧ: BRICS ಶೃಂಗಸಭೆಯಲ್ಲಿ ಮೋದಿ

ಭಾರತದ ಹೇಳಿಕೆಯನ್ನು ಬೆಂಬಲಿಸಿದ್ದ ಚೀನಾ, ಒಪ್ಪಂದಕ್ಕೆ ಬರಲಾಗಿರುವುದನ್ನು ದೃಢಪಡಿತ್ತು. "ಇತ್ತೀಚಿನ ಅವಧಿಯಲ್ಲಿ, ಭಾರತ ಮತ್ತು ಚೀನಾ ಗಡಿಗೆ ಸಂಬಂಧಿಸಿದ ವಿಷಯಗಳ ಕುರಿತು ರಾಜತಾಂತ್ರಿಕ ಮತ್ತು ಮಿಲಿಟರಿ ವೇದಿಕೆಗಳ ಮೂಲಕ ನಿಕಟ ಸಂವಹನ ನಡೆಸುತ್ತಿದೆ" ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಬೀಜಿಂಗ್‌ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದರು. ಈಗ ಉಭಯ ಪಕ್ಷಗಳು 'ಸಂಬಂಧಿತ ವಿಷಯಗಳ' ಕುರಿತು ನಿರ್ಣಯಕ್ಕೆ ಬಂದಿವೆ. ಇದನ್ನು ಕಾರ್ಯಗತಗೊಳಿಸಲು ಚೀನಾ ಭಾರತದೊಂದಿಗೆ ಕೆಲಸ ಮಾಡುತ್ತದೆ ಎಂದು ಹೇಳಿದ್ದ ಅವರು ವಿವರಗಳನ್ನು ನೀಡಲು ನಿರಾಕರಿಸಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com