ಇರಾನ್ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ ದಾಳಿ ಆರಂಭ

ಇರಾನ್ ಆಡಳಿತ ಮತ್ತು ಅದರ ಪ್ರಾಕ್ಸಿಗಳು ಅಕ್ಟೋಬರ್ 7 ರಿಂದ ಇರಾನ್ ನಿಂದ ನೇರ ದಾಳಿ ಸೇರಿದಂತೆ ಏಳು ಬಗೆಯ ದಾಳಿಗಳನ್ನು ಇಸ್ರೇಲ್ ಮೇಲೆ ಪಟ್ಟುಬಿಡದೆ ನಡೆಸುತ್ತಿವೆ ಎಂದು ಇಸ್ರೇಲಿ ಮಿಲಿಟರಿ ಹೇಳಿಕೆ ತಿಳಿಸಿದೆ.
Palestinians check a building destroyed by Israeli airstrikes in the city of Khan Younis, southern Gaza Strip
ದಕ್ಷಿಣ ಗಾಜಾ ಪಟ್ಟಿಯ ಖಾನ್ ಯೂನಿಸ್ ನಗರದಲ್ಲಿ ಇಸ್ರೇಲಿ ವೈಮಾನಿಕ ದಾಳಿಯಿಂದ ಧ್ವಂಸಗೊಂಡ ಕಟ್ಟಡವನ್ನು ಪ್ಯಾಲೆಸ್ತೀನಿಯರು ಪರಿಶೀಲಿಸುತ್ತಿದ್ದಾರೆ.
Updated on

ದುಬೈ: ಕಳೆದ ಅಕ್ಟೋಬರ್ 1 ರಂದು ನಡೆದಿದ್ದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇರಾನ್‌ ಮಿಲಿಟರಿ ಮೇಲೆ ಗುರಿಯಾಗಿಸಿ ಇಸ್ರೇಲ್ ಶನಿವಾರ ಮುಂಜಾನೆ ವೈಮಾನಿಕ ದಾಳಿ ಆರಂಭಿಸಿದೆ.

ದಾಳಿಯಿಂದಾದ ಸಾವು ನೋವಿನ ಬಗ್ಗೆ ತಕ್ಷಣದ ಮಾಹಿತಿ ಸಿಕ್ಕಿಲ್ಲ. ಇರಾನ್‌ನಲ್ಲಿನ ಮಿಲಿಟರಿ ಗುರಿಗಳ ಮೇಲೆ ನಡೆಸಲಾದ ನಿಖರವಾದ ದಾಳಿ ಎಂದು ಇಸ್ರೇಲ್ ಮಿಲಿಟರಿ ಹೇಳಿಕೊಂಡಿದೆ.

ಇರಾನ್ ಆಡಳಿತ ಮತ್ತು ಅದರ ಪ್ರಾಕ್ಸಿಗಳು ಅಕ್ಟೋಬರ್ 7 ರಿಂದ ಇರಾನ್ ನಿಂದ ನೇರ ದಾಳಿ ಸೇರಿದಂತೆ ಏಳು ಬಗೆಯ ದಾಳಿಗಳನ್ನು ಇಸ್ರೇಲ್ ಮೇಲೆ ಪಟ್ಟುಬಿಡದೆ ನಡೆಸುತ್ತಿವೆ ಎಂದು ಇಸ್ರೇಲಿ ಮಿಲಿಟರಿ ಹೇಳಿಕೆ ತಿಳಿಸಿದೆ.

ಇರಾನಿನ ರಾಜಧಾನಿ ಟೆಹ್ರಾನ್‌ನಲ್ಲಿ, ಸ್ಫೋಟಗಳ ಸದ್ದು ಕೇಳಿಸುತ್ತಿತ್ತು, ಕೆಲವು ಶಬ್ದಗಳು ನಗರದ ಸುತ್ತಲಿನ ವಾಯು ರಕ್ಷಣಾ ವ್ಯವಸ್ಥೆಗಳಿಂದ ಬಂದವು ಎಂದು ಅಲ್ಲಿನ ಸರ್ಕಾರಿ ಮಾಧ್ಯಮಗಳು ಹೇಳಿವೆ.

ಕನಿಷ್ಠ ಏಳು ಸ್ಫೋಟಗಳು ಕೇಳಿಬಂದಿವೆ, ಇದು ಸುತ್ತಮುತ್ತಲಿನ ಪ್ರದೇಶವನ್ನು ದಂಗುಬಡಿಸಿತು ಎಂದು ಟೆಹ್ರಾನ್ ನಿವಾಸಿಯೊಬ್ಬರು ಅಸೋಸಿಯೇಟೆಡ್ ಪ್ರೆಸ್‌ಗೆ ಹೇಳಿದ್ದಾರೆ. ಕಳೆದ ವರ್ಷ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ದಾಳಿಯೊಂದಿಗೆ ಪ್ರಾರಂಭವಾದ ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಇರಾನ್ ಇತ್ತೀಚಿನ ತಿಂಗಳುಗಳಲ್ಲಿ ಇಸ್ರೇಲ್ ಮೇಲೆ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗಳನ್ನು ಪ್ರಾರಂಭಿಸಿದೆ.

Palestinians check a building destroyed by Israeli airstrikes in the city of Khan Younis, southern Gaza Strip
ಬೈರುತ್‌ನ ಕಟ್ಟಡದ ಮೇಲೆ ಇಸ್ರೇಲಿ ಬಾಂಬ್ ದಾಳಿ; ನಿಖರ ಕ್ಷಣಗಳ ಚಿತ್ರಗಳು

ಇಸ್ರೇಲ್ ಸಹ ಲೆಬನಾನ್ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದೆ. ಮಧ್ಯಪ್ರಾಚ್ಯ ಪ್ರವಾಸದ ನಂತರ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಯುಎಸ್‌ಗೆ ಹಿಂತಿರುಗುತ್ತಿದ್ದಂತೆಯೇ ದಾಳಿ ಸಂಭವಿಸಿದೆ, ಅಲ್ಲಿ ಅವರು ಮತ್ತು ಇತರ ಯುಎಸ್ ಅಧಿಕಾರಿಗಳು ಇಸ್ರೇಲ್‌ಗೆ ಪ್ರತಿಕ್ರಿಯೆ ನೀಡುವಂತೆ ಎಚ್ಚರಿಕೆ ನೀಡಿದ್ದರು,

ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಸೀನ್ ಸಾವೆಟ್ ಹೇಳಿಕೆಯಲ್ಲಿ ಇರಾನ್‌ನಲ್ಲಿನ ಮಿಲಿಟರಿ ಗುರಿಗಳ ವಿರುದ್ಧ ಇಸ್ರೇಲ್ ಉದ್ದೇಶಿತ ದಾಳಿಗಳನ್ನು ನಡೆಸುತ್ತಿದೆ ಅವರ ಕಾರ್ಯಾಚರಣೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ವರದಿಗಾರರನ್ನು ಇಸ್ರೇಲಿ ಸರ್ಕಾರಕ್ಕೆ ಉಲ್ಲೇಖಿಸಲಾಗಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 1 ರಂದು ಇರಾನ್‌ನ ಬೃಹತ್ ಕ್ಷಿಪಣಿ ದಾಳಿಯ ನಂತರ ಇರಾನ್ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com