US State Department Spokesperson Matthew Miller
ಅಮೆರಿಕಾದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್‌

ನಿಜ್ಜರ್ ಹತ್ಯೆಯಲ್ಲಿ ಅಮಿತ್ ಶಾ ಕೈವಾಡ: ಕೆನಡಾ ಆರೋಪ ಕಳವಳಕಾರಿ ಎಂದ ಅಮೆರಿಕಾ

ಕೆನಡಾದಲ್ಲಿರುವ ಸಿಖ್‌ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ಕೈಗೊಳ್ಳಲು, ಬೆದರಿಕೆ ಹಾಕಲು ಮತ್ತು ಗುಪ್ತಚರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಅಮಿತ್‌ ಶಾ ಆದೇಶಿಸಿದ್ದರು.
Published on

ವಾಷಿಂಗ್ಟನ್‌: ಸಿಖ್‌ ಪ್ರತ್ಯೇಕತಾವಾದಿ ನಿಜ್ಜರ್ ವಿರುದ್ಧ ಸಂಚು ರೂಪಿಸುವಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಅವರ ಕೈವಾಡವಿದೆ ಎನ್ನುವ ಕೆನಡಾ ಸರ್ಕಾರದ ಆರೋಪ ‘ಕಳವಳಕಾರಿ’ಯಾಗಿದೆ ಎಂದು ಅಮೆರಿಕಾ ಪ್ರತಿಕ್ರಿಯಿಸಿದೆ.

ಕೆನಡಾ ಸರ್ಕಾರ ಮಾಡಿರುವ ಆರೋಪಗಳು ಕಳವಳಕಾರಿಯಾಗಿವೆ. ಈ ಆರೋಪಗಳ ಬಗ್ಗೆ ಕೆನಡಾ ಸರ್ಕಾರದ ಜೊತೆ ಮಾತುಕತೆ ನಡೆಸುತ್ತೇವೆ’ ಎಂದು ಅಮೆರಿಕಾದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್‌ ಅವರು ಹೇಳಿದ್ದಾರೆ.

ಕೆನಡಾದಲ್ಲಿರುವ ಸಿಖ್‌ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ಕೈಗೊಳ್ಳಲು, ಬೆದರಿಕೆ ಹಾಕಲು ಮತ್ತು ಗುಪ್ತಚರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಅಮಿತ್‌ ಶಾ ಆದೇಶಿಸಿದ್ದರು ಎಂದು ಕೆನಡಾದ ವಿದೇಶಾಂಗ ವ್ಯವಹಾರಗಳ ಉಪ ಸಚಿವ ಡೇವಿಡ್‌ ಮಾರಿಸನ್‌ ಅವರು, ಸಂಸತ್‌ ಸದಸ್ಯರನ್ನು ಒಳಗೊಂಡ ರಾಷ್ಟ್ರೀಯ ಭದ್ರತಾ ಸಮಿತಿಗೆ ಈ ವಿಷಯ ತಿಳಿಸಿದ್ದರು.

ಈ ವಿಷಯದ ಕುರಿತ ಆರೋಪಗಳ ವರದಿಯನ್ನು ಮೊದಲ ಬಾರಿಗೆ ವಾಷಿಂಗ್ಟನ್‌ ಪೋಸ್ಟ್‌ ಪ್ರಕಟಿಸಿತ್ತು. ಆ ಪತ್ರಿಕೆಯ ವರದಿಗಾರನಿಗೆ ಈ ವಿಷಯವನ್ನು ನಾನೇ ಖಚಿತಪಡಿಸಿದ್ದೆ’ ಎಂದು ಮಾರಿಸನ್‌ ಹೇಳಿದ್ದಾರೆ.

ಪತ್ರಕರ್ತ ನನಗೆ ಕರೆ ಮಾಡಿ, ಅದು ಆ ವ್ಯಕ್ತಿಯೇ (ಅಮಿತ್‌ ಶಾ) ಎಂದು ಕೇಳಿದರು. ನಾನು, ಹೌದು ಎಂದು ಖಚಿತಪಡಿಸಿದ್ದೆ’ ಎಂದು ಮಾರಿಸನ್‌ ಸಮಿತಿಗೆ ಮಾಹಿತಿ ನೀಡಿದ್ದಾರೆ. ಆದರೆ, ಅಮಿತ್‌ ಶಾ ಅವರ ಒಳಗೊಳ್ಳುವಿಕೆ ಕುರಿತು ಕೆನಡಾಗೆ ಹೇಗೆ ತಿಳಿದಿತ್ತು ಎಂಬುದನ್ನು ಅವರು ತಿಳಿಸಿಲ್ಲ.

US State Department Spokesperson Matthew Miller
ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಹಿಂಸಾಚಾರಕ್ಕೆ ಆದೇಶ ನೀಡಿದ್ದು ಭಾರತದ ಗೃಹ ಸಚಿವ ಅಮಿತ್ ಶಾ: ಕೆನಡಾ ಅಧಿಕಾರಿ

ಇನ್ನು ಡೇವಿಡ್ ಮಾರಿಸನ್ ಆರೋಪಕ್ಕೆ ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇನ್ನೂ ಪ್ರತಿಕ್ರಿಯಿಸಿಲ್ಲ.

ಭಾರತದ ಏಜಂಟರು ಕೆನಡಾದಲ್ಲಿ ಹಿಂಸೆಗೆ ಕುಮ್ಮಕ್ಕು ನೀಡುತ್ತಿದ್ಧಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಅಕ್ಟೋಬರ್ 14ರಂದು ಆರೋಪಿಸಿದ್ದರು. ಅದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಟ್ರುಡೊ, ಭಾರತದ ವಿರುದ್ದ ಸರಣಿ ಆರೋಪಗಳನ್ನು ಮಾಡಿದ್ದರು.

ಭಾರತ ತನ್ನ ರಾಜತಾಂತ್ರಿಕರನ್ನು ಬಳಸಿಕೊಂಡು ಸಂಘಟಿತ ಅಪರಾಧಗಳ ಮೂಲಕ ಕೆನಡಾ ಪ್ರಜೆಗಳ ಮೇಲೆ ದಾಳಿ ಮಾಡುತ್ತಿದೆ. ಹಿಂಸಾಚಾರ ಮತ್ತು ಹತ್ಯೆಗಳ ಮೂಲಕ ಇಲ್ಲಿನ ಜನರಲ್ಲಿ ಅಸುರಕ್ಷತೆಯ ಭಾವನೆ ಮೂಡಿಸಿದೆ ಎಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com