ಢಾಕಾ: ಶೇಖ್ ಹಸೀನಾ ನೇತೃತ್ವದ ಸರ್ಕಾರ ಆಗಸ್ಟ್ 5 ರಂದು ಪತನವಾದ ನಂತರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಕನಿಷ್ಠ 49 ಶಿಕ್ಷಕರಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಹಿಂಸಾಚಾರ ಪೀಡಿತ ರಾಷ್ಟ್ರದ ಅಲ್ಪಸಂಖ್ಯಾತ ಸಂಘಟನೆಯೊಂದು ತಿಳಿಸಿದೆ.
ಬಾಂಗ್ಲಾದೇಶ ಹಿಂದೂ ಬೌದ್ಧ ಕ್ರಿಶ್ಚಿಯನ್ ಓಕ್ಯ ಪರಿಷತ್ತಿನ ವಿದ್ಯಾರ್ಥಿ ವಿಭಾಗವಾದ ಬಾಂಗ್ಲಾದೇಶ ಛತ್ರ ಓಕ್ಯ ಪರಿಷತ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದೆ ಎಂದು ದಿ ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.
76 ವರ್ಷದ ಪ್ರಧಾನಿ ಹಸೀನಾ ಅವರನ್ನು ಪದಚ್ಯುತಗೊಳಿಸಿ ಪಲಾಯನಗೊಳಿಸಿದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳ ಹಿಂಸಾಚಾರದಲ್ಲಿ ದೇಶಾದ್ಯಂತ ಅಲ್ಪಸಂಖ್ಯಾತ ಶಿಕ್ಷಕರು ದೈಹಿಕ ಹಲ್ಲೆ ಎದುರಿಸಿದ್ದಾರೆ.ಅವರಲ್ಲಿ 49 ಮಂದಿಯಿಂದ ಬಲವಂತದಿಂದ ರಾಜೀನಾಮೆ ಪಡೆಯಲಾಗಿದೆ. ಆದಾಗ್ಯೂ, 19 ಮಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಈ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ, ಲೂಟಿ, ಮಹಿಳೆಯರ ಮೇಲೆ ಹಲ್ಲೆ, ದೇವಸ್ಥಾನಗಳ ಧ್ವಂಸ, ಮನೆ ಮತ್ತು ಅಂಗಡಿಗಳ ಮೇಲೆ ಬೆಂಕಿ, ದಾಳಿ ಮತ್ತು ಹತ್ಯೆಗಳು ನಡೆದಿವೆ ಎಂದು ಸರ್ಕಾರ್ ಹೇಳಿದರು.
ಕಳೆದ ತಿಂಗಳು ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಹಿಂದೂ, ಬೌದ್ಧ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರ ವಿರುದ್ಧ ಹಲವಾರು ಹಿಂಸಾಚಾರದ ಘಟನೆಗಳು ನಡೆದಿವೆ.
Advertisement