ಕಾಬುಲ್: ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಕಾಬೂಲ್ ನಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಟ 6 ಮಂದಿ ಸಾವನ್ನಪ್ಪಿದ್ದಾರೆ.
ಕಾಬೂಲ್ ನ 6ನೇ ಭದ್ರತಾ ವಲಯದಲ್ಲಿ ಇಂದು ಮಧ್ಯಾಹ್ನ ಕ್ವಾಲಾ-ಎ-ಬಖ್ತಿಯಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಈ ದಾಳಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿ, 13 ಮಂದಿ ಗಾಯಗೊಂಡಿದ್ದಾರೆ ಎಂದು ಕಾಬೂಲ್ ಪೊಲೀಸರು ಮತ್ತು ಆಂತರಿಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಇದೇ ವಿಚಾರವಾಗಿ ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, "ಕಾಬೂಲ್‌ನಲ್ಲಿ ವ್ಯಕ್ತಿಯೊಬ್ಬ ನಡೆಸಿದ ಆತ್ಮಹತ್ಯಾ ದಾಳಿ ನಡೆದಿದ್ದು, ದುರದೃಷ್ಟವಶಾತ್, ಸ್ಫೋಟದಲ್ಲಿ ಮಹಿಳೆ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಹೊಣೆ ಹೊತ್ತ ISIS
ಇನ್ನು ದಾಳಿ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತಿದ್ದು, "ತಾಲಿಬಾನ್ ಜೈಲಿನಲ್ಲಿರುವ ಮುಸ್ಲಿಮರಿಗಾಗಿ ತಾನು ಈ ಸೇಡು ತೀರಿಸಿಕೊಂಡಿರುವುದಾಗಿ ಹೇಳಿಕೊಂಡಿದೆ.
Advertisement