Rahul Gandhi ಅಮೆರಿಕ ಪ್ರವಾಸ; ವಿಮಾನನಿಲ್ದಾಣದಲ್ಲಿ ಸ್ವಾಗತ ಕೋರಿದ ಸ್ಯಾಮ್‌ ಪಿತ್ರೋಡಾ

ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಇಂದು (ಭಾನುವಾರ) ಟೆಕ್ಸಾಸ್‌ನ ಡಲ್ಲಾಸ್‌ಗೆ ಆಗಮಿಸಿದ್ದಾರೆ.
Rahul Gandhi arrives in Dallas for US visit
ಅಮೆರಿಕ ಪ್ರವಾಸದಲ್ಲಿ ರಾಹುಲ್ ಗಾಂಧಿ
Updated on

ವಾಷಿಂಗ್ಟನ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕಾ ಪ್ರವಾಸಕ್ಕೆ ತೆರಳಿದ್ದು, ಅವರಿಗೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸ್ವಾಗತ ಕೋರಿದರು.

ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಇಂದು (ಭಾನುವಾರ) ಟೆಕ್ಸಾಸ್‌ನ ಡಲ್ಲಾಸ್‌ಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್‌ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಸೇರಿದಂತೆ ಅನಿವಾಸಿ ಭಾರತೀಯರ ತಂಡದ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದರು.

Rahul Gandhi arrives in Dallas for US visit
'ಭಾರತ್ ಜೋಡೋ ಯಾತ್ರೆಯು ನನಗೆ ಮೌನದ ಸೌಂದರ್ಯವನ್ನು ಕಲಿಸಿತು': ರಾಹುಲ್ ಗಾಂಧಿ

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ‘ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಿಟ್ಟಿನಲ್ಲಿ ಅರ್ಥಪೂರ್ಣ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇನೆ. ನನಗೆ ದೊರೆತ ಆತ್ಮೀಯ ಸ್ವಾಗತದಿಂದ ನಾನು ನಿಜವಾಗಿಯೂ ಸಂತೋಷಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಈ ಭೇಟಿಯ ಸಮಯದಲ್ಲಿ ನಮ್ಮ ಎರಡು ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಅರ್ಥಪೂರ್ಣ ಚರ್ಚೆಗಳು ಮತ್ತು ಒಳನೋಟವುಳ್ಳ ಸಂಭಾಷಣೆಗಳಲ್ಲಿ ತೊಡಗಿಸಿಕೊಳ್ಳಲು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ಅವರು ವಾಷಿಂಗ್ಟನ್‌, ಡಲ್ಲಾಸ್‌ ನಗರಗಳಲ್ಲಿ, ಜಾರ್ಜ್‌ಟೌನ್‌ ಮತ್ತು ಟೆಕ್ಸಾಸ್‌ ವಿಶ್ವವಿದ್ಯಾಲಯಗಳಲ್ಲಿ ನಡೆಯುವ ಸಂವಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 2024ರ ಲೋಕಸಭಾ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಅವರು ಅಮೆರಿಕಗೆ ಭೇಟಿ ನೀಡುತ್ತಿದ್ದಾರೆ. ಲೋಕಸಭಾ ವಿಪಕ್ಷ ನಾಯಕರೂ ಆಗಿರುವ ರಾಹುಲ್ ಗಾಂಧಿ, ಟೆಕ್ಸಾಸ್ ರಾಜ್ಯದ ಡಲ್ಲಾಸ್ ನಗರದಲ್ಲಿ ಸೆಪ್ಟೆಂಬರ್ 8 ರಂದು ಇರಲಿದ್ದಾರೆ. ಬಳಿಕ ಸೆಪ್ಟೆಂಬರ್ 9 ಹಾಗೂ 10 ರಂದು ಅಮೆರಿಕ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ರಾಹುಲ್ ಗಾಂಧಿ ಇರಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com