ಕೆಲವು ಧರ್ಮ, ಭಾಷೆ ಮತ್ತು ಸಮುದಾಯಗಳು ಕೀಳು ಎಂದು RSS ಭಾವಿಸುತ್ತದೆ: ರಾಹುಲ್ ಗಾಂಧಿ ಟೀಕೆ

ಭಾರತ, ರಾಜ್ಯಗಳ ಒಕ್ಕೂಟವಾಗಿದೆ. ಇದರರ್ಥ ಇದು ಭಾಷೆಗಳು, ಸಂಪ್ರದಾಯಗಳು, ಇತಿಹಾಸಗಳು ಇತ್ಯಾದಿಗಳ ಒಕ್ಕೂಟವಾಗಿದೆ ಎಂದರು.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಯುಎಸ್ ಎಯ ವಾಷಿಂಗ್ಟನ್ ಡಿಸಿಯಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದರು.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಯುಎಸ್ ಎಯ ವಾಷಿಂಗ್ಟನ್ ಡಿಸಿಯಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದರು.
Updated on

ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ಕೆಲವು ಧರ್ಮಗಳು, ಭಾಷೆಗಳು ಮತ್ತು ಸಮುದಾಯಗಳನ್ನು ಇತರರಿಗಿಂತ ಕೀಳು ಎಂದು ಪರಿಗಣಿಸುತ್ತಿದೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ಭಾರತದಲ್ಲಿ ಹೋರಾಟವು ಇದರ ಬಗ್ಗೆಯೇ ಹೊರತು ರಾಜಕೀಯದ ಬಗ್ಗೆ ಅಲ್ಲ ಎಂದು ಹೇಳಿದ್ದಾರೆ.

ಅವರು ನಿನ್ನೆ ಸೋಮವಾರ ವಾಷಿಂಗ್ಟನ್ ಡಿಸಿಯ ವರ್ಜೀನಿಯಾ ಉಪನಗರವಾದ ಹೆರ್ಂಡನ್‌ನಲ್ಲಿ ನೂರಾರು ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು.

ಭಾರತದಲ್ಲಿ ಹೋರಾಟ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ. ಅದು ಮೇಲ್ನೋಟಕ್ಕೆ ಕಾಣುತ್ತದೆ ಅಷ್ಟೆ. ಸಭೆಯ ಮುಂದಿನ ಸಾಲಿನಲ್ಲಿ ಕುಳಿತ ಸಿಖ್ ಧರ್ಮೀಯರಲ್ಲಿ ಒಬ್ಬರಿಗೆ ತಮ್ಮ ಹೆಸರು ಹೇಳುವಂತೆ ರಾಹುಲ್ ಗಾಂಧಿ ಹೇಳಿದಾಗ, ಪೇಟ ತೊಟ್ಟ ಅಣ್ಣ ನಿಮ್ಮ ಹೆಸರೇನು ಎಂದು ಕೇಳಿದರು.

ಭಾರತದಲ್ಲಿ ಸಿಖ್ಖರು ಪೇಟವನ್ನು ಧರಿಸಲು ಅಥವಾ ಕದವನ್ನು ಧರಿಸಲು ಅನುಮತಿ ನೀಡಬಹುದೇ ಬೇಡವೇ, ಅಥವಾ ಅವರು ಸಿಖ್ಖರು ಗುರುದ್ವಾರಕ್ಕೆ ಹೋಗಲು ಸಾಧ್ಯವೇ ಎಂಬುದಕ್ಕಾಗಿ ಹೋರಾಟವಾಗಿದೆ. ಇದು ಕೇವಲ ಒಂದು ಧರ್ಮದಲ್ಲಿ ಅಲ್ಲ, ಎಲ್ಲಾ ಧರ್ಮದಲ್ಲಿ ಇಂತಹ ಹೋರಾಟ, ಸಂಘರ್ಷಗಳಿವೆ ಎಂದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಯುಎಸ್ ಎಯ ವಾಷಿಂಗ್ಟನ್ ಡಿಸಿಯಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದರು.
BJP, RSS ಸಿದ್ಧಾಂತ ಮಹಿಳೆಯರನ್ನು ಅಡುಗೆಮನೆಗೆ ಸೀಮಿತಗೊಳಿಸುತ್ತದೆ; ಭಾರತದ ರಾಜಕೀಯದಲ್ಲಿ ಪ್ರೀತಿ, ಗೌರವ ಕಾಣೆಯಾಗಿದೆ: ರಾಹುಲ್ ಗಾಂಧಿ

ಆರ್‌ಎಸ್‌ಎಸ್ ನ ನೀತಿಗಳು ಮತ್ತು ಅದು ಭಾರತದ ಬಗ್ಗೆ ಹೊಂದಿರುವ ದೃಷ್ಟಿಕೋನ ಬಗ್ಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಮೂಲಭೂತವಾಗಿ ಕೆಲವು ರಾಜ್ಯಗಳು ಇತರ ರಾಜ್ಯಗಳಿಗಿಂತ ಕೀಳು, ಕೆಲವು ಭಾಷೆಗಳು ಇತರ ಭಾಷೆಗಳಿಗಿಂತ ಕೀಳು, ಕೆಲವು ಧರ್ಮಗಳು ಇತರ ಧರ್ಮಗಳಿಗಿಂತ ಕೀಳು, ಕೆಲವು ಸಮುದಾಯಗಳು ಇತರ ಸಮುದಾಯಗಳಿಗಿಂತ ಕೀಳು ಎಂದು ಹೇಳುವುದಾಗಿದೆ. ಇದು ಆರ್‌ಎಸ್‌ಎಸ್‌ನ ಸಿದ್ಧಾಂತವಾಗಿದೆ, ಇದು ಎಲ್ಲಾ ಕೀಳು ಭಾಷೆಗಳು, ಲೋಕಸಭೆ ಮತ್ತು ವಿಧಾನ ಸಭೆ ಚುನಾವಣೆಗಳಲ್ಲಿ ಕಂಡುಬರುವುದೇ ಇಂತಹ ಟೀಕೆಗಳು, ಹೋರಾಟಗಳೇ ಹೊರತು ಸೈದ್ಧಾಂತಿಕವಾಗಿ ಅಲ್ಲ ಎಂದರು.

ಹೋರಾಟವು ನಾವು ಯಾವ ರೀತಿಯ ಭಾರತವನ್ನು ಹೊಂದಲಿದ್ದೇವೆ ಎಂಬುದರ ಕುರಿತು ಆಗಿರಬೇಕು. ಅವರು ಯಾವುದೇ ಪ್ರದೇಶಕ್ಕೆ ಸೇರಿದವರಾಗಿದ್ದರೂ, ನಿಮ್ಮೆಲ್ಲರಿಗೂ ನಿಮ್ಮ ಇತಿಹಾಸವಿದೆ, ನಿಮ್ಮೆಲ್ಲರಿಗೂ ನಿಮ್ಮ ಸಂಪ್ರದಾಯವಿದೆ, ನಿಮ್ಮೆಲ್ಲರಿಗೂ ನಿಮ್ಮ ಭಾಷೆ ಇದೆ. ಅವುಗಳಲ್ಲಿ ಪ್ರತಿಯೊಂದೂ ಇತರರಂತೆಯೇ ಮುಖ್ಯವಾಗಿದೆ.

ಬಿಜೆಪಿಗೆ ಭಾರತದ ಬಗ್ಗೆ ತಿಳುವಳಿಕೆ ಇಲ್ಲ: ಬಿಜೆಪಿಗೆ ಭಾರತದ ಬಗ್ಗೆ ತಿಳುವಳಿಕೆ ಇಲ್ಲ ಎಂದು ಟೀಕಿಸಿದ ಅವರು, ಭಾರತವನ್ನು ರಾಜ್ಯಗಳ ಒಕ್ಕೂಟ ಎಂದು ಕರೆಯಲಾಗುತ್ತದೆ. ಸಂವಿಧಾನದಲ್ಲಿ ಇದನ್ನು ಸ್ಪಷ್ಟವಾಗಿ ಬರೆಯಲಾಗಿದೆ. ಭಾರತ, ರಾಜ್ಯಗಳ ಒಕ್ಕೂಟವಾಗಿದೆ. ಇದರರ್ಥ ಇದು ಭಾಷೆಗಳು, ಸಂಪ್ರದಾಯಗಳು, ಇತಿಹಾಸಗಳು ಇತ್ಯಾದಿಗಳ ಒಕ್ಕೂಟವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com