ಕೊಲಂಬೊ: ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಐತಿಹಾಸಿಕ ಎರಡನೇ ಸುತ್ತಿನ ಮತ ಎಣಿಕೆಯ ನಂತರ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ಡಿಸಾನಾಯಕೆ ಅವರನ್ನು ವಿಜಯಶಾಲಿ ಎಂದು ಚುನಾವಣಾ ಆಯೋಗ ಘೋಷಿಸಿದೆ.
ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರಮುನ ಪಕ್ಷದ ವಿಶಾಲ ರಂಗದ ನ್ಯಾಷನಲ್ ಪೀಪಲ್ಸ್ ಪವರ್ (NPP) ನಾಯಕ 56 ವರ್ಷದ ಡಿಸ್ಸಾನಾಯಕೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಗಿ ಜನ ಬಲವೇಗಯ (SJBಯ ಸಜಿತ್ ಪ್ರೇಮದಾಸ ಅವರನ್ನು ಸೋಲಿಸಿದರು.
ಹಾಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಮೊದಲ ಸುತ್ತಿನಲ್ಲೇ ಮತಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಿಸುವಲ್ಲಿ ವಿಫಲರಾದರು. ದಿಸಾನಾಯಕ ಅವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎನ್‌ಪಿಪಿ ತಿಳಿಸಿದೆ.
ಇದಕ್ಕೂ ಮೊದಲು, ನಿನ್ನೆ ಶನಿವಾರ ನಡೆದ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯು ಶೇಕಡಾ 50 ಕ್ಕಿಂತ ಹೆಚ್ಚು ಮತಗಳನ್ನು ಗಳಿಸದ ಹಿನ್ನೆಲೆಯಲ್ಲಿ ಎರಡನೇ ಸುತ್ತಿನ ಮತ ಎಣಿಕೆಗೆ ಚುನಾವಣಾ ಆಯೋಗವು ಆದೇಶ ನೀಡಿತ್ತು.
ದಿಸಾನಾಯಕೆ ಅವರು ದೇಶದ 9ನೇ ಅಧ್ಯಕ್ಷರಾಗಲಿದ್ದಾರೆ.
Advertisement