ಅಮೆರಿಕದಲ್ಲಿ ಭಾರತ ಇನ್ನೂ ಎರಡು ರಾಯಭಾರ ಕಚೇರಿ ತೆರೆಯಲಿದೆ: ಪ್ರಧಾನಿ ಮೋದಿ ಘೋಷಣೆ

ಭಾರತ, ಬೋಸ್ಟನ್ ಮತ್ತು ಲಾಸ್ ಏಂಜಲೀಸ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ನಿರ್ಧರಿಸಿದೆ" ಎಂದು ಪ್ರಧಾನಿ ಮೋದಿ ಹೇಳಿದರು.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ನ್ಯೂಯಾರ್ಕ್‌: ಭಾರತ, ಅಮೆರಿಕದಲ್ಲಿ ಇನ್ನೂ ಎರಡು ರಾಯಭಾರ ಕಚೇರಿ ತೆರೆಯಲು ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಘೋಷಿಸಿದ್ದಾರೆ.

ಇಂದು ನ್ಯೂಯಾರ್ಕ್ ನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಳೆದ ವರ್ಷ, ಸಿಯಾಟಲ್‌ನಲ್ಲಿ ನಮ್ಮ ಸರ್ಕಾರ ಹೊಸ ಕಾನ್ಸುಲೇಟ್ ತೆರೆಯಲಿದೆ ಎಂದು ನಾನು ಘೋಷಿಸಿದ್ದೆ. ಅದರಂತೆ ಈಗ ಅದನ್ನು ಪ್ರಾರಂಭಿಸಲಾಗಿದೆ ಎಂದರು.

"ನಾವು ಇನ್ನೂ ಎರಡು ಹೊಸ ರಾಯಭಾರ ಕಚೇರಿಗಳನ್ನು ತೆರೆಯುವ ಬಗ್ಗೆ ಸಲಹೆಗಳನ್ನು ಸಹ ಕೋರಿದ್ದೇವೆ. ನಿಮ್ಮ ಸಲಹೆಯ ನಂತರ ಭಾರತ, ಬೋಸ್ಟನ್ ಮತ್ತು ಲಾಸ್ ಏಂಜಲೀಸ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ನಿರ್ಧರಿಸಿದೆ" ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರಧಾನಿ ಮೋದಿ
AI ಎಂದರೆ ಅಮೆರಿಕನ್-ಇಂಡಿಯನ್ ಸ್ಪಿರಿಟ್, ಇದು ವಿಶ್ವದ ಹೊಸ ಶಕ್ತಿ: ನ್ಯೂಯಾರ್ಕ್​ನಲ್ಲಿ ಪ್ರಧಾನಿ ಮೋದಿ

ಜಗತ್ತಿಗೆ AI ಅಂದ್ರೆ ಕೃತಕ ಬುದ್ಧಿಮತ್ತೆ. ಆದರೆ, ನನಗೆ AI ಎಂದರೆ ಅಮೆರಿಕನ್-ಇಂಡಿಯನ್ ಸ್ಪಿರಿಟ್. ಇದು ವಿಶ್ವದ ಹೊಸ 'AI' ಶಕ್ತಿ...." ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com