Umrah visa: 'ಭಿಕ್ಷುಕರನ್ನು ಕಳುಹಿಸಬೇಡಿ'; ಪಾಕಿಸ್ತಾನಕ್ಕೆ ಸೌದಿ ಅರೇಬಿಯಾ ಎಚ್ಚರಿಕೆ

ಉಮ್ರಾ ಮತ್ತು ಹಜ್ ವೀಸಾದಡಿ ಭಿಕ್ಷುಕರು ಬರುತ್ತಿರುವ ಬಗ್ಗೆ ಗಂಭೀರವಾಗಿ ಮತ್ತು ತುರ್ತಾಗಿ ಗಮನ ಹರಿಸುವಂತೆ ಸೌದಿ ಅರೇಬಿಯಾ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.
Saudi Arabia warns Pakistan
ಪಾಕಿಸ್ತಾನಕ್ಕೆ ಸೌದಿ ಅರೇಬಿಯಾ ಎಚ್ಚರಿಕೆ
Updated on

ಇಸ್ಲಾಮಾಬಾದ್: ಉಮ್ರಾ ಮತ್ತು ಹಜ್ ವೀಸಾದಡಿ ಭಿಕ್ಷುಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸಬೇಡಿ ಎಂದು ಪಾಕಿಸ್ತಾನಕ್ಕೆ ಸೌದಿ ಅರೇಬಿಯಾ ಗಂಭೀರ ಎಚ್ಚರಿಕೆ ನೀಡಿದೆ.

ಉಮ್ರಾ ಮತ್ತು ಹಜ್ ವೀಸಾದಡಿ ಭಿಕ್ಷುಕರು ಬರುತ್ತಿರುವ ಬಗ್ಗೆ ಗಂಭೀರವಾಗಿ ಮತ್ತು ತುರ್ತಾಗಿ ಗಮನ ಹರಿಸುವಂತೆ ಸೌದಿ ಅರೇಬಿಯಾ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.

ಇಂಥ ಜನರಿಗೆ ವೀಸಾ ನೀಡದಂತೆ ಹಾಗೂ ಇವರು ಭಿಕ್ಷಾಟನೆಗಾಗಿ ತನ್ನ ದೇಶ ಪ್ರವೇಶಿಸದಂತೆ ತಡೆಯಬೇಕು ಎಂದು ಪಾಕಿಸ್ತಾನದ ಧಾರ್ಮಿಕ ವ್ಯವಹಾರಗಳ ಸಚಿವಾಲಯಕ್ಕೆ ಸೌದಿ ಅರೇಬಿಯಾ ಸೂಚನೆ ನೀಡಿದೆ.

ಹಜ್ ಯಾತ್ರೆಗೆ ಬಂದು ಭಿಕ್ಷೆ ಬೇಡುತ್ತಿರುವ ಪಾಕಿಸ್ತಾನಿಯರು!

ಮುಸ್ಲಿಮರ ಪವಿತ್ರ ಹಜ್ ಯಾತ್ರೆಗೆಂದು ಸೌದಿ ಅರೇಬಿಯಾಗೆ ಬರುವ ಕೆಲ ಪಾಕಿಸ್ತಾನಿಯರು ಅಲ್ಲಿ ಭಿಕ್ಷಾಟನೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ದೇಶದಲ್ಲಿ ಭಿಕ್ಷೆ ಬೇಡುತ್ತಿದ್ದ ಹಲವಾರು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದ ಸೌದಿ ಸರ್ಕಾರ ಅವರನ್ನು ಗಡಿಪಾರು ಮಾಡಿದೆ. ಅಲ್ಲದೆ ಪಾಕಿಸ್ತಾನಕ್ಕೆ ಎಚ್ಚರಿಕೆ ಕೂಡ ನೀಡಿದೆ.

ಸೌದಿ ಅರೆಬಿಯಾ ಹೇಳಿದ್ದೇನು?

ಉಮ್ರಾ ವೀಸಾದಲ್ಲಿ ಸೌದಿ ಅರೇಬಿಯಾಕ್ಕೆ ಬರುವ ಪಾಕಿಸ್ತಾನಿ ಭಿಕ್ಷುಕರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸೌದಿ ಅರೇಬಿಯಾ ಗಂಭೀರ ಕಳವಳ ವ್ಯಕ್ತಪಡಿಸಿದೆ ಎಂದು ಪಾಕಿಸ್ತಾನದ ಧಾರ್ಮಿಕ ವ್ಯವಹಾರಗಳ ಸಚಿವಾಲಯದ ಮೂಲಗಳು ದೃಢಪಡಿಸಿವೆ. ಪರಿಸ್ಥಿತಿ ನಿಯಂತ್ರಿಸದಿದ್ದರೆ, ಅದು ಪಾಕಿಸ್ತಾನದ ಉಮ್ರಾ ಮತ್ತು ಹಜ್ ಯಾತ್ರಿಕರ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಸೌದಿ ಅರೇಬಿಯಾ ಎಚ್ಚರಿಸಿದೆ ಎಂದು ಮೂಲಗಳು ತಿಳಿಸಿವೆ.

ಉಮ್ರಾ ಪ್ರವಾಸಕ್ಕೆ ಅನುಕೂಲ ಮಾಡಿಕೊಡುವ ಟ್ರಾವೆಲ್ ಏಜೆನ್ಸಿಗಳನ್ನು ನಿಯಂತ್ರಿಸಲು, ವೀಸಾ ನೀಡುವ ವಿಷಯದಲ್ಲಿ ಅವುಗಳ ಮೇಲೆ ಕಾನೂನು ಮೇಲ್ವಿಚಾರಣೆ ನಡೆಸಲು ಇಸ್ಲಾಮಾಬಾದ್​ನ ಧಾರ್ಮಿಕ ವ್ಯವಹಾರಗಳ ಸಚಿವಾಲಯವು 'ಉಮ್ರಾ ಕಾಯ್ದೆ' ಯನ್ನು ಜಾರಿಗೆ ತಂದಿದೆ.

Saudi Arabia warns Pakistan
ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರವನ್ನು ಮೊದಲ ಬಾರಿಗೆ ಸಾರ್ವಜನಿಕವಾಗಿ ಒಪ್ಪಿಕೊಂಡ ಪಾಕಿಸ್ತಾನ!

ಟ್ರಾವೆಲ್ಸ್ ಮಾಫಿಯಾದಿಂದ ಪಾಕಿಸ್ತಾನಕ್ಕೆ ಮುಜುಗರ

ಇನ್ನು ಪಾಕಿಸ್ತಾನದ ಭಿಕ್ಷುಕರು ಸೌದಿಯಲ್ಲಿ ಭಿಕ್ಷೆ ಬೇಡುವ ವಿಷಯವು ಶೆಹಬಾಜ್ ಷರೀಫ್ ಸರ್ಕಾರಕ್ಕೆ ತೀರಾ ಮುಜುಗರವನ್ನು ಉಂಟು ಮಾಡಿದೆ. ಇತ್ತೀಚೆಗೆ ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಮತ್ತು ಇಸ್ಲಾಮಾಬಾದ್​ನಲ್ಲಿರುವ ಸೌದಿ ರಾಯಭಾರಿ ನವಾಫ್ ಬಿನ್ ಸಯೀದ್ ಅಹ್ಮದ್ ಅಲ್-ಮಾಲ್ಕಿ ನಡುವಿನ ಸಭೆಯಲ್ಲಿ ಕೂಡ ಈ ವಿಷಯವನ್ನು ಚರ್ಚಿಸಿದ್ದರು.

ಸೌದಿ ಅರೇಬಿಯಾಕ್ಕೆ ಭಿಕ್ಷುಕರನ್ನು ಕಳುಹಿಸುವ ಮಾಫಿಯಾ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ನಖ್ವಿ ಭರವಸೆ ನೀಡಿದ್ದರು. ಹೆಚ್ಚಿನ ಸಂಖ್ಯೆಯ ಸಾಗರೋತ್ತರ ಪಾಕಿಸ್ತಾನಿಗಳಿಗೆ ಆತಿಥ್ಯ ನೀಡುವ ಹಲವಾರು ಗಲ್ಫ್ ದೇಶಗಳು ಪಾಕಿಸ್ತಾನಿ ನಾಗರಿಕರ ನಡವಳಿಕೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿವೆ ಮತ್ತು ಅವರನ್ನು ಪರಿಶೀಲಿಸುವ ಪ್ರಕ್ರಿಯೆಗಳನ್ನು ಮತ್ತಷ್ಟು ಬಿಗಿಗೊಳಿಸಿವೆ.

ಭಿಕ್ಷಾಟಣೆಗಾಗಿಯೇ ಸೌದಿಗೆ ತೆರಳುತ್ತಿದ್ದ ಪಾಕಿಸ್ತಾನಿಯರು!

ಕಳೆದ ತಿಂಗಳು ಕರಾಚಿ ವಿಮಾನ ನಿಲ್ದಾಣದಲ್ಲಿ 11 ಭಿಕ್ಷುಕರನ್ನು ಬಂಧಿಸಿ, ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ ಅವರನ್ನು ವಿಮಾನದಿಂದ ಇಳಿಸಲಾಗಿತ್ತು. ವಲಸೆ ಪ್ರಕ್ರಿಯೆಯ ಸಮಯದಲ್ಲಿ ಎಫ್ಐಎ ಅಧಿಕಾರಿಗಳು ಅವರನ್ನು ತಡೆದು ಪ್ರಶ್ನಿಸಿದ ನಂತರ ಅವರನ್ನು ಬಂಧಿಸಲಾಗಿತ್ತು. ಅವರೆಲ್ಲರೂ ಸೌದಿ ಅರೇಬಿಯಾದಲ್ಲಿ ಭಿಕ್ಷೆ ಬೇಡುವ ಉದ್ದೇಶದಿಂದ ಪ್ರಯಾಣಿಸುತ್ತಿದ್ದರು ಎಂದು ನಂತರ ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com