2008ರ 26/11 ಮುಂಬೈ ಭಯೋತ್ಪಾದಕ ದಾಳಿ: ಉಗ್ರ ರಾಣಾಗೆ ಹಿನ್ನಡೆ; ಭಾರತ ಹಸ್ತಾಂತರ ತಡೆ ಅರ್ಜಿ ತಿರಸ್ಕರಿಸಿದ ಅಮೆರಿಕಾ ಸುಪ್ರೀಂ ಕೋರ್ಟ್

ಮುಂಬೈ ದಾಳಿ ಬಳಿಕ ಪಾಕ್‌ನಿಂದ ಫಲಾಯನ ಮಾಡಿದ್ದ ರಾಣಾ, ಡೆನ್ಮಾರ್ಕ್‌ನಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದಕ್ಕಾಗಿ ಆತನನ್ನ ಅಮೆರಿಕದಲ್ಲಿ ಬಂಧಿಸಲಾಗಿತ್ತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನ್ಯೂಯಾರ್ಕ್: 26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್‌ ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಮೆರಿಕಾ ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ.

ಪ್ರಸ್ತುತ ರಾಣಾ ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್ ಬಂಧನ ಕೇಂದ್ರದಲ್ಲಿದ್ದು, ಕಳೆದ ಫೆಬ್ರವರಿಯಲ್ಲಿ ಒಂಬತ್ತನೇ ಸರ್ಕ್ಯೂಟ್‌ನ ಸರ್ಕ್ಯೂಟ್ ನ್ಯಾಯಾಧೀಶರಿಗೆ ಹಸ್ತಾಂತರವನ್ನು ತಡೆಹಿಡಿಯಲು ತುರ್ತು ಅರ್ಜಿಯನ್ನು ಸಲ್ಲಿಸಿದ್ದರು, ಆದರೆ, ನ್ಯಾಯಾಲಯ ಅದನ್ನು ತಿರಸ್ಕರಿಸಿತ್ತು.

ನಂತರ, ರಾಣಾ ಮತ್ತೆ ತುರ್ತು ಅರ್ಜಿಯನ್ನು ಸಲ್ಲಿಸಿ ವಿನಾಯಿತಿ ಕೇಳಿದ್ದರು. ಆದರೆ, ಸುಪ್ರೀಂ ಕೋರ್ಟ್ ಈ ಮನವಿಯನ್ನು ನಿರಾಕರಿಸಿದೆ.

2009ರಿಂದಲೂ ರಾಣಾನನ್ನ ಭಾರತಕ್ಕೆ ಕರೆತರಲು ಭಾರತ ಹೋರಾಡುತ್ತಿದೆ. ಇತ್ತೀಚೆಗೆ ಮೋದಿ ಅಮೆರಿಕಕ್ಕೆ ಭೇಟಿ ನೀಡಿದಾಗ ಟ್ರಂಪ್‌ ಮೋದಿ ಎದುರಲ್ಲೇ ಭಾರತಕ್ಕೆ ರಾಣಾನನ್ನ ಹಸ್ತಾಂತರಿಸುವುದಾಗಿ ಘೋಷಣೆ ಮಾಡಿದ್ದರು. ಇದೀಗ ಅಮೆರಿಕಾ ಸುಪ್ರೀಂಕೋರ್ಟ್‌ ರಾಣಾ ಮೇಲ್ಮನವಿಯನ್ನು ತಿರಸ್ಕರಿಸಿರುವುದು, ರಾಣಾನನ್ನು ಭಾರತಕ್ಕೆ ಮರಳಿ ಕರೆತರುವ ದಾರಿ ಮತ್ತಷ್ಟು ಸುಗಮವಾಗುವಂತೆ ಮಾಡಿದೆ.

ಸಂಗ್ರಹ ಚಿತ್ರ
ಮುಂಬೈ ದಾಳಿ ರೂವಾರಿ ತಹವ್ವೂರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ: ಭಾರತಕ್ಕೆ ಗೆಲುವು

ಮುಂಬೈ ದಾಳಿ ಬಳಿಕ ಪಾಕ್‌ನಿಂದ ಫಲಾಯನ ಮಾಡಿದ್ದ ರಾಣಾ, ಡೆನ್ಮಾರ್ಕ್‌ನಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದಕ್ಕಾಗಿ ಆತನನ್ನ ಅಮೆರಿಕದಲ್ಲಿ ಬಂಧಿಸಲಾಗಿತ್ತು.

2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ರಾಣಾ ಪಾತ್ರವಿದೆ ಎಂದು ಭಾರತ ಆರೋಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com