ಸಿಂಧೂ ನದಿ ನೀರು ಬಿಡದಿದ್ದರೆ ನಿಮ್ಮ ರಕ್ತ ಹರಿಯುತ್ತದೆ: ಭಾರತಕ್ಕೆ ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಬೆದರಿಕೆ

ಸಿಂಧೂ ನದಿ ಮೂಲಕ ನೀರು ಹರಿಯುತ್ತದೆಯೇ ಅಥವಾ ಅವರ ರಕ್ತ ಹರಿಯುತ್ತದೋ ಎಂದು ಮುಂದಿನ ದಿನಗಳಲ್ಲಿ ನಿರ್ಧಾರವಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಹೇಳಿದ್ದಾರೆ.
ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ
ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ
Updated on

ಇಸ್ಲಾಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು (IWT) ಸ್ಥಗಿತಗೊಳಿಸುವ ಭಾರತದ ನಿರ್ಧಾರಕ್ಕೆ ತೀಕ್ಷ್ಣ ಪ್ರತಿಕ್ರಿಯೆಯಾಗಿ, ನೀರು ನಿಲ್ಲಿಸಿದರೆ ನದಿಗಳಲ್ಲಿ ರಕ್ತ ಹರಿಯುತ್ತದೆ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ-ಜರ್ದಾರಿ ಬೆದರಿಕೆ ಹಾಕಿದ್ದಾರೆ.

ಸಿಂಧೂ ನದಿ ನೀರು ನಮ್ಮದು ಮತ್ತು ಅದು ನಮ್ಮದೇ ಆಗಿ ಉಳಿಯುತ್ತದೆ, ಅದರ ಮೂಲಕ ನೀರು ಹರಿಯುತ್ತದೆಯೇ ಅಥವಾ ಅವರ ರಕ್ತ ಹರಿಯುತ್ತದೋ ಎಂದು ಮುಂದಿನ ದಿನಗಳಲ್ಲಿ ನಿರ್ಧಾರವಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ತಮ್ಮ ತವರು ಸಿಂಧ್ ಪ್ರಾಂತ್ಯದ ಸುಕ್ಕೂರ್ ಪ್ರದೇಶದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ ಎಂದು ದ ನ್ಯೂಸ್ ವರದಿ ಮಾಡಿದೆ.

ಸಿಂಧೂ ನದಿಯು ಈ ಪ್ರಾಂತ್ಯದ ಮೂಲಕ ಹರಿಯುತ್ತದೆ. ಸಿಂಧೂ ಕಣಿವೆ ನಾಗರಿಕತೆಯ ನಗರವಾದ ಮೊಹೆಂಜೊ-ದಾರೋ ಅದರ ದಡದಲ್ಲಿ ಪ್ರವರ್ಧಮಾನಕ್ಕೆ ಬಂದಿತು. ಪ್ರಧಾನಿ ನರೇಂದ್ರ ಮೋದಿ ಭಾರತವು ಸಾವಿರಾರು ವರ್ಷಗಳಷ್ಟು ಹಳೆಯದಾದ ನಾಗರಿಕತೆಯ ಉತ್ತರಾಧಿಕಾರಿ ಎಂದು ಹೇಳಿಕೊಂಡಿದ್ದಾರೆ.ಆದರೆ ಆ ನಾಗರಿಕತೆಯು ಲರ್ಕಾನಾದ ಮೊಹೆಂಜೊ-ದಾರೋದಲ್ಲಿದೆ. ನಾವು ಅದರ ನಿಜವಾದ ಪಾಲಕರು ಅದನ್ನು ನಾವು ರಕ್ಷಿಸುತ್ತೇವೆ ಎಂದಿದ್ದಾರೆ.

ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ
ಸಿಂಧೂ ನದಿ ನೀರಿನ 'ಒಂದು ಹನಿಯೂ' ಪಾಕಿಸ್ತಾನಕ್ಕೆ ಹೋಗಲ್ಲ: ಕೇಂದ್ರ ಸರ್ಕಾರ ವಾಗ್ದಾನ; ನೀರು ತಡೆಗೆ ಮೂರು ಅಂಶಗಳ ಕಾರ್ಯತಂತ್ರ!

ಸಿಂಧ್ ಮತ್ತು ಸಿಂಧೂ ನದಿಯ ಜನರ ನಡುವಿನ ಶತಮಾನಗಳಷ್ಟು ಹಳೆಯ ಬಾಂಧವ್ಯವನ್ನು ಮೋದಿ ಮುರಿಯಲು ಸಾಧ್ಯವಿಲ್ಲ. ಭಾರತ ಸರ್ಕಾರ ಪಾಕಿಸ್ತಾನದ ನೀರಿನ ಮೇಲೆ ಕಣ್ಣಿಟ್ಟಿದೆ. ಪರಿಸ್ಥಿತಿಯು ನಾಲ್ಕು ಪ್ರಾಂತ್ಯಗಳಲ್ಲಿ ತಮ್ಮ ನೀರನ್ನು ರಕ್ಷಿಸಲು ಒಗ್ಗಟ್ಟನ್ನು ಬಯಸುತ್ತದೆ ಎಂದರು.

ಪಾಕಿಸ್ತಾನದ ಜನರು ಅಥವಾ ಅಂತಾರಾಷ್ಟ್ರೀಯ ಸಮುದಾಯವು ಮೋದಿಯವರ ಯುದ್ಧೋದ್ರೇಕ ಅಥವಾ ಸಿಂಧೂ ನದಿ ನೀರನ್ನು ಪಾಕಿಸ್ತಾನದಿಂದ ಬೇರೆಡೆಗೆ ತಿರುಗಿಸುವ ಯಾವುದೇ ಪ್ರಯತ್ನಗಳನ್ನು ಸಹಿಸುವುದಿಲ್ಲ. ಸಿಂಧೂ ನದಿಯ ದರೋಡೆಯನ್ನು ಸ್ವೀಕರಿಸಲಾಗುವುದಿಲ್ಲ ಎಂಬ ಸಂದೇಶವನ್ನು ನಾವು ಜಗತ್ತಿಗೆ ಸಾರುತ್ತೇವೆ. ಭಾರತದ ಆಕ್ರಮಣದಿಂದ ತಮ್ಮ ನದಿಯನ್ನು ರಕ್ಷಿಸಿಕೊಳ್ಳಲು ದೃಢನಿಶ್ಚಯದ ಹೋರಾಟಕ್ಕೆ ಸಿದ್ಧರಾಗುವಂತೆ ಬಿಲಾವಲ್ ಭುಟ್ಟೋ ತಮ್ಮ ಬೆಂಬಲಿಗರನ್ನು ಒತ್ತಾಯಿಸಿದರು.

ಪಾಕಿಸ್ತಾನದ ಅತ್ಯಂತ ಕಿರಿಯ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿರುವ ಬಿಲಾವಲ್, ಭಾರತದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದೇವೆ. ಪಾಕಿಸ್ತಾನಿಗಳು ಸ್ವತಃ ಭಯೋತ್ಪಾದನೆಯ ಬಲಿಪಶುಗಳಾಗಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com